HomePage_Banner
HomePage_Banner
HomePage_Banner
HomePage_Banner

ಬಜತ್ತೂರು: ಶಾಸಕರ ನೇತೃತ್ವದಲ್ಲಿ ಕೋವಿಡ್ ಕಾರ್ಯಪಡೆ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಪುತ್ತೂರು ಶಾಸಕ ಸಂಜೀವ ಮಠಂದೂರುರವರ ಅಧ್ಯಕ್ಷತೆಯಲ್ಲಿ ಬಜತ್ತೂರು ಗ್ರಾಮ ಮಟ್ಟದ ಕೋವಿಡ್-೧೯ ಕಾರ್ಯಪಡೆ ಸಭೆ ಮೇ ೩ರಂದು ಬಜತ್ತೂರು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.

ಕೊರೋನಾ ೨ನೇ ಅಲೆ ನಿಯಂತ್ರಣ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಕುರಿತಂತೆ ಶಾಸಕ ಸಂಜೀವ ಮಠಂದೂರುರವರು ಮಾಹಿತಿ ಪಡೆದುಕೊಂಡರು. ಕೋವಿಡ್ ಕಾರ್ಯಪಡೆಯವರು ಸಾರ್ವಜನಿಕರು ಸರಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮಠಂದೂರು ಸೂಚಿಸಿದರು. ಗ್ರಾಮ ಮಟ್ಟದ ಕಾರ್ಯಪಡೆಯ ಸದಸ್ಯರು ವಾರ್ಡ್‌ಗಳಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದಲ್ಲಿ ಗ್ರಾಮವನ್ನು ಕೊರೋನಾ ಮುಕ್ತ ಗ್ರಾಮವನ್ನಾಗಿ ಮಾಡಬಹುದು, ವ್ಯಾಕ್ಸಿನ್ ಬಗ್ಗೆಯೂ ಹೆಚ್ಚಿನ ಪ್ರಚಾರ ಮಾಡುವಂತೆ ಸಂಜೀವ ಮಠಂದೂರು ಹೇಳಿದರು.

ಗ್ರಾ.ಪಂ.ವ್ಯಾಪ್ತಿಯಲ್ಲಿರುವ ಕೋವಿಡ್ ಪ್ರಕರಣಗಳ ಬಗ್ಗೆ ಆಶಾ ಕಾರ್ಯಕರ್ತೆಯರ ಮನೆ ಮನೆ ಭೇಟಿ ಬಗ್ಗೆ ಚರ್ಚಿಸಲಾಯಿತು. ತಾ.ಪಂ.ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಆಳ್ವ, ತಾ.ಪಂ.ಸದಸ್ಯ ಮುಕುಂದ ಗೌಡ, ಬಜತ್ತೂರು ಗ್ರಾ.ಪಂ.ಉಪಾಧ್ಯಕ್ಷೆ ಸ್ಮೀತಾ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ನೋಡೆಲ್ ಅಧಿಕಾರಿ ರಾಜಗೋಪಾಲ ಎನ್., ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸೌಮ್ಯ ಕೆ., ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪ್ಪಿನಂಗಡಿ ಸಿಎ ಬ್ಯಾಂಕ್ ಬಜತ್ತೂರು ಶಾಖಾ ವ್ಯವಸ್ಥಾಪಕ ಪುಷ್ಪರಾಜ್ ಶೆಟ್ಟಿ, ಗ್ರಾ.ಪಂ.ಸದಸ್ಯರಾದ ಸಂತೋಷ್ ಕುಮಾರ್ ಎ., ಗಂಗಾಧರ ಗೌಡ ಪಿ.ಎನ್., ಪ್ರೆಸಿಲ್ಲಾ ಡಿ.ಸೋಜ, ಮೋನಪ್ಪ ಗೌಡ ಬೆದ್ರೋಡಿ, ಭಾಗೀರಥಿ, ರತ್ನಾ, ವಿಮಲ, ಗಂಗಾಧರ ಕೆ.ಎಸ್., ಅಂಗನವಾಡಿ ಮೇಲ್ವಿಚಾರಕಿ ಸುಜಾತ, ಗ್ರಾಮಕರಣಿಕರು, ಶಾಲೆಗಳ ಮುಖ್ಯಶಿಕ್ಷಕರು, ಆರೋಗ್ಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಕೊರೋನಾ ಕಾರ್ಯಪಡೆ ಸದಸ್ಯರು ಉಪಸ್ಥಿತರಿದ್ದರು. ಪಿಡಿಒ ಪ್ರವೀಣ್‌ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ಗಿರಿಯಪ್ಪ ಗೌಡ ವಂದಿಸಿದರು. ಸಿಬ್ಬಂದಿಗಳಾದ ರಮೇಶ್, ಮಹಮ್ಮದ್ ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.