HomePage_Banner
HomePage_Banner
HomePage_Banner
HomePage_Banner

ಡೀಮ್ಡ್ ಫಾರೆಸ್ಟ್‌ನಲ್ಲಿ ಎಷ್ಟು ವಸತಿ, ಕೃಷಿಯಿದೆ ಸುಪ್ರಿಂ ಕೋರ್ಟ್‌ಗೆ ವರದಿ ಮಾಡಲು ಪಟ್ಟಿ ಸಿದ್ಧತೆ – ಸಚಿವ ಅರವಿಂದ ಲಿಂಬಾವಳಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ರಾಜ್ಯದಲ್ಲಿರುವ ಡೀಮ್ಡ್ ಫಾರೆಸ್ಟ್ (ಭಾಗಶಃ ಅರಣ್ಯ) ಬಗ್ಗೆ ಮತ್ತೊಮ್ಮೆ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿ ಸಮಗ್ರ ವರದಿಯನ್ನು ಸಲ್ಲಿಸಲು ಇಲಾಖೆಗೆ ಸೂಚಿಸಿದ್ದೇನೆ. ಅಂತಿಮ ವರದಿ ಬಂದ ಮೇಲೆ ಅದನ್ನು ಸುಪ್ರೀಂ ಕೋರ್ಟ್‌ಗೆ ಅಫಿದವಿತ್ ಮೂಲಕ ಸಲ್ಲಿಸಲಾಗುವುದು ಎಂದು ರಾಜ್ಯ ಅರಣ್ಯ ಖಾತೆಯ ಸಚಿವ ಅರವಿಂದ ಲಿಂಬಾವಳಿ ಅವರು ಹೇಳಿದರು.

ಪುತ್ತೂರು ನಿರೀಕ್ಷಣಾ ಮಂದಿರದಲ್ಲಿ ಪತ್ರಿಕಾ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈಗಾಗಲೇ ಡೀಮ್ಡ್ ಫಾರೆಸ್ಟ್‌ನಲ್ಲಿ ಎಷ್ಟು ವಸತಿ, ಕೃಷಿ, ಸರಕಾರಿ ಮತ್ತು ಸಾರ್ವಜನಿಕ ವ್ಯವಸ್ಥೆಗಾಗಿ ಎಷ್ಟು ಜಾಗ ಬೇಕು ಎಂಬುದನ್ನು ನೋಡಿಕೊಂಡು ಅರಣ್ಯ ವ್ಯಾಪ್ತಿಯಲ್ಲಿ ಎಷ್ಟು ಉಳಿಸಿಕೊಳ್ಳಬಹುದು ಎಂದು ವರದಿಯಲ್ಲಿ ದಾಖಲಿಸುವ ಕುರಿತು ಸಿದ್ದತೆ ನಡೆಸಲಾಗಿದೆ. ಯಾಕೆಂದರೆ ಈಗಾಗಲೇ ಡೀಮ್ಡ್ ಫಾರೆಸ್ಟ್‌ನಲ್ಲಿ ಎಷ್ಟನ್ನು ಅರಣ್ಯಕ್ಕಾಗಿ ಉಳಿಸಿಕೊಳ್ಳುತ್ತೀರಿ ಎಂದು ನ್ಯಾಯಾಲಯ ಕೇಳಿದೆ. ಮುಂದೆ ಎಲ್ಲವನ್ನು ಪಟ್ಟಿ ಮಾಡಿ ನ್ಯಾಯಾಲಯಕ್ಕೆ ಅಫಿದಾವತ್ ಮಾಡಬೇಕಾಗಿದೆ ಎಂದು ಸಚಿವರು ಹೇಳಿದರು.

ಆಕ್ಸಿಜನ್ ಕೊರತೆ ತಡೆಯಲು ಕ್ರಮ:
ಕೊರೊನಾ ಸೋಂಕಿನಿಂದ ಬಳಲುತ್ತಿರುವವರ ಪ್ರಮಾಣ ವ್ಯಾಪಕವಾಗಿ ವೃದ್ಧಿಸುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗದಂತೆ ತಡೆಯಲು ಸರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಆಕ್ಸಿ‌ಜನ್, ವೆಂಟಿಲೇಟರ್ ವ್ಯವಸ್ಥೆ ಇರುವುದಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಅರವಿಂದ ಲಿಂಬಾವಳಿ ಹೇಳಿದರು.

ಕೋವಿಡ್ ನಿಯಮ ಅನಿವಾರ್ಯ ಬದಲಾವಣೆ:
ಸರಕಾರ ತನ್ನ ಕೋವಿಡ್ ಮಾರ್ಗದರ್ಶಿ ಸೂತ್ರಗಳನ್ನು ಆಗಾಗೆ ಬದಲಾಯಿಸುವ ಮೂಲಕ ಜನರನ್ನು ಗೊಂದಲ ಮತ್ತು ಆತಂಕಕ್ಕೆ ತಳ್ಳುತ್ತಿದೆ ಎಂದು ಪ್ರತಿಪಕ್ಷಗಳು ಆರೋಪ ಮಾಡುತ್ತಿವೆ. ಈ ಕುರಿತು ಪ್ರತಿಕ್ರಿಯಿಸಿದ ಸಚಿವರು ಕೊರೊನಾ ಕೂಡ ನಮ್ಮನ್ನು ಗೊಂದಲಕ್ಕೆ ದೂಡುತ್ತಿದೆ. ದಿನ ದಿನಕ್ಕೆ ಪ್ರಮಾಣ ಹೆಚ್ಚುತ್ತಿರುವ ಕಾರಣ ಸರಕಾರ ಅನಿವಾರ್ಯವಾಗಿ ನಿಯಮಗಳಲ್ಲಿ ಬದಲಾವಣೆ ಮಾಡಬೇಕಾಗಿ ಬಂದಿದೆ. ಸಮಾಜದ ಆರೋಗ್ಯ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಎಲ್ಲರೂ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಸರಕಾರದ ಜತೆ ಕೈಜೋಡಿಸಬೇಕು ಎಂದರು. ಸಚಿವ ಎಸ್. ಅಂಗಾರ, ಶಾಸಕ ಸಂಜೀವ ಮಠಂದೂರು, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ರಾಜ್ಯ ಸಪಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಶಿವಣ್ಣ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.