ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದೌರ್ಜನ್ಯ‌ದ ವಿರುದ್ಧ ಪುತ್ತೂರು ಬಿಜೆಪಿ‌ಯಿಂದ ಪ್ರತಿಭಟನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶದ ನಂತರ ಬಿಜೆಪಿ ಕಾರ್ಯಕರ್ತರ ಮತ್ತು ಬಿಜೆಪಿ ಬೆಂಬಲಿಸಿದ ಕಾರ್ಯಕರ್ತರ ಮೇಲೆ ಮಮತಾ ಬ್ಯಾನರ್ಜಿಯ ನೇತೃತ್ವದ ಸರಕಾ ದೌರ್ಜನ್ಯ ನಡೆಸಿದೆ ಎಂದು ಆರೋಪಿಸಿ ಪುತ್ತೂರು ಬಿಜೆಪಿಯಿಂದ ಬಿಜೆಪಿ ಕಚೇರಿಯಲ್ಲೆ ಪ್ರತಿಭಟನೆ ನಡೆಸಲಾಯಿತು.

ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಬಿಜೆಪಿ ಮತದಾರರ ಅಂಗಡಿ ಮತ್ತು ಮನೆಗಳಿಗೆ ಹಾನಿ, ಬಿಜೆಪಿ ಪಕ್ಷದ ಪರವಾಗಿ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿದ ಹೆಣ್ಮಕ್ಕಳ ಮೇಲೆ ದೌರ್ಜನ್ಯ ಮತ್ತು ಬಿಜೆಪಿ ಪಕ್ಷದ ಕಚೇರಿ ಗಳನ್ನು ಧ್ವಂಸಗೊಳಿಸಿದ್ದಾರೆ. ತಕ್ಷಣ ಮಮತಾ ಬ್ಯಾನರ್ಜಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ನಗರ ಮಂಡಲ ಅಧ್ಯಕ್ಷ ಪಿ. ಜಿ. ಜಗನ್ನಿವಾಸ ರಾವ್, ಪುತ್ತೂರು ಮಾಜಿ ಪುರಸಭೆ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು, ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯ ಚಂದ್ರ ಶೇಖರ್ ರಾವ್ ಬಪ್ಪಳಿಗೆ, ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ಯುವ ಮೋರ್ಚಾ ಜಿಲ್ಲಾ ಸಮಿತಿ ಸದಸ್ಯರಾದ ಕಿರಣ್ ಶಂಕರ ಮಲ್ಯ, ನಗರ ಮಂಡಲ ಉಪಾಧ್ಯಕ್ಷ ಶಿವಕುಮಾರ್ ಪಿ. ಬಿ, ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ರಕ್ಷಾ ಸಮಿತಿ ಸದಸ್ಯರಾದ ಡಾ. ಕೃಷ್ಣಪ್ರಸನ್ನ, ರಫೀಕ್ ದರ್ಬೆ, ರಾಘವೇಂದ್ರ ಪ್ರಭು, ಶಾಸಕರ ಆಪ್ತ ಸಹಾಯಕರಾದ ವಸಂತ ವೀರಮಂಗಲ, ಪ್ರಮುಖರಾದ ವಿಶ್ವನಾಥ ಕುಲಾಲ್, ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ ರುಕ್ಮಯ್ಯ ಇದ್ಪಾಡಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.