HomePage_Banner
HomePage_Banner
HomePage_Banner
HomePage_Banner

ನಾಳೆಯಿಂದ ರಾಜ್ಯಾದ್ಯಂತ ಲಾಕ್ಡೌನ್ ಜಾರಿ – 14 ದಿನಗಳ ನಂತರ ಮುಂದಿನ‌ ನಿರ್ಧಾರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಕೆಲವೇ ಕ್ಷಣಗಳಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿಯಿಂದ ಸುತ್ತೋಲೆ ಪ್ರಕಟ

ಪುತ್ತೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವುದಕ್ಕಾಗಿ ಕಟ್ಟುನಿಟ್ಟಿನ ಕಾನೂನು ಜಾರಿಗೆ ತಂದಿರುವ ರಾಜ್ಯ ಸರಕಾರ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ನಂತರ ಎಪ್ರಿಲ್ 27ರ ಸಂಜೆಯಿಂದ ಕರ್ನಾಟಕ ರಾಜ್ಯಾದ್ಯಂತ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಿದೆ.

ಕೊರೊನಾ ಕರ್ಫ್ಯೂ ಎಂಬ ಹೆಸರಿನಲ್ಲಿ ಈ ಲಾಕ್ಡೌನ್ ಜಾರಿಯಲ್ಲಿ ಇರಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇದ್ದು ಆ‌ ಬಳಿಕ ಎಲ್ಲಾ ವ್ಯವಹಾರಗಳು ಬಂದ್ ಆಗಲಿದೆ. ಸಾರಿಗೆ ಸಂಚಾರ ಸಹಿತ ಎಲ್ಲಾ ವ್ಯವಹಾರಗಳು ಸ್ತಬ್ಧಗೊಳ್ಳಲಿದೆ. ಕೃಷಿ ಚಟುವಟಿಕೆ, ಅಂತರಾಜ್ಯ ವಾಣಿಜ್ಯ ಸಾಗಾಟಕ್ಕೆ ನಿರ್ಬಂಧ ಇರುವುದಿಲ್ಲ. ಕೆಲವೇ ಹೊತ್ತಿನಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿಯವರು ಪರಿಷ್ಕೃತ ಸುತ್ತೋಲೆ ಹೊರಡಿಸಲಿದ್ದು ಮಾರ್ಗಸೂಚಿ ಪ್ರಕಟಿಸಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.