ಆಲಂಕಾರು ಗ್ರಾ.ಪಂ ವ್ಯಾಪ್ತಿಯಲ್ಲಿ 23 ಮಂದಿಗೆ ಕೊರೋನ ಪಾಸಿಟಿವ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಆಲಂಕಾರು: ಆಲಂಕಾರು ಗ್ರಾ.ಪಂ ವ್ಯಾಪ್ತಿಯ ಕೋಡ್ಲ ಪರಿಸರದಲ್ಲಿ 13 ಮಂದಿ ಸೇರಿದಂತೆ ಒಟ್ಟು 23 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ಆಲಂಕಾರು ಗ್ರಾ.ಪಂ ಅಧ್ಯಕ್ಷ ಸದಾನಂದ ಆಚಾರ್ಯ, ಅಭಿವೃದ್ದಿ ಅಧಿಕಾರಿ ಜಗನ್ನಾಥ ಶೆಟ್ಟಿ, ಕಾರ್ಯದರ್ಶಿ ವಸಂತ ಶೆಟ್ಟಿ ರವರು ತಿಳಿಸಿದ್ದಾರೆ.

ಕೊರೋನ ಪೀಡಿತರಿಗೆ 15 ದಿವಸ ಕಾಲ ಹೋಮ್ ಕ್ವಾರಂಟೈನ್‌ಗೆ ಸೂಚಿಸಿದ್ದು ಹೊರಗಡೆ ಹೋಗದಂತೆ ಕಟ್ಟೆಚ್ಚರ ನೀಡಲಾಗಿದೆ. ಆಲಂಕಾರು ಗ್ರಾ.ಪಂ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳ ಹಾಗು ಅಂಗಡಿ ಮುಂಗಟ್ಟುಗಳಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ದರಿಸಬೇಕು ಹಾಗು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ತಪ್ಪಿದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು. ಅನಗತ್ಯ ಸುತ್ತಾಟ ನಡೆಸುವವರಿಗೆ ಕಾನೂನು ಕ್ರಮ ರೀತಿಯಲ್ಲಿ ಶಿಸ್ತು ಕ್ರಮಕ್ಕೆ ಒಳಪಡಿಸಲಾಗುವುದು ಎಂದು  ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೂರದ ಊರಿನಿಂದ ಬಂದವವರನ್ನು ಶಾಲೆಯಲ್ಲಿ ಅಥಾವ ಇನ್ನಿತರ ಕಡೆಗಳಲ್ಲಿ ಕ್ವಾರಂಟೈನ್‌ ಮಾಡುವ ವ್ಯವಸ್ಥೆ ಈ ಬಾರಿ ಇಲ್ಲದಿರುವುದೇ ಕೊರೋನ ಇಷ್ಟೊಂದು ಪ್ರಮಾಣದಲ್ಲಿ ಹಬ್ಬಲು ಕಾರಣವಾಗಿದೆಯೋ ಎಂದು ಸಾರ್ವಜನಿಕ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.