HomePage_Banner
HomePage_Banner
HomePage_Banner
HomePage_Banner

ನೆಲ್ಯಾಡಿ: ಸ್ವಚ್ಛತೆ, ತ್ಯಾಜ್ಯ ವಿಲೇವಾರಿ ಸಭೆ-ನಿರ್ವಹಣಾ ಸಮಿತಿ ರಚನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛತೆ ಹಾಗೂ ತ್ಯಾಜ್ಯ ವಿಲೇವಾರಿ ಬಗ್ಗೆ ವರ್ತಕರು ಹಾಗೂ ಗ್ರಾಮಸ್ಥರೊಂದಿಗೆ ಸಮಾಲೋಚನಾ ಸಭೆ ಎ.೧೭ರಂದು ಬೆಳಿಗ್ಗೆ ನೆಲ್ಯಾಡಿ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.

ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಚೇತನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಾಸ್ತಾವಿಕವಾಗಿ ಮಾತನಾಡಿದ ಪಿಡಿಒ ಮಂಜುಳ ಎನ್.,ರವರು ಗ್ರಾಮದಲ್ಲಿ ಸ್ವಚ್ಛತೆ ಹಾಗೂ ತ್ಯಾಜ್ಯ ವಿಲೇವಾರಿ ಕುರಿತಂತೆ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸಿ ವರ್ತಕರು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆ ಕರೆಯಲು ನಿರ್ಣಯಿಸಲಾಗಿತ್ತು. ಅದರಂತೆ ಈ ಸಭೆ ಕರೆಯಲಾಗಿದೆ. ಈಗಾಗಲೇ ಗ್ರಾಮ ಪಂಚಾಯಿತಿ ವತಿಯಿಂದ ಘನ ತ್ಯಾಜ್ಯ ಘಟಕ ನಿರ್ಮಾಣಗೊಂಡಿದ್ದು ತ್ಯಾಜ್ಯ ಸಂಗ್ರಹಕ್ಕೆ ವಾಹನವೂ ಖರೀದಿಯಾಗಿದೆ. ತ್ಯಾಜ್ಯ ಸಂಗ್ರಹ, ವಿಲೇವಾರಿ ಬಗ್ಗೆ ಸಲಹೆ ಸೂಚನೆ ನೀಡಬೇಕೆಂದು ಹೇಳಿದರು. ಜಿ.ಪಂ.ಸದಸ್ಯ ಸರ್ವೋತ್ತಮ ಗೌಡರವರು ಮಾತನಾಡಿ, ಸ್ವಚ್ಛತೆಗೆ ಕೇಂದ್ರ, ರಾಜ್ಯ ಸರ್ಕಾರ, ಜಿಲ್ಲಾ ಪಂಚಾಯಿತಿಯಿಂದ ಸಾಕಷ್ಟೂ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ಆದರೆ ಎಲ್ಲಿಯೂ ಸರಿಯಾಗಿ ಕಾರ್ಯಗತಗೊಳ್ಳುತ್ತಿಲ್ಲ. ಇದು ಕೇವಲ ಕಾರ್ಯಕ್ರಮಕ್ಕೆ ಸೀಮಿತಗೊಳ್ಳುತ್ತಿದೆ. ಹಿಂದೆ ಅಂಗನವಾಡಿಗಳಲ್ಲಿ ಪ್ಲಾಸ್ಟಿಕ್ ಸಂಗ್ರಹ ಮಾಡಲಾಗುತ್ತಿತ್ತು. ಸ್ವಚ್ಛತೆ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕೆಂದು ಹೇಳಿದರು.

ಸಮಿತಿ ರಚನೆ:
ಸಭೆಯ ಅಭಿಪ್ರಾಯದಂತೆ ಸ್ವಚ್ಛತೆ ಹಾಗೂ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು, ವರ್ತಕರು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ನಿರ್ವಹಣಾ ಸಮಿತಿ ರಚನೆ ಮಾಡಲಾಯಿತು. ಗ್ರಾ.ಪಂ.ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರನ್ನು ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಜಿ.ಪಂ.,ತಾ.ಪಂ.ಸದಸ್ಯರು, ಪಿಡಿಒ, ಗ್ರಾ.ಪಂ.ಸದಸ್ಯರು, ವರ್ತಕ ಸಂಘದ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ, ದೇವಸ್ಥಾನ, ಮಸೀದಿ, ಚರ್ಚ್‌ಗಳ ಅಧ್ಯಕ್ಷರು, ಶಾಲಾ ಮುಖ್ಯಶಿಕ್ಷಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಸದಸ್ಯರನ್ನು ಸಮಿತಿಗೆ ಸೇರಿಸಿಕೊಂಡು ತ್ಯಾಜ್ಯ ವಿಲೇವಾರಿ ಬಗ್ಗೆ ಚರ್ಚಿಸಲು ನಿರ್ಧರಿಸಲಾಯಿತು. ಚರಂಡಿ ದುರಸ್ತಿ, ಕರ ಪಾವತಿ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ತಾ.ಪಂ.ಸದಸ್ಯೆ ಉಷಾ ಅಂಚನ್, ಗ್ರಾ.ಪಂ.ಸದಸ್ಯರುಗಳಾದ ರವಿಪ್ರಸಾದ್ ಶೆಟ್ಟಿ, ಜಯಾನಂದ ಬಂಟ್ರಿಯಾಲ್, ಶ್ರೀಲತಾ ಸಿ.ಹೆಚ್., ಜಯಂತಿ, ಆನಂದ ಪಿಲವೂರು, ಯಾಕೂಬ್ ಸಲಾಂ ಪಡುಬೆಟ್ಟು, ರೇಷ್ಮಾಶಶಿ, ಪ್ರಕಾಶ್ ಪೂಜಾರಿ, ನೆಲ್ಯಾಡಿ ವರ್ತಕ ಸಂಘದ ಕಾರ್ಯದರ್ಶಿ ಪ್ರವೀಣ್ ದೋಂತಿಲ, ಉಪಾಧ್ಯಕ್ಷ ವಿ.ಜೆ.ಜೋಸೆಫ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವರ್ತಕರಾದ ಕೆ.ಪಿ.ತೋಮಸ್, ಗಣೇಶ್ ಕೆ.ರಶ್ಮಿ, ಜೋಸ್ ಕೆ.ಜೆ., ಜಿ.ವರ್ಗೀಸ್, ಲೂಯಿಸ್ ವರ್ಗೀಸ್, ಸುಲೈಮಾನ್ ಎನ್.ಎಸ್., ಲೋಕೇಶ್ ಬಾಣಜಾಲು, ಪದ್ಮನಾಭ ಪೂಜಾರಿ,ತಮ್ಮಣ್ಣ ರೈ, ಕುಶಾಲಪ್ಪ, ತೀರ್ಥೇಶ್ವರ ಉರ್ಮಾನು, ದಿನೇಶ್, ಶಂಕರ ಕುಂಬಾರ, ಅಬ್ದುಲ್ ಖಾದರ್ ಡ್ರೆಸ್‌ವೆಲ್, ಕೃಷ್ಣಪ್ಪ ಜಿ., ಮುನೀರ್, ಮಹಮ್ಮದ್ ಶರೀಫ್, ಅಬ್ರಹಾಂ ಎಂ.ಎಸ್., ಸೇವಾಪ್ರತಿನಿಧಿ ಹೇಮಾವತಿ ಜೆ.,ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ದೇವರಾಜ್ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳಾದ ಶಿವಪ್ರಸಾದ್, ಲೀಲಾವತಿ, ಸೋಮಶೇಖರ ಗೌಡ, ಅಬ್ದುಲ್‌ರಹಿಮಾನ್‌ರವರು ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.