HomePage_Banner
HomePage_Banner
HomePage_Banner
HomePage_Banner

ಕೊರೋನಾ ಮುಕ್ತಗ್ರಾಮದಲ್ಲಿ ವ್ಯಾಪಾರಕ್ಕೆ ಅವಕಾಶಕ್ಕೆ ಮನವಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಉಪ್ಪಿನಂಗಡಿ: ಕೊರೋನಾ ಮುಕ್ತ ಗ್ರಾಮಗಳಲ್ಲಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕೆಂದು ಉಪ್ಪಿನಂಗಡಿಯ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಕಂದಾಯ ನಿರೀಕ್ಷಕರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.

ಸಂಘದ ಅಧ್ಯಕ್ಷ ಪ್ರಶಾಂತ್ ಡಿಕೋಸ್ತಾ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿದ ನಿಯೋಗವು, ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರಕಾರವು ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಆದರೆ ಕೊರೋನಾ ಪ್ರಕರಣಗಳೇ ಇಲ್ಲದ ಗ್ರಾಮಗಳಲ್ಲಿ ವ್ಯಾಪಾರ ವಹಿವಾಟುಗಳಿಗೆ ನಿರ್ಬಂಧ ಹೇರಿರುವುದು ವ್ಯಾಪಾರಸ್ಥರನ್ನು ಸಂಕಷ್ಟಕ್ಕೆ ಸಿಲುಕಿಸುವಂತೆ ಮಾಡಿದೆ. ಕಳೆದ ವರ್ಷ ಕೊರೋನಾದ ಮೊದಲ ಹಂತದಲ್ಲೂ ವ್ಯಾಪಾರಸ್ಥರು ಭಾರೀ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದೀಗ ಎರಡನೇ ಹಂತದಲ್ಲೂ ಗ್ರಾಮೀಣ ಪ್ರದೇಶದಲ್ಲಿ ಸಣ್ಣಪುಟ್ಟ ವ್ಯಾಪಾರಗಳನ್ನು ಮಾಡಿಕೊಂಡು ಬರುತ್ತಿರುವ ವ್ಯಾಪಾರಸ್ಥರ ವ್ಯಾಪಾರಕ್ಕೆ ನಿರ್ಬಂಧ ಹೇರಿರುವುದರಿಂದ ಅವರಿಗೆ ಜೀವನ ಸಾಗಿಸಲು ಕಷ್ಟವಾಗಿದೆ. ಹೆಚ್ಚಿನ ವ್ಯಾಪಾರಸ್ಥರು ಸಾಲ ಮಾಡಿ ಮುಂಬರುವ ರಂಜಾನ್ ಹಬ್ಬಕ್ಕಾಗಿ ಬೇಕಾದ ಉಡುಪು, ಪಾದರಕ್ಷೆ ಸೇರಿದಂತೆ ಇನ್ನಿತರ ಫ್ಯಾನ್ಸಿ ವಸ್ತುಗಳನ್ನು ಕೊಂಡು ದಾಸ್ತಾನು ಇಟ್ಟಿದ್ದಾರೆ. ಮೊದಲೇ ಸಂಕಷ್ಟದಲ್ಲಿರುವ ಇವರಿಗೆ ಇದೀಗ ಅಂಗಡಿಗಳನ್ನು ತೆರೆಯಲು ಬಿಡದಿದ್ದಲ್ಲಿ ಅವರು ಇನ್ನಷ್ಟು ತೊಂದರೆಗೆ ಸಿಲುಕಲಿದ್ದಾರೆ. ಆದ್ದರಿಂದ ಸರಕಾರ ಈ ಆದೇಶವನ್ನು ಮರುಪರಿಶೀಲಿಸಿ ಗ್ರಾಮೀಣ ಭಾಗದಲ್ಲಿ ವ್ಯಾಪಾರಕ್ಕೆ ಅನುವು ಮಾಡಿಕೊಡಬೇಕೆಂದು ಮನವಿಯಲ್ಲಿ ತಿಳಿಸಿದೆ.
ಉಪ್ಪಿನಂಗಡಿ ಹೋಬಳಿ ಕಂದಾಯ ನಿರೀಕ್ಷಕ ವಿಜಯವಿಕ್ರಮ್ ಮನವಿ ಸ್ವೀಕರಿಸಿದರು. ಮನವಿ ಸಲ್ಲಿಸಿದ ನಿಯೋಗದಲ್ಲಿ ಸಂಘದ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಯುನಿಕ್, ಉಪಾಧ್ಯಕ್ಷ ಶಬೀರ್ ಕೆಂಪಿ, ರಿಯಾಝ್ ಕಡವಿನಬಾಗಿಲು ಇದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.