HomePage_Banner
HomePage_Banner
HomePage_Banner
HomePage_Banner

ಒಳಮೊಗ್ರು ಗ್ರಾಮ ಪಂಚಾಯತ್ ಕೋವಿಡ್ 19 ಗ್ರಾಮೀಣ ಕಾರ್ಯಪಡೆ ಸಭೆ ನಿರ್ಣಯಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತನ್ನಿ: ಸಂಜೀವ ಮಠಂದೂರು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋವಿಡ್ 19 ಸೋಂಕು ಹರಡುವುದನ್ನು ತಪ್ಪಿಸುವುದು ಮತ್ತು ಜಾಗೃತವಾಗುವ ನಿಟ್ಟಿನಲ್ಲಿ ಕೋವಿಡ್ 19 ಗ್ರಾಮೀಣ ಕಾರ್ಯಪಡೆ ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಚನೆಯಾಗಿದ್ದು ಒಳಮೊಗ್ರು ಗ್ರಾ.ಪಂ. ಗ್ರಾಮೀಣ ಕಾರ್ಯಪಡೆ ಸಭೆಯು ಶಾಸಕ ಸಂಜೀವ ಮಠಂದೂರುರವರ ಅಧ್ಯಕ್ಷತೆಯಲ್ಲಿ ಮೇ.04 ರಂದು ಕುಂಬ್ರ ರೈತ ಸಭಾಭವನದಲ್ಲಿ ನಡೆಯಿತು. ಕೋವಿಡ್ ಬಗ್ಗೆ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಪಂ ಅಭಿವೃದ್ಧಿ ಅಧಿಕಾರಿಯವರಿಂದ ಮಾಹಿತಿ ಪಡೆದುಕೊಂಡ ಶಾಸಕರು ವ್ಯವಸ್ಥೆಗಳ ಬಗ್ಗೆ ಚರ್ಚೆ ನಡೆಸಿದರು. ಕೋವಿಡ್ ಮುಕ್ತ ಗ್ರಾಮವಾಗುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮ ಪಡಬೇಕು ಎಂದರು.ಕೋರೋನ ವಿರುದ್ಧ ಜನಜಾಗೃತಿಗಾಗಿ ಗ್ರಾಪಂ ತೆಗೆದುಕೊಂಡ ನಿರ್ಣಯಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಶಾಸಕರು ಹೇಳಿದರು. ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ವಿವಿಧ ಮಾಹಿತಿಗಳನ್ನು ನೀಡಿದರು.


ವೇದಿಕೆಯಲ್ಲಿ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾ.ಪಂ. ಸದಸ್ಯ ಹರೀಶ್ ಬಿಜತ್ರೆ, ಒಳಮೊಗ್ರು ಗ್ರಾ.ಪಂ. ಅಧ್ಯಕ್ಷೆ ತ್ರಿವೇಣಿ ಪಳ್ಳತ್ತಾರು ಎಇಇ ರಾಮಚಂದ್ರ, ನೋಡೆಲ್ ಆಫೀಸರ್ ವಿದ್ಯಾರಾಣಿ ಉಪಸ್ಥಿತರಿದ್ದರು. ಸಭೆಯಲ್ಲಿ ಒಳಮೊಗ್ರು ಗ್ರಾಪಂ ಸದಸ್ಯರುಗಳಾದ ಲತೀಫ್, ನಿಮಿತಾ, ವಿನೋದ್ ಶೆಟ್ಟಿ ಮುಡಾಲ, ಚಿತ್ರಾ, ಶಾರದಾ, ಪ್ರದೀಪ್, ಶೀನಪ್ಪ ನಾಯ್ಕ, ಅಶ್ರಫ್ ಉಜಿರೋಡಿ, ಕುಂಬ್ರ ವರ್ತಕರ ಸಂಘದ ಅಧ್ಯಕ್ಷ ಎಸ್.ಮಾಧವ ರೈ,ಬಿಜೆಪಿ ಶಕ್ತಿಕೇಂದ್ರದ ಪ್ರಮುಖ್ ರಾಜೇಶ್ ರೈ ಪರ್ಪುಂಜ, ಒಳಮೊಗ್ರು ಗ್ರಾಮಕರಣಿಕ ರಾಧಾಕೃಷ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಆರತಿ, ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಗೀತಾ ಬಿ.ಎಸ್ ಸ್ವಾಗತಿಸಿದರು. ಸದಸ್ಯ ಮಹೇಶ್ ರೈ ಕೇರಿ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.