ಬೆಟ್ಟಂಪಾಡಿ ಕಾಲೇಜಿನಲ್ಲಿ ಆನ್‌ಲೈನ್ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಬೆಟ್ಟಂಪಾಡಿ : ಕೋವಿಡ್ – 19ನಿಂದ ಉಂಟಾಗಿರುವ ಈ ವಿಷಮ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಮನೆಯಲ್ಲಿದ್ದುಕೊಂಡೇ ನೀತಿಯುಳ್ಳ ಹಾಗೂ ಮೌಲ್ಯಯುತ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ರವೀಶ್ವರ ಹೇಳಿದರು. ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ಆಂತರಿಕ ಗುಣಮಟ್ಟದ ಭರವಸಾ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಆಯೋಜಿಸಿದ ಸಾಮರ್ಥ್ಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಎನ್‌ರಿಚ್ಚಿಂಗ್  ಸ್ಕಿಲ್ಸ್ ಡ್ಯೂರಿಂಗ್ ದ ಪ್ಯಾಂಡೆಮಿಕ್ ಎಂಬ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

 

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ| ನಾಗರತ್ನ ಕೆ.ಎ. ಇವರು ಮಾತನಾಡಿ ಇಂದಿನ ದಿನಗಳಲ್ಲಿ ಅಂಕಗಳೇ ಮಾನದಂಡವಲ್ಲ. ಪಠ್ಯೇತರ ವಿಷಯಗಳಲ್ಲಿ ತೊಡಗಿಸಿಕೊಂಡು ಮಾನವೀಯ ಮೌಲ್ಯಗಳನ್ನು ಸಂಬಂಧಗಳನ್ನು ಬೆಳೆಸಿಕೊಳ್ಳವುದು ಅವಶ್ಯಕ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ| ವರದರಾಜ ಚಂದ್ರಗಿರಿ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಜ್ಞಾನದ ಜೊತೆ ಜೊತೆಗೆ ಕೌಶಲ್ಯ ಅಭಿವೃದ್ಧಿಯು ಮುಖ್ಯ ಎಂದು ಹೇಳಿದರು.

ಪ್ರಾಸ್ತಾವಿಕ ಮಾತುಗಳೊಡನೆ ಸ್ವಾಗತ ಕೋರಿದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀ ಹರಿಪ್ರಸಾದ್ ಎಸ್. ಮಾತನಾಡಿ ಸಾಂಕ್ರಾಮಿಕ ಪಿಡುಗು ರೋಗದ ಬಿರುಸಿನ ಪ್ರಲಾಪದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿ ಸಮುದಾಯಕ್ಕೆ ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದ ತರಬೇತಿ ಕಾರ್ಯಕ್ರಮ ಅವಶ್ಯಕ ಎಂದರು.

ಗೂಗಲ್ ಮೀಟ್ ಮೂಲಕ ನಡೆದ ಈ ಆನ್ಲೈನ್ ಉಪನ್ಯಾಸದಲ್ಲಿ ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಘಟಕ ನಾಯಕಿ ರಂಜಿತಾ ಜಿ. ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.