HomePage_Banner
HomePage_Banner
HomePage_Banner
HomePage_Banner

ಕೋವಿಡ್‌ 2ನೇ ಅಲೆ ಸೆಮಿಲಾಕ್‌ಡೌನ್  ಹಿನ್ನಲೆ :  ವಾಹನ  ತೆರಿಗೆ ಪಾವತಿಸಲು ಅವಧಿ ವಿಸ್ತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
ಪುತ್ತೂರು ‍ : ಕೋವಿಡ್‌ ಎರಡನೇ ಅಲೆ ತೀವ್ರ ರೀತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್‌ಡೌನ್ ಜಾರಿಯಲ್ಲಿದೆ. 
ಜನರ ಓಡಾಟಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದ್ದು ಈ ನಿಟ್ಟಿನಲ್ಲಿ ಜನರಿಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ  ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಿ ವಾಹನ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ ಮಾಡಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನುಹೊರತುಪಡಿಸಿ) ಅನ್ವಯಿಸುವಂತೆ ಸರ್ಕಾರದ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಅಧಿಸೂಚನೆ ಸಂಖ್ಯೆ ಟಿಡಿ 1 ಟಿಡಿಆರ್ 2021 ಎ.12ರ ಅನ್ವಯ ಎ.15 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಎ.30ರ ವರೆಗೆ ವಿಸ್ತರಿಸಿದ ಅವಧಿಯನ್ನು ವಿಸ್ತರಣೆ ಮಾಡಲಾಗಿತ್ತು.
ಅದೇ ರೀತಿಯಲ್ಲಿ ಮೇ15 ರೊಳಗಾಗಿ ಪಾವತಿಸ ಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಮೇ31 ರವರೆಗೆ ಅವಧಿಯನ್ನು ವಿಸ್ತರಿಸಿ ಇಲಾಖೆ ಆದೇಶಿಸಿದೆ.
ಕೋವಿಡ್‌ ಎರಡನೇ ಅಲೆಯ  ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್‌ಡೌನ್ ಜಾರಿಯಲ್ಲಿದೆ. ಜನರ ಓಡಾಟಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದ್ದು, ಸಾರ್ವಜನಿಕರಿಗೆ  ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.