HomePage_Banner
HomePage_Banner
HomePage_Banner
HomePage_Banner

ಪುತ್ತೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ ಸುಳ್ಯದ ಮಂಡೆಕೋಲಿನಲ್ಲಿ ದಾಳಿ- ಕಳ್ಳಭಟ್ಟಿ ಸಾರಾಯಿ ಪತ್ತೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ ಶಿವಪ್ರಸಾದ್ ಅವರ ನೇತೃತ್ವದಲ್ಲಿ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಕಾಯರ್ತೊಡಿ ಎಂಬಲ್ಲಿ ನಡೆಸಿದ ದಾಳಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ಮತ್ತು 35 ಲೀಟರ್ ಗೇರು ಹಣ್ಣಿನ ಹುಳಿ ರಸ ಪತ್ತೆ ಮಾಡಿದ ಮತ್ತು ಆರೋಪಿಯನ್ನು ಬಂಧಿಸಿದ ಘಟನೆ ಮೇ.1ರಂದು ನಡೆದಿದೆ.

ಮಂಡೆಕೋಲು ಗ್ರಾಮದ ಕಾಯರ್ತೊಡಿ ನಿವಾಸಿ ವಿಶ್ವನಾಥ ಗೌಡ ಎಂಬವರು ಆರೋಪಿಯಾಗಿದ್ದು, ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ನಡೆಸಿದ ದಾಳಿಯಿಂದ ಆರೋಪಿಯ ಮನೆಯ ಬಳಿ ಕೊಟ್ಟಿಯಲ್ಲಿ 2 ಲೀಟರ್ ಅಕ್ರಮ ಕಳ್ಳಭಟ್ಟಿ ಮತ್ತು ಸುಮಾರು 35 ಲೀಟರ್ ಗೇರು ಹಣ್ಣಿನ ಹುಳಿ ರಸ ಪತ್ತೆಯಾಗಿದೆ. ಕಾರ್ಯಾಚರಣೆ ವೇಳೆ ಆರೋಪಿ ಪರಾರಿಯಾಗಿದ್ದಾರೆ. ಅಬಕಾರಿ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ ಶಿವಪ್ರಸಾದ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಬಕಾರಿ ಪುತ್ತೂರು ಉಪವಿಭಾಗದ ಉಪನಿರೀಕ್ಷಕ ಅಂಗಾರ, ಅಬಕಾರಿ ರಕ್ಷಕರಾದ ವಿಜಯ, ಪ್ರಶಾಂತ್, ಎಲ್ಲಪ್ಪ, ದಿನೇಶ್ ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.