HomePage_Banner
HomePage_Banner
HomePage_Banner
HomePage_Banner

ವಿಟ್ಲ ಕೋವಿಡ್ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ‌ ತೆರೆದು ವ್ಯಾಪಾರ –  ಪಟ್ಟಣ ಪಂಚಾಯತ್ ಅಧಿಕಾರಿಗಳಿಂದ ದಂಡ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ: ಸರಕಾರದ ಕೋವಿಡ್ ನಿಯಮವನ್ನು ಉಲ್ಲಂಘಿಸಿ ಅಂಗಡಿ ತೆರೆದು ವ್ಯವಹಾರ ನಡೆಸುತ್ತಿದ್ದ ಬಟ್ಟೆ ಅಂಗಡಿಯೊಂದರ ಮಾಲಕರಿಗೆ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯವರು ದಂಡ ವಿಧಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ.

ಕೊರೋನ ಹರಡುವಿಕೆ ವಿಪರೀತವಾಗಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ 14 ದಿನಗಳ ಲಾಕ್ ಡೌನ್ ವಿಧಿಸಿತ್ತು. ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಗತ್ಯ ಸಾಮಗ್ರಿಗಳ ಅಂಗಡಿ ತೆರೆಯಲು ಸರಕಾರ ಅನುಮತಿ ನೀಡಿತ್ತು. ಆದರೆ ವಿಟ್ಲ ಭಾಗದಲ್ಲಿ ವಿನಾಯಿತಿ ಸಮಯದಲ್ಲಿ ಅಗತ್ಯ ಸಾಮಾಗ್ರಿಗಳ ವಸ್ತುಗಳ ಮಾರಾಟದ ಅಂಗಡಿಗಳ ಮರೆಯಲ್ಲಿ ಕೆಲವೊಂದು ಬಟ್ಟೆ ಅಂಗಡಿ ಸಹಿತ ಫ್ಯಾನ್ಸಿಗಳು ಅರ್ಧ ಬಾಗಿಲು ತೆರೆದು ವ್ಯವಹಾರ ನಡೆಸುತ್ತಿತ್ತು. ಈ ಬಗ್ಗೆ ಮಾಹಿತಿ ಅರಿತ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿಯವರ ನೇತೃತ್ವದ ಅಧಿಕಾರಿಗಳ ತಂಡ  ಮೆ.3ರಂದು  ಕಾರ್ಯಾಚರಣೆಗೆ ಇಳಿಯಿತು. ಈ ವೇಳೆ ವಿಟ್ಲ ಪೇಟೆಯ ಪುತ್ತೂರು ರಸ್ತೆಯಲ್ಲಿರುವ QB ಫ್ಯಾಷನ್ ಬಟ್ಟೆ ಅಂಗಡಿಯೊಳಗೆ ಗ್ರಾಹಕರಿರುವ ಬಗ್ಗೆ ಮಾಹಿತಿ ಅರಿತು ಅಂಗಡಿಯ ಶಟರ್ ಓಪನ್ ಮಾಡಿದಾಗ ಅಂಗಡಿಯೊಳಗೆ ಸಂಸ್ಥೆಯ ಸಿಬಂದಿಗಳು ಕೋವಿಡ್ ನಿಯಮವನ್ನು ಉಲ್ಲಂಘಿಸಿ ವ್ಯಾಪಾರ ನಡೆಸುತ್ತಿರುವುದು  ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿ ವ್ಯಾಪಾರ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಅಂಗಡಿಯವರಿಗೆ 3500 ರೂಪಾಯಿ ದಂಡ ವಿಧಿಸಲಾಗಿದೆ ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯವರು ತಿಳಿಸಿದ್ದಾರೆ.

 

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.