HomePage_Banner
HomePage_Banner
HomePage_Banner
HomePage_Banner

ಕಾಣಿಯೂರು ಪಂಚಾಯತ್ ವ್ಯಾಪ್ತಿಯಲ್ಲಿ 16 ಕೋವಿಡ್ ಪಾಸಿಟಿವ್ ಪ್ರಕರಣ | ಕಾಣಿಯೂರು ಗ್ರಾಮ ಪಂಚಾಯತ್‌ನಲ್ಲಿ ಕೋವಿಡ್ 19 ಕಾರ್ಯಪಡೆ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಆರೋಗ್ಯ, ಭವಿಷ್ಯದ ದೃಷ್ಠಿಯಿಂದ ಸರಳ ಕಾರ್ಯಕ್ರಮ ನಡೆಸಿ- ಡಾ. ರಾಮಕೃಷ್ಣ ರಾವ್
  • ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ – ಗಣೇಶ್ ಉದನಡ್ಕ
  • ಹೊರ ರಾಜ್ಯ, ಜಿಲ್ಲೆಗಳಿಂದ ಬಂದವರು ೧೪ ದಿನ ಮನೆಯಲ್ಲಿಯೇ ಇರಬೇಕು- ದೇವರಾಜ್

ಚಿತ್ರ: ಸುಧಾಕರ್ ಕಾಣಿಯೂರು

ಕಾಣಿಯೂರು: ಕೊರೋನಾ ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕಾಣಿಯೂರು ಗ್ರಾ.ಪಂ, ವತಿಯಿಂದ ಕೋವಿಡ್ ೧೯ ಕಾರ್ಯಪಡೆ ಸಭೆಯು ಎ ೩೦ರಂದು ಕಾಣಿಯೂರು ಗ್ರಾ.ಪಂ, ಸಭಾಂಗಣದಲ್ಲಿ ನಡೆಯಿತು.

ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಮಾತನಾಡಿ, ಕಾಣಿಯೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾಣಿಯೂರು, ಚಾರ್ವಾಕ ಗ್ರಾಮಗಳಲ್ಲಿ ಈಗಾಗಲೇ ಹೊಸದಾಗಿ ೧೬ ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ. ಮದುವೆ ಇನ್ನಿತರ ಸಭೆ ಸಮಾರಂಭಗಳಿಗೆ ಸರಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಸರಳವಾಗಿ ನಡೆಸಿದರೆ ಮಾರಕ ರೋಗ ಕೊರೋನಾ ಹರಡುವಿಕೆಯನ್ನು ತಡೆಗಟ್ಟಲು ಸಾಧ್ಯವಿದೆ. ನಮ್ಮ ಆರೋಗ್ಯ, ಭವಿಷ್ಯದ ದೃಷ್ಠಿಯಿಂದ ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿಕೊಂಡು ವ್ಯವಹರಿಸುವುದು ಒಳ್ಳೆಯದು. ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಜೊತೆಗೆ ಆಯಾ ಗ್ರಾಮಗಳಲ್ಲಿ ಕೋವಿಡ್ ಟೆಸ್ಟ್ ಕ್ಯಾಂಪ್ ಮಾಡಿದರೆ ಒಳ್ಳೆಯದು ಎಂದ ವೈದ್ಯಾಧಿಕಾರಿಯವರು, ಈಗಾಗಲೇ ಕೊರೋನಾ ಪಾಸಿಟಿವ್ ಬಂದವರನ್ನು ಆಶಾ ಕಾರ್ಯಕರ್ತೆಯರು ದೂರವಾಣಿಯ ಮೂಲಕ ಆರೋಗ್ಯದ ಉದ್ದೇಶದಿಂದ ಹೆಚ್ಚಿನ ಚಿಕಿತ್ಸೆಯನ್ನು ನೀಡುವ ನಿಟ್ಟಿನಲ್ಲಿ ಅವರನ್ನು ವಿಚಾರಿಸಿಕೊಂಡು ಇರಬೇಕು, ಈ ಬಗ್ಗೆ ವೈದ್ಯಾಧಿಕಾರಿಯವರಿಗೆ ಮಾಹಿತಿ ನೀಡಬೇಕು ಎಂದರು.

ಕಾಣಿಯೂರು ಗ್ರಾ.ಪಂ. ಉಪಾಧ್ಯಕ್ಷ ಗಣೇಶ್ ಉದನಡ್ಕ ಮಾತನಾಡಿ, ಕಾಣಿಯೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಲೇ ಇದೆ. ಮದುವೆ ಕಾರ್ಯಕ್ರಮಗಳಲ್ಲಿ ಸರಕಾರದ ನಿಯಮದಂತೆ ಹೆಚ್ಚು ಜನ ಸೇರಬಾರದು. ಈ ಬಗ್ಗೆ ಆಶಾ ಕಾರ್ಯಕರ್ತೆಯರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಕಾರ್ಯಕ್ರಮಗಳ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಕಾರ್ಯಕ್ರಮಗಳ ಮೊದಲೇ ಸೂಚನೆ ನೀಡಬೇಕು. ಅಲ್ಲದೇ ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಬಂದಿರುವವರ ಮಾಹಿತಿಯನ್ನು ಪಡೆದುಕೊಂಡು ಅವರು ಕಡ್ಡಾಯವಾಗಿ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು ಎಂದವರು ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬಂದವರ ಮೇಲೆ ನಿಗಾ ಅಗತ್ಯ ಎಂದರು.

ಕಾಣಿಯೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದೇವರಾಜ್ ಮಾತನಾಡಿ, ಹೊರ ರಾಜ್ಯ, ಜಿಲ್ಲೆಗಳಿಂದ ಬಂದವರು ೧೪ ದಿನ ಕಡ್ಡಾಯವಾಗಿ ಮನೆಯಲ್ಲಿಯೇ ಇರಬೇಕು. ಕೋವಿಡ್ ೧೯ ತಡೆಗಟ್ಟುವ ನಿಟ್ಟಿನಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುವ ಮದುವೆ ಇನ್ನಿತರ ಕಾರ್ಯಕ್ರಮಗಳನ್ನು ಸರಳ ರೀತಿಯಲ್ಲಿ ನಡೆಸುವ ಉದ್ದೇಶದಿಂದ ಕಡ್ಡಾಯವಾಗಿ ಅನುಮತಿಯನ್ನು ಪಡೆದುಕೊಳ್ಳಬೇಕು. ಮದುವೆ ಕಾರ್ಯಕ್ರಮಗಳಿಗೆ ಸರಕಾರದ ನಿಯಮದಂತೆ ೫೦ಕ್ಕಿಂತ ಹೆಚ್ಚು ಜನ ಸೇರಬಾರದು ಎಂದರು. ಕಾಣಿಯೂರು ಗ್ರಾ.ಪಂ. ಅಧ್ಯಕ್ಷೆ ಲಲಿತಾ ದರ್ಖಾಸು, ಆಶಾ ಕಾರ್ಯಕರ್ತೆಯರಾದ ಯಮುನಾ ಚಾರ್ವಾಕ, ಭಾರತಿ ನಾಣಿಲ, ಗೀತಾ ಮುದುವ, ಕುಸುಮ ಕಾಣಿಯೂರು ಉಪಸ್ಥಿತರಿದ್ದರು. ಸಿಬ್ಬಂದಿ ತಿಮ್ಮಪ್ಪ ಗೌಡ ಬೀರುಕುಡಿಕೆ ಸ್ವಾಗತಿಸಿ, ಪಿಡಿಓ ದೇವರಾಜ್ ವಂದಿಸಿದರು

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.