ಅರಿಯಡ್ಕ ಗ್ರಾ.ಪಂ. ವ್ಯಾಪ್ತಿಯ ಕೋವಿಡ್ ಕಾರ್ಯಪಡೆ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಅರಿಯಡ್ಕ : ಅರಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋವಿಡ್೧೯ ಕಾರ್ಯ ಪಡೆಯ ಸಭೆ ಶಾಸಕ ಸಂಜೀವ ಮಠಂದೂರುರವರ ಅಧ್ಯಕ್ಷತೆಯಲ್ಲಿ ಮೇ.೪ ರಂದು ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು. ಕೋವಿಡ್ ಬಗ್ಗೆ ಮಾಹಿತಿ ತಿಳಿಸಿದ ಶಾಸಕ ಸಂಜೀವ ಮಠಂದೂರುರವರು ಸಭೆಗೆ ಗೈರು ಹಾಜರಾದ ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರನ್ನು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಗೈರು ಹಾಜರಿ ಒಳ್ಳೆಯದಲ್ಲ, ನಮ್ಮ ಜವಾಬ್ದಾರಿ ಅರಿತು ಕೆಲಸಮಾಡಬೇಕಿದೆ. ಮೂಲಭೂತ ಸೌಕರ್ಯಗಳನ್ನು ಪಂಚಾಯತ್ ಒದಗಿಸಬೇಕು. ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರ ಪಡೆಯಬೇಕು, ಪರವೂರಿಂದ ಬರುವ ಜನರ ಬಗ್ಗೆ ನಿಗಾ ವಹಿಸಬೇಕು, ಮಾಸ್ಕ್ ಹಾಕಿದವರ ಮತ್ತು ಅಂಗಡಿ ಮುಂಗಟ್ಟುಗಳಿಗೆ ಬರುವ ಜನರ ವ್ಯವಸ್ಥೆ ಬಗ್ಗೆ ನಿಗಾ ವಹಿಸಬೇಕು, ಇದರ ಹತೋಟಿಗೆ ತರಲು ನಾವೆಲ್ಲರೂ ಸಮರೋಪಾದಿಯಲ್ಲಿ ಕೆಲಸ ಮಾಡಬೇಕಿದೆ.

ಸಮಾಜವನ್ನು ರಕ್ಷಿಸುವ ಕೆಲಸವನ್ನು ನಾವೆಲ್ಲ ಮಾಡಬೇಕಿದೆ. ಯಾವುದೇ ಜೀವ ಹಾನಿಯಾಗಬಾರದು. ಇದಕ್ಕಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ವೇದಿಕೆಯಲ್ಲಿ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯ, ಉಪಾಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ, ನೊಡೆಲ್ ಅಧಿಕಾರಿ ವಿದ್ಯಾರಾಣಿ, ತಿಂಗಳಾಡಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಭವ್ಯಾ, ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರು, ಗ್ರಾಮಕರಣಿಕ ಶಬ್ಬೀರ್, ಆರೋಗ್ಯ ಸಹಾಯಕಿ ನವ್ಯಾ, ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷ ರಾಮದಾಸ್ ರೈ ಮದ್ಲ, ಕೊರೋನ ವಾರಿಯರ್ಸ್ ತಂಡದ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾ ಸಂಸ್ಥೆಯ ಮುಖ್ಯಸ್ಥರು, ಬೀಟ್ ಪೋಲೀಸ್, ಸಿ.ಎ ಬ್ಯಾಂಕ್‌ನ ಪ್ರತಿನಿಧಿಗಳು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪಂಚಾಯತ್ ಪಿಡಿಓ ಪದ್ಮಾ ಕುಮಾರಿ ಸ್ವಾಗತಿಸಿ, ತಿಲಕ್ ರೈ ಕುತ್ಯಾಡಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.