ನೆಕ್ಕಿಲಾಡಿಯಲ್ಲಿ ಕೊರೋನಾ ಮುಂಜಾಗ್ರತಾ ಕಾರ್ಯಪಡೆ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ನಿಯಂತ್ರಣ ಮೀರಿ ಹರಡುತ್ತಿರುವ ಕೊರೋನಾ ವೈರಸ್‌ನ್ನು ತಡೆಗಟ್ಟಲು ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಬೇಕು. ಅನಗತ್ಯ ಮನೆಯಿಂದ ಹೊರಬಾರದೇ ಸರ್ಕಾರದ ಸೂಚನೆಗಳನ್ನು ಪಾಲಿಸುವ ಮೂಲಕ ಪ್ರತಿಯೊಬ್ಬರೂ ಸ್ವರಕ್ಷಣೆ ಮೂಲಕ ಸಮಾಜದ ರಕ್ಷಣೆಗೆ ಮುಂದಾಗಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.


ಅವರು ನೆಕ್ಕಿಲಾಡಿ ಗ್ರಾಮ ಪಂಚಾಯತ್‌ನಲ್ಲಿ ನಡೆದ ಕೊರೋನಾ ಮುಂಜಾಗ್ರತಾ ಕಾರ್ಯಪಡೆ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಈಗಾಗಲೇ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಕಾರಣಕ್ಕೆ ಒಂದು ಮರಣ ಸಂಭವಿಸಿದೆ. ಮೂರು ಪ್ರಕರಣಗಳು ಪತ್ತೆಯಾಗಿದೆ. ಇದು ಇಲ್ಲಿಗೆ ಕೊನೆಗೊಳ್ಳುವಂತಾಗಲು ಎಲ್ಲರೂ ಸಹಕರಿಸಬೇಕು ಎಂದರು.

ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್, ಉಪ್ಪಿನಂಗಡಿ ಸಮುದಾಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಮುಷಾಕಿರ್ ಹುಸೈನ್, ವೈದ್ಯರಾದ ಡಾ| ಝರಿನಾ ಫಾತಿಮಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪಂಚಾಯತ್ ಉಪಾಧ್ಯಕ್ಷ ಸ್ವಪ್ನಾ ಜೀವನ್, ಪಿಡಿಒ ಕುಮಾರಯ್ಯ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.