ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ವಿಕಾಸ್ ಸಾವು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ವಿದ್ಯುತ್ ಸಂಪರ್ಕದಲ್ಲಾದ ಲೋಪವನ್ನು ಸರಿಪಡಿಸಲು ಮುಂದಾದ ವೇಳೆ ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಪವರ್‌ಮ್ಯಾನ್ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಪಿಲಿಂಕಲ್ ಎಂಬಲ್ಲಿ ಆದಿತ್ಯವಾರ ನಡೆದಿದೆ.


ಬಿಜಾಪುರದ ಮೂಲದವರಾಗಿರುವ ವಿಕಾಸ್ ಮೃತಪಟ್ಟವರು ಇವರು ಕಳೆದ 5 ವರ್ಷ 5ತಿಂಗಳಿಂದ ಮೆಸ್ಕಾಂ ಉದ್ಯೋಗಿಯಾಗಿದ್ದು, ಕಲ್ಲೇರಿ ವಲಯ ಮೆಸ್ಕಾಂ ನಲ್ಲಿ ಪವರ್ ಮ್ಯಾನ್ ಆಗಿ ಕರ್ತವ್ಯನಿರ್ವಹಿಸುತ್ತಿದ್ದರು. ಮಳೆಯ ಕಾರಣಕ್ಕೆ ವಿದ್ಯುತ್ ಕಂಬದಲ್ಲಿ ವಿದ್ಯುತ್ ಅರ್ತಿಂಗ್ ಆಗಿದ್ದರಿಂದ ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಸಾವನ್ನಪ್ಪಿರುವ ಸಾಧ್ಯತೆಯನ್ನು ಅಂದಾಜಿಸಲಾಗಿದೆ.

ಮೃತ ವಿಕಾಸ್ ವಿವಾಹಿತರಾಗಿದ್ದು, ಪತ್ನಿ ಹಾಗೂ ಒಂದು ತಿಂಗಳು ಪ್ರಾಯದ ಪುಟ್ಟ ಮಗುವನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು , ಉಪ್ಪಿನಂಗಡಿ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಎಎಸೈ ಜನಾರ್ದನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.