ಕರೋಪಾಡಿ‌ ಗ್ರಾ.ಪಂ. ಟಾಸ್ಕ್ ಫೋರ್ಸ್ ಸಮಿತಿ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನಾವುಗಳು ಇಚ್ಛಾಶಕ್ತಿಯಿಂದ ಕೆಲಸ ಮಾಡಬೇಕು: ರಾಜೇಶ್ ನಾಯ್ಕ್

ವಿಟ್ಲ:   ಕೊರೋನಾ ನಿಗ್ರಹಕ್ಕಾಗಿ ಸರ್ಕಾರ ಪ್ರತೀ ಪಂಚಾಯತ್ ಗೆ 50 ಸಾವಿರ ರೂಪಾಯಿಯನ್ನು ಬಿಡುಗಡೆಗೊಳಿಸಲಿದ್ದು, ಟಾಸ್ಕ್ ಫೋರ್ಸ್ ಸಮಿತಿ ಇಚ್ಛಾಶಕ್ತಿಯಿಂದ ಕೆಲಸ ಮಾಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
 

   

ಕರೋಪಾಡಿ ಗ್ರಾ.ಪಂ.ನಲ್ಲಿ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ  ಅವರು ಮಾತನಾಡಿದರು. ಕೊರೋನಾ ನಿಗ್ರಹಕ್ಕೆ ಪೂರಕವಾಗಿ ಉತ್ತಮವಾಗಿ ಕೆಲಸ‌ ನಿರ್ವಹಿಸಿದ ಗ್ರಾ.ಪಂ.ಆಡಳಿತ, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಕಾರ್ಯವನ್ನು ಶ್ಲಾಘಿಸಿದ ಅವರು, ಕೊರೋನಾ ನಿರ್ಮೂಲನೆ ಎಲ್ಲರ ಧ್ಯೇಯವಾಗಲಿ ಎಂದರು. ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದರು.

ತಹಶೀಲ್ದಾರ್ ರಶ್ಮಿ ಎಸ್. ಆರ್. ಮಾತನಾಡಿ, ದ್ವಿತೀಯ ಲಸಿಕೆ ಪಡೆದುಕೊಳ್ಳುವವರು ಸಂಬಂಧಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸೂಚನೆ ಬಂದ ಬಳಿಕವಷ್ಟೇ ಆಸ್ಪತ್ರೆಗೆ ಬಂದು ಲಸಿಕೆ ಪಡೆದುಕೊಳ್ಳಬೇಕು, ನಿಗದಿತ ಕಾಲಕ್ಕೆ ಸೂಚನೆ ನೀಡಲು ವ್ಯವಸ್ಥೆ ಮಾಡಲಾಗಿದೆ, ಆದರೆ ಪ್ರಥಮ ಲಸಿಕೆ ಪಡೆದುಕೊಳ್ಳದೇ ಇರುವವರು ಕಡ್ಡಾಯವಾಗಿ ಮುಂಚಿತವಾಗಿಯೇ ನೋಂದಣಿ ಮಾಡಬೇಕು ಎಂದರು.
 

ತಾ.ಪಂ.ಕಾರ್ಯನಿರ್ವಹಣಾಧಿಕಾರಿ‌ ರಾಜಣ್ಣರವರು ಮಾತನಾಡಿ, ಕೊರೋನಾದ ವಿರುದ್ಧ ಪಂಚಾಯತ್ ಆಡಳಿತದ ಜನಪ್ರತಿನಿಧಿಗಳು, ಅಧಿಕಾರಿಗಳು ಒಂದೇ ಮನಸ್ಸಿನಿಂದ ಕೆಲಸ ಮಾಡಬೇಕು, ಯಾವುದೇ ರೀತಿಯಲ್ಲೂ ಗೊಂದಲಕ್ಕೆ ಅವಕಾಶ ಕೊಡದೆ ದೃಢ ಮನಸ್ಸಿನಿಂದ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

9 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 6 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೂರು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಹಾಯಕಿ ಮಾಹಿತಿ ನೀಡಿದರು. ಕರೋಪಾಡಿ ಗ್ರಾ.ಪಂ.ಅಧ್ಯಕ್ಷ ಮಹಮ್ಮದ್ ಅನ್ವರ್ ಕರೋಪಾಡಿ, ಉಪಾಧ್ಯಕ್ಷ ಚೆನ್ನಪ್ಪ ನಾಯ್ಕ್ ಒಡಿಯೂರು, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ದೇವಪ್ಪ.ಪಿ.ಆರ್, ಕಂದಾಯ ನಿರೀಕ್ಷಕ ದಿವಾಕರ ಮುಗುಳ್ಯ,  ಗ್ರಾಮಕರಣಿಕ ಅನಿಲ್ ಕುಮಾರ್, ವೈದ್ಯಾಧಿಕಾರಿ ಫಿಯೋಲಿನಾ ಡಿ.ಸೋಜ, ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.