HomePage_Banner
HomePage_Banner
HomePage_Banner
HomePage_Banner

ಉಪ್ಪಿನಂಗಡಿ: ಕೋವಿಡ್-19 ಕಾರ್ಯಪಡೆ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಕಾರ್ಯಪಡೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ-ಸಂಜೀವ ಮಠಂದೂರು

ಉಪ್ಪಿನಂಗಡಿ: ಕೋವಿಡ್-೧೯ ಎರಡನೇ ಅಲೆಯಲ್ಲಿ ಸೋಂಕಿತರ ಸಂಪರ್ಕ ಪಡೆದವರ ಪತ್ತೆ ಕಾರ್ಯ ಪುತ್ತೂರು ತಾಲ್ಲೂಕಿನಲ್ಲಿ ಮಂದಗತಿಯಲ್ಲಿ ನಡೆಯುತ್ತಿದ್ದು, ಇದು

ಕೊರೊನಾ ನಿಯಂತ್ರಣದಲ್ಲಿ ಹಿನ್ನಡೆಯನ್ನು ತರುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಮುಂಜಾಗ್ರತಾ ಕಾರ್ಯಪಡೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಸೂಚನೆ ನೀಡಿದರು.

ಅವರು ಮೇ. ೩ರಂದು ಉಪ್ಪಿನಂಗಡಿಯಲ್ಲಿ ಕೊರೊನಾ ಮುಂಜಾಗ್ರತಾ ಕಾರ್ಯ ಪಡೆಯ ಸಭೆಯ ಅಧ್ಯಕ್ಷತೆ ವಹಿಸಿ ಭಾಗವಹಿಸಿ ಮಾತನಾಡಿದರು. ಕೊರೊನಾ ಪೀಡಿತರ, ಮತ್ತವರ ಸಂಪರ್ಕಕ್ಕೆ ಬಂದವರ ಮೇಲೆ ನಿಗಾವಿರಿಸುವುದು, ಅವರ ಸಂಚಾರವನ್ನು ನಿರ್ಬಂಧಿಸುವುದು, ಪ್ರಸಕ್ತ ನಡೆಯಬೇಕಾದ ಅತೀ ಅಗತ್ಯದ ಕೆಲಸವಾಗಿದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದರೆ, ಎಲ್ಲ ಪ್ರಯತ್ನಗಳು ವಿಫಲವಾಗಲಿದೆ. ಮಾತ್ರವಲ್ಲದೆ ಮತ್ತಷ್ಟು ದಿನ ಲಾಕ್‌ಡೌನ್, ಕರ್ಪ್ಯೂನಂತಹ ಕ್ರಮಗಳಿಗೆ ನಾವು ಒಳಗಾಗಬೇಕಾಗುತ್ತದೆ ಎಂದು ತಿಳಿಸಿದರು.

ಕೋರೊನ ಪೀಡಿತರಿಗೆ ಔಷಧಿ, ಅವಶ್ಯಕ ಆಹಾರ ಸಾಮಾಗ್ರಿಗಳನ್ನು ಒದಗಿಸುವುದೂ ಸೇರಿದಂತೆ ದಿನ ನಿತ್ಯದ ಖರ್ಚು ವೆಚ್ಚಗಳನ್ನು ಪಂಚಾಯಿತಿ ಆಡಳಿತವೇ ಭರಿಸಬೇಕೆಂದ ಶಾಸಕರು ಸದ್ಯದ ಪರಿಸ್ಥಿತಿಯಲ್ಲಿ ಪುತ್ತೂರುನಲ್ಲಿ ಕೊರೊನಾ ಪೀಡಿತರಿಗೆ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಮಾಂತರ ಪ್ರದೇಶದಲ್ಲೂ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದರೆ ಉಪ್ಪಿನಂಗಡಿಯಲ್ಲೂ ಕೊರೊನಾ ಆಸ್ಪತ್ರೆಯನ್ನು ತೆರೆಯಲಾಗುವುದೆಂದು ತಿಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ| ಅಶೋಕ್ ಕುಮಾರ್ ರೈ, ನೋಡೆಲ್ ಅಧಿಕಾರಿ, ವಾಣಿಜ್ಯ ತೆರಿಗೆ ಅಧಿಕಾರಿ ಗರ್ಜಿ ಲಿಂಗಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಬಿಇಓ. ಲೋಕೇಶ್ ಮಾತನಾಡಿ ಪೂರಕ ಮಾಹಿತಿ ನೀಡಿದರು.

ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾಚಂದ್ರ ಮುಳಿಯ, ಉಪಾಧ್ಯಕ್ಷ ವಿನಾಯಕ ಪೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ| ಮುಶಾಕಿರ್ ಹುಸೈನ್, ವೈಧ್ಯಾಧಿಕಾರಿ ಡಾ| ಝರಿನಾ ಫಾತಿಮಾ, ಪ್ರಭೋಷನರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್, ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ. ಅಬ್ದುಲ್ ರಹಿಮಾನ್, ಸುರೇಶ್ ಅತ್ರಮಜಲು, ಯು.ಟಿ. ತೌಷಿಫ್, ಲೋಕೇಶ್ ಬೆತ್ತೋಡಿ, ಧನಂಜಯ, ಶೋಭಾ, ವಿದ್ಯಾಲಕ್ಷ್ಮಿ ಪ್ರಭು, ಸಣ್ಣಣ್ಣ, ಅಬ್ದುಲ್ ರಶೀದ್, ಇಬ್ರಾಹಿಂ ಮೈಸೀದಿ, ಜಯಂತಿ, ಮಾಜಿ ಸದಸ್ಯ ಚಂದ್ರಶೇಖರ್ ಮಡಿವಾಳ, ಉಪ್ಪಿನಂಗಡಿ ಸರ್ಕಾರಿ ಪಪೂ. ಕಾಲೇಜಿನ ಉಪ ಪ್ರಾಚಾರ್ಯ ದಿವಾಕರ ಆಚಾರ್ಯ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಜಯಂತ ಪುರೋಳಿ, ಇಸ್ಮಾಯಿಲ್ ತಂಗಳ್, ಆನಂದ ಕುಂಟಿನಿ, ಆದೇಶ್ ಶೆಟ್ಟಿ, ಮೊದಲಾದವರು ಭಾಗವಹಿಸಿದ್ದರು. ಪಿಡಿಓ. ವಿಲ್ಪ್ರೇಡ್ ಲಾರೆನ್ಸ್ ರೋಡ್ರಿಗಸ್ ಸ್ವಾಗತಿಸಿ, ವಂದಿಸಿದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.