HomePage_Banner
HomePage_Banner
HomePage_Banner
HomePage_Banner

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಂಪ್ರೋಕ್ಷಣೆ, ಮಂತ್ರಾಕ್ಷತೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೆಯ ಬಳಿಕ ಎ.೨೦ರಂದು ಸಂಪ್ರೋಕ್ಷಣೆ ಮತ್ತು ರಾತ್ರಿ ಮಂತ್ರಾಕ್ಷತೆ ಕಾರ್ಯಕ್ರಮ ನಡೆಯಿತು.
 
ದೇವಳದಲ್ಲಿ ರಾತ್ರಿ ಪೂಜೆಯ ಬಳಿಕ ಬ್ರಹ್ಮಶ್ರೀ ವೇ ಮೂ ಕುಂಟಾರು ರವೀಶ ತಂತ್ರಿಯವರು ಮಂತ್ರಾಕ್ಷತೆಯನ್ನು ಭಕ್ತರಿಗೆ ವಿತರಿಸಿದರು. ಇದೇ ಸಂರ್ಭದಲ್ಲಿ ದೇವರ ನಿತ್ಯ ಬಲಿ ಉತ್ಸವ, ವಸಂತ ಕಟ್ಟೆಯಲ್ಲಿ ಪೂಜೆ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಪ್ರಧಾನ ಅರ್ಚಕರೂ ಸದಸ್ಯರೂ ಆಗಿರುವ ವಿ.ಎಸ್ ಭಟ್, ಸದಸ್ಯರಾದ ರವೀಂದ್ರನಾಥ ರೈ ಬಳ್ಳಮಜಲು, ಶೇಖರ್ ನಾರಾವಿ, ರಾಮಚಂದ್ರ ಕಾಮತ್, ಬಿ.ಐತ್ತಪ್ಪ ನಾಯ್ಕ್, ರಾಮ್‌ದಾಸ್ ಗೌಡ, ವೀಣಾ ಬಿ.ಕೆ. ಡಾ. ಸುಧಾ ಎಸ್ ರಾವ್, ದೇವಳದ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ದೇವಳದ ವಾಸ್ತು ಇಂಜಿನಿಯರ್ ಪಿ.ಜಿ.ಜಗನಿವಾಸ ರಾವ್ ಸೇರಿದಂತೆ ಹಲವಾರು ಮಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದೇವಳದ ಪೂಜೆಯ ಆರಂಭದಲ್ಲಿ ಜಾತ್ರೋತ್ಸವದಲ್ಲಿ ವಿವಿಧ ಸೇವ ಕಾರ್ಯಕ್ಕೆ ಪಾತ್ರರಾದ ದೇವಳದ ಅರ್ಚಕರು, ಪರಿಚಾರಕ ವರ್ಗಕ್ಕೆ ಸಂಪ್ರದಾಯದಂತೆ ಆರಂಭದಲ್ಲಿ ಹೊಸ ಬಟ್ಟೆಗಳನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ವಿತರಿಸಿದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.