ಹೊರ ಜಿಲ್ಲೆ, ರಾಜ್ಯದಿಂದ ಬಂದವರು ಸ್ವಯಂ ಪ್ರೇರಿತರಾಗಿ ಕ್ವಾರಂಟೈನ್‌ಗೆ ಎ.ಸಿ ಸೂಚನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋವಿಡ್ 19 ರ ಎರಡನೇ ಅಲೆಯು ರಾಜ್ಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹೊರಜಿಲ್ಲೆಯಿಂದ ಹಾಗೂ ಹೊರ ರಾಜ್ಯಗಳಿಂದ ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕುಗಳಿಗೆ ಆಗಮಿಸುವ ಪ್ರಯಾಣಿಕರು ತಮ್ಮ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಸ್ವಯಂ ಪ್ರೇರಿತರಾಗಿ ಕ್ಯಾರಂಟೈನ್ ಆಗುವಂತೆ ಪುತ್ತೂರು ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್ ಅವರು ತಿಳಿಸಿದ್ದಾರೆ.

ಹೊರ ರಾಜ್ಯ, ಜಿಲ್ಲೆಯಿಂದ ಬಂದಿರುವವರು ತಮ್ಮ ವ್ಯಾಪ್ತಿಯ ಆಶಾಕಾರ್ಯಕರ್ತಯರಲ್ಲಿ ತಮ್ಮ ವಿವರವನ್ನು ನೀಡುವಂತೆ ತಿಳಿಸಲಾಗಿದೆ. ಇದರಿಂದ ಆರೋಗ್ಯ ಇಲಾಖೆಯ ಮೂಲಕ ನಿಮ್ಮ ಆರೋಗ್ಯದ ಮೇಲ್ವಿಚಾರಣೆ ಮಾಡಲು ಅನುಕೂಲವಾಗುತ್ತದೆ ಎಂದು ಈ ಮೂಲಕ ಎಲ್ಲಾ ಸಾರ್ವಜನಿಕರಿಗೆ ತಿಳಿಯಪಡಿಸಲಾಗಿದೆ. ನಿಮ್ಮ ಮನೆಯ ಸುತ್ತ ಮುತ್ತ ಯಾರಾದರೂ ಹೊರಜಿಲ್ಲೆಯಿಂದ ಹಾಗೂ ಹೊರ ರಾಜ್ಯಗಳಿಂದ ಪ್ರಯಾಣಿಕರು ಆಗಮಿಸಿದರೆ ಅಂತಹವರ ವಿವರವನ್ನು ಆಶಾ ಕಾರ್ಯಕರ್ತಯರಲ್ಲಿ ನೀಡಿ ಸಹಕರಿಸುವಂತೆ ಅವರು ವಿನಂತಿಸಿದ್ದು ಹೆಚ್ಚಿನ ಮಾಹಿತಿಗಾಗಿ ಸುಳ್ಯ ತಾಲೂಕು ವೈದ್ಯಾಧಿಕಾರಿ ಡಾ. ನಂದಕುಮಾರ್ ಮೊ: 9448549739, ಪುತ್ತೂರು ತಾಲೂಕು ವೈದ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ ಮೊ:  9448445853 ಮತ್ತು ಬೆಳ್ತಂಗಡಿ ತಾಲೂಕು ವೈದ್ಯಾಧಿಕಾರಿ ಡಾ. ಕಲಾಮಧು ಮೊ: 9845967576 ಅವರನ್ನು ಸಂಪರ್ಕಿಸುವಂತೆ ಸಹಾಯಕ ಕಮೀಷನರ್ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.