HomePage_Banner
HomePage_Banner
HomePage_Banner
HomePage_Banner

ತಾ.ಪಂ., ಜಿ.ಪಂ. ಚುನಾವಣೆಗೆ ಮತದಾರರ ಕರಡು ಪಟ್ಟಿ ಸಿದ್ಧ | ಚುನಾವಣೆ ಮುಂದೂಡಿಕೆ ಸಾಧ್ಯತೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ಸಂಬಂಧಿಸಿ ಮತದಾರರ ಪಟ್ಟಿಯನ್ನು ಸಿದ್ಧಗೊಳಿಸಲಾಗಿದ್ದು, ಪಟ್ಟಿಯ ಕರಡು ಪ್ರತಿಯನ್ನು ಸಾರ್ವಜನಿಕರ ಅವಗಾಹಣೆಗಾಗಿ ತಾಲೂಕು ಕಚೇರಿಯ ನೋಟೀಸು ಬೋರ್ಡಿಗೆ ಹಾಕಲಾಗಿದೆ. ಸಾರ್ವಜನಿಕರು ಈ ಪಟ್ಟಿಯನ್ನು ಪರಿಶೀಲಿಸಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂದು ನೋಡಿ, ಇಲ್ಲದಿದ್ದರೆ ಚುನಾವಣಾ ಶಾಖೆಯಲ್ಲಿರುವ ಅಧಿಕಾರಿಗಳ ಗಮನಕ್ಕೆ ತರಬೇಕು. ಹೆಸರು ವ್ಯತ್ಯಾಸವಾಗಿದ್ದರೂ ಚುನಾವಣಾ ಶಾಖೆಯ ಗಮನಕ್ಕೆ ತಂದರೆ ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಗಿದೆ. ಮತದಾರರ ಪಟ್ಟಿಗೆ ಸೇರ್ಪಡೆಗೆ ಚುನಾವಣೆ ಘೋಷಣೆ ವರೆಗೆ ಅವಕಾಶವಿದೆ.

ಈಗಿನ ತಾ.ಪಂ., ಜಿ.ಪಂ. ಗಳ ಅವಧಿ ಮೇ. ಎರಡನೇ ವಾರದಲ್ಲಿ ಕೊನೆಗೊಳ್ಳುತ್ತಿದ್ದು, ಇಷ್ಟರೊಳಗೆ ಚುನಾವಣಾ ದಿನಾಂಕ ಘೋಷಣೆಯಾಗಬೇಕಾಗಿತ್ತು. ಆದರೆ ಕ್ಷೇತ್ರ ಮೀಸಲಾತಿ ಇನ್ನೂ ನಿಗದಿಯಾಗಿಲ್ಲ. ಕೊರೊನಾ ಉಲ್ಭಣಗೊಳ್ಳುತ್ತಿರುವ ಕಾರಣದಿಂದ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಮುಂದೂಡಲಾಗುತ್ತಿದೆ ಎಂಬ ವದಂತಿ ಇದೆ. ಮೊದಲು ೩ ತಿಂಗಳು ಮುಂದೂಡಿ, ಬಳಿಕ ಮಳೆಗಾಲದ ಕಾರಣಕ್ಕಾಗಿ ಮತ್ತೆ ಮೂರು ತಿಂಗಳು ಮುಂದೂಡಿ ಆರು ತಿಂಗಳ ಬಳಿಕ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಆಡಳಿತಾಧಿಕಾರಿಗಳ ನೇಮಕ
ಕೊರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ಮುಂದೂಡುವಂತೆ ಅಭಿಪ್ರಾಯ ಕೇಳಿ ಬರುತ್ತಿದೆ. ಚುನಾವಣೆ ಮುಂದೂಡುವ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಚುನಾವಣೆ ಮುಂದೂಡಿಕೆ ಅನಿವಾರ್ಯವಾದರೆ ಅವಧಿ ಮುಗಿಯುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.