HomePage_Banner
HomePage_Banner
HomePage_Banner
HomePage_Banner

ಪಾಪೆಮಜಲು ಶಾಲೆಯಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆ ಎ.೨೦ರಂದು ಪಾಪೆಮಜಲು ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು ಮಾತನಾಡಿ ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸಾಧನೆ ಮಾಡಬೇಕೆನ್ನುವ ಗುರಿಯನ್ನಿಟ್ಟುಕೊಂಡು ನಾವು ಈಗಾಗಲೇ ಕಾರ್ಯಾಚರಣೆಗೆ ಇಳಿದಿದೇವೆ. ಪ್ರತೀ ಶಾಲೆಯ ಶಿಕ್ಷಕರೂ ತಮ್ಮ ಶಾಲೆಗೆ ೧೦೦.ಶೇ ಫಲಿತಾಂಶ ಬರಬೇಕೆನ್ನುವ ಗುರಿಯೊಂದಿಗೆ ಅದಕ್ಕೆ ಬೇಕಾದ ಯೋಜನೆಗಳನ್ನು ಹಾಕಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.

ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್, ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಡಿವೈಎಸ್‌ಪಿ ಗಾನ ಪಿ ಕುಮಾರ್, ನಗರಸಭಾ ಪೌರಾಯುಕ್ತೆ ರೂಪಾ ಶೆಟ್ಟಿ, ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಜಿ.ಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಸಿಡಿಪಿಓ ಶ್ರೀಲತಾ,ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ತಾಲೂಕು ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಹಾಗೂ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಾಹಂ ಮಾತನಾಡಿದರು.

ವೇದಿಕೆಯಲ್ಲಿ ತಹಶೀಲ್ದಾರ್ ರಮೇಶ್ ಬಾಬು, ಅರಿಯಡ್ಕ ಗ್ರಾ.ಪಂ ಅಧ್ಯಕ್ಷೆ ಸೌಮ್ಯಾ ಬಾಲಸುಬ್ರಹ್ಮಣ್ಯ, ಉಪಾಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಪಾಪೆಮಜಲು ಪ್ರೌಢ ಶಾಲಾ ಮುಖ್ಯ ಶಿಕ್ಷಕ ಮೋನಪ್ಪ ಪೂಜಾರಿ, ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ತಿಲಕ್ ರೈ ಕುತ್ಯಾಡಿ, ಸದಸ್ಯ ಅಮ್ಮಣ್ಣ ರೈ ಉಪಸ್ಥಿತರಿದ್ದರು. ಇರ್ದೆ-ಉಪ್ಪಳಿಗೆ ಪ್ರೌಢಶಾಲಾ ಮುಖ್ಯ ಶಿಕ್ಷಕ ನಾರಾಯಣ ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಕ್ಷರ ದಾಸೋಹದ ಬಗ್ಗೆ ಅಕ್ಷರ ದಾಸೋಹ ಕೇಂದ್ರದ ಸುರೇಶ್ ಕುಮಾರ್ ಮಾಹಿತಿ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಹರಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ಉತ್ತೇಜನ ಕೈಪಿಡಿ ಬಿಡುಗಡೆ:
`ಉತ್ತೇಜನ’ ಎನ್ನುವ ಕನ್ನಡ ಮಾಧ್ಯಮ ಪ್ರಶ್ನೆ ಕೋಟಿ ಕೈಪಿಡಿಯನ್ನು ಶಾಸಕ ಸಂಜೀವ ಮಠಂದೂರು ಹಾಗೂ ಆಂಗ್ಲ ಮಾಧ್ಯಮ ಪ್ರಶ್ನೆ ಕೋಟಿ ಕೈಪಿಡಿಯನ್ನು ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಬಿಡುಗಡೆಗೊಳಿಸಿದರು. ಎಸ್ಸೆಸ್ಸೆಲ್ಸಿ ಪಾಸಿಂಗ್ ಪ್ಯಾಕೇಜ್ ಕೈಪಿಡಿಯನ್ನು ಜಿ.ಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಹಾಗೂ ಪರೀಕ್ಷಾ ಜಾಗೃತಿ ವಿಶೇಷ ಸಂಚಿಕೆಯನ್ನು ಅರಿಯಡ್ಕ ಗ್ರಾ.ಪಂ ಅಧ್ಯಕ್ಷೆ ಸೌಮ್ಯಾ ಬಾಲಸುಬ್ರಹ್ಮಣ್ಯ ಬಿಡುಗಡೆಗೊಳಿಸಿದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.