HomePage_Banner
HomePage_Banner
HomePage_Banner
HomePage_Banner

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬಿಇಒರಿಂದ ತಾಲೂಕಿನ 5ಸಾವಿರ ವಿದ್ಯಾರ್ಥಿಗಳಿಗೆ ಪತ್ರಕ್ಕೆ ಶಿಕ್ಷಣ ಸಚಿವರ ಶ್ಲಾಘನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೋರ್ಡ್ ಪರೀಕ್ಷೆಯ ಆರಂಭಿಕ ಮೆಟ್ಟಿಲು ಎಂಬಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪರೀಕ್ಷಾ ಜಾಗೃತಿಯ ವಿಶೇಷ ಕಾರ್ಯಕ್ರಮ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್ ಆರಂಭಿಸಿರುವ ಕುರಿತು ಮಾಹಿತಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶಿಕ್ಷಣಾಧಿಕಾರಿಗಳಿಗೆ ಪೋನ್ ಕರೆ ಮಾಡಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.


ತಾಲೂಕಿನ 5 ಸಾವಿರ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್ ಅವರು ಪರೀಕ್ಷಾ ಜಾಗೃತಿಗೆ ಉತ್ತೇಜನ ಎಂಬ ಪತ್ರ ಬರೆದಿದ್ದರು. ಈ ಕುರಿತು ಸುದ್ದಿ ಬಿಡುಗಡೆ ಪತ್ರಿಕೆ ಮತ್ತು ಮೀಡಿಯಾ ಬುಲೆಟಿನ್‌ನಲ್ಲಿ ಪ್ರಸಾರವಾಗಿತ್ತು. ಇದನ್ನು ಗಮನಿಸಿದ ಶಿಕ್ಷಣ ಸಚಿವರು ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿದ್ಯಾರ್ಥಿಗಳಿಗೆ ಬರೆದ ಪತ್ರವೊಂದನ್ನು ತರಿಸಿ ಓದಿದ್ದಾರೆ. ಎ.೨೩ರಂದು ಬೆಳಿಗ್ಗೆ ಶಿಕ್ಷಣ ಸಚಿವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕರೆ ಮಾಡಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಸಂದರ್ಭದಲ್ಲಿ ಉತ್ತಮ ಕೆಲಸ ಮಾಡಿದ್ದೀರಿ. ಈ ಸಮಯದಲ್ಲಿ ಇಂತಹ ಸ್ಪೂರ್ತಿ ತುಂಬುವ ಕೆಲಸ ಅಗತ್ಯವಾಗಿ ಬೇಕಾಗಿತ್ತು ಎಂದ ಅವರು ವಿದ್ಯಾರ್ಥಿಗಳಿಗೆ ಕಳುಹಿಸಿದ ಪತ್ರದ ಪ್ರತಿಯೊಂದು ನನಗೂ ಕಳುಹಿಸಿ ಕೊಡಿ ಎಂದು ತಿಳಿಸಿರುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.