HomePage_Banner
HomePage_Banner
HomePage_Banner
HomePage_Banner

ಪುತ್ತೂರು ಜಾತ್ರೆಯ ವರ್ಷಾವಧಿ ಉತ್ಸವ – ಬ್ರಹ್ಮರಥೋತ್ಸವ ಸೇವಾರ್ಥಿಗಳಿಗೆ ಪ್ರಸಾದ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವವು ಏ.೧೭ರಂದು ಭಕ್ತಿ ಸಂಭ್ರಮದೊಂದಿಗೆ ವೈಭವಯುತವಾಗಿ ನಡೆಯುವ ಮುಂದೆ ಬ್ರಹ್ಮರಥೋತ್ಸವ ಸೇವಾರ್ಥಿಗಳಿಗೆ ಪ್ರಸಾದ ವಿತರಣೆ ನಡೆಯಿತು.

ದೇವಳದ ತಂತ್ರಿ ಕುಂಟಾರು ರವೀಶ ತಂತ್ರಿಯವರು ಸೇವಾರ್ಥಿಗಳಿಗೆ ಬ್ರಹ್ಮಾರ್ಪಣೆ ಕಾರ್ಯ ನೆರವೇರಿಸಿ ಪ್ರಸಾದ ವಿತರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ ಅವರು ಸೇವಾರ್ಥಿಗಳಿಗೆ ಶಾಲು ಹೊದೆಸಿ ಗೌರವಿಸಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಸ್ಮರಣಿಗೆ ನೀಡಿ ಗೌರವಿಸಿದರು.

ಸುಮಾರು ೨೯ ಮಂದಿ ಭಕ್ತರು ಬ್ರಹ್ಮರಥೋತ್ಸವ ಸೇವೆ ಮಾಡಿದರು. ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಅವರಿಗೆ ಪ್ರಸಾದ ವಿತರಣೆ ಮಾಡಿದ ಬಳಿಕ ಬ್ರಹ್ಮರಥ ಸಮರ್ಪಣೆ ಮಾಡಿದ ಉದ್ಯಮಿ ಎನ್ ಮುತ್ತಪ್ಪ ರೈ ಅವರ ನೆನಪಿನಲ್ಲಿ ಅವರ ಸಹೋದರ ಕರುಣಾಕರ ರೈ ಅವರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಬಳಿಕ ಬ್ರಬ್ಮರಥೋತ್ಸವ ಸೇವಾರ್ಥಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಸದಸ್ಯರಾದ ಡಾ. ಸುಧಾ ಎಸ್ ರಾವ್, ರಾಮಚಂದ್ರ ಕಾಮತ್, ರಾಮ್‌ದಾಸ್ ಗೌಡ, ವೀಣಾ ಬಿ.ಕೆ, ಬಿ.ಐತ್ತಪ್ಪ ನಾಯ್ಕ್, ರವೀಂದ್ರನಾಥ ರೈ ಬಳ್ಳಮಜಲು, ಶೇಖರ್‌ನಾರಾವಿ, ದೇವಳದ ಮಾಜಿ ಆಡಳಿತ ಮೊಕ್ತೇಸರ ಎನ್.ಕೆ.ಜಗನ್ನಿವಾಸ ರಾವ್, ಮಾಜಿ ಮೊಕ್ತೇಸರ ಚಿದಾನಂದ ಬೈಲಾಡಿ ಸೇರಿದಂತೆ ಸಾಂಕೇತಿಕ ಭಕ್ತರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.