HomePage_Banner
HomePage_Banner
HomePage_Banner
HomePage_Banner

ಪತ್ರಕರ್ತರು `ಫ್ರಂಟ್ ಲೈನ್ ವರ್ಕರ್ಸ್’: ಸಿಎಂ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಬೆಂಗಳೂರು: ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ರಕರ್ತರನ್ನು ಕೋವಿಡ್ ಪರಿಸ್ಥಿತಿಯನ್ನು ನಿರ್ವಹಣೆ ಮಾಡುವ ಫ್ರಂಟ್ ಲೈನ್ ವರ್ಕರ್ಸ್ (ಮುಂಚೂಣಿ ಕಾರ್ಯಕರ್ತರು) ಎಂದು ಪರಿಗಣಿಸಲಾಗಿದ್ದು, ಅವರಿಗೂ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದರು.

ರಾಜ್ಯದಲ್ಲಿನ ಕೋವಿಡ್-೧೯ ಪರಿಸ್ಥಿತಿ ಮತ್ತು ಆಕ್ಸಿಜನ್ ಸರಬರಾಜು ಕುರಿತಂತೆ ಸಚಿವ ಸಂಪುಟ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಮಾಧ್ಯಮದವರನ್ನು ಕೊವಿಡ್ ವಾರಿಯರ್ಸ್ ಎಂದು ಪರಿಗಣಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜನತಾ ಕರ್ಫ್ಯೂ: ಸೋಂಕು ಹರಡುವುದನ್ನು ತಡೆಗಟ್ಟಲು ಮೇ 12ರವರೆಗೆ ‘ಕೊರೋನ ಕರ್ಫ್ಯೂ’ ಘೋಷಣೆ ಮಾಡಲಾಗಿದೆ. ಆನಂತರ, ಇದನ್ನು ಮುಂದುವರಿಸಬೇಕೆ, ಬೇಡವೇ ಎಂಬುದರ ಕುರಿತು ಅಧಿಕಾರಿಗಳು, ಸಚಿವರ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಮಾನವ ಸಂಪನ್ಮೂಲವಾಗಿ ಅಂತಿಮ ವರ್ಷದ ಮೆಡಿಕಲ್ ವಿದ್ಯಾರ್ಥಿಗಳನ್ನು ಬಳಸುತ್ತೇವೆ. ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳುತ್ತೇನೆ ಎಂದು ಅವರು ತಿಳಿಸಿದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.