HomePage_Banner
HomePage_Banner
HomePage_Banner
HomePage_Banner

ಎಸೆಸ್ಸೆಲ್ಸಿ ಮೌಲ್ಯಮಾಪನಾ ಕೇಂದ್ರಗಳ ಮೂಲಭೂತ ಸೌಕರ್ಯಗಳ ಪರಿಶೀಲನಾ ಕಾರ್ಯ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ತಾಲೂಕಿನಲ್ಲಿ ಎಸ್.ಎಸ್. ಎಲ್.ಸಿ ಮೌಲ್ಯಮಾಪನ ಕೇಂದ್ರವನ್ನು ಆರಂಭಿಸುವ ಸಲುವಾಗಿ ಮೌಲ್ಯಮಾಪನ ಕೇಂದ್ರಗಳಲ್ಲಿರುವ ಮೂಲಭೂತ ಸೌಕರ್ಯಗಳ ಪರಿಶೀಲನಾ ಕಾರ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇದರ ವತಿಯಿಂದ ಎ. 21ರಂದು ಕೈಗೊಳ್ಳಲಾಯಿತು.

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಸುದಾನ ವಸತಿ ಶಾಲೆಗಳಿಗೆ ಭೇಟಿ ನೀಡಲಾಯಿತು. ಮೌಲ್ಯಮಾಪನ ಕೇಂದ್ರದಲ್ಲಿ ಅಗತ್ಯವಾಗಿ ಬೇಕಾಗಿರುವ ಕೊಠಡಿಗಳ ಸಂಖ್ಯೆ, ಗಣಕಯಂತ್ರಗಳ ಸಂಖ್ಯೆ, ಅಂತರ್ಜಾಲ ಸಂಪರ್ಕ, ಶೌಚಾಲಯ ಹಾಗೂ ಇತರ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು.

ಶಿಕ್ಷಣ ಇಲಾಖೆಯ ಉಪನಿರ್ದೇಶಕ  ಮಲ್ಲೇಸ್ವಾಮಿ ಇವರ ಮಾರ್ಗದರ್ಶನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಎಸ್ ಎಸ್ ಎಲ್ ಸಿ ನೋಡಲ್ ಅಧಿಕಾರಿ  ಶಮಂತ ಇವರು ಮೂಲಭೂತ ಸೌಕರ್ಯಗಳ ಪರಿಶೀಲನೆಯನ್ನು ನಡೆಸಿದರು. ಎಲ್ಲಾ ವಿದ್ಯಾಸಂಸ್ಥೆಗಳ ಸಂಚಾಲಕರು ಉತ್ತಮ ಸಹಕಾರ ನೀಡಿದರು.

ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ದಿವಾಕರ್ ಆಚಾರ್ಯ ಹಾಗೂ ಪದಾಧಿಕಾರಿಗಳಾದ ನಾರಾಯಣ ಕೆ,  ರೂಪಕಲಾ, ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ  ಸುಂದರ ಗೌಡ, ಪ್ರೌಢಶಾಲಾ ಶಿಕ್ಷಕರ ಸಂಘದ  ಅಬ್ರಹಾಂ ಮತ್ತು ಪದಾಧಿಕಾರಿಗಳಾದ ಹರಿಕಿರಣ್,  ವಿನೋದ್ ಕುಮಾರ್ ಕೆ ಎಸ್,  ಅನ್ನಪೂರ್ಣ, ವಿಜಯ್ ಕುಮಾರ್ , ಶಿಕ್ಷಣ ಸಂಯೋಜಕ ಹರಿಪ್ರಸಾದ್, ದೈಹಿಕ ಶಿಕ್ಷಣ ಶಿಕ್ಷಕ ಮಾಮಚ್ಚನ್ ಇವರು ಸಹಕರಿಸಿದರು.
 

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.