ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ, ವಿಧಾನ ಪರಿಷತ್ ಸದಸ್ಯರ ಭೇಟಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಸಮುದಾಯ ಆರೋಗ್ಯ ಕೇಂದ್ರವನ್ನು ಸುಳ್ಯ ಕೆ.ವಿ.ಜಿ. ಸಹಭಾಗಿತ್ವ ಪಡೆದುಕೊಂಡು ಸೇವೆಗೆ ಅಣಿಗೊಳಿಸಿ-ಖಾದರ್

ಉಪ್ಪಿನಂಗಡಿ: ಸುಳ್ಯದ ಕುರುಂಜಿ ವೆಂಕಟರಮಣ ಮೆಡಿಕಲ್ ಕಾಲೇಜಿನ ಸಹಭಾಗಿತ್ವ ಪಡೆದುಕೊಂಡು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇರುವ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಸಮುದಾಯ ಕೇಂದ್ರವನ್ನು ಪೂರ್ಣ ಪ್ರಮಾಣದ ಕೋವಿಡ್ ಆಸ್ಪತ್ರೆಯಾಗಿ ಬಳಸಿಕೊಳ್ಳಬಹುದು ಎಂದು ಮಾಜಿ ಆರೋಗ್ಯ ಸಚಿವ, ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ. ಖಾದರ್ ಹೇಳಿದರು.

ಅವರು ಮೇ 22ರಂದು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. ಆರೋಗ್ಯ ಸಚಿವನಾಗಿದ್ದ ಸಂದರ್ಭದಲ್ಲಿ 4.50 ಕೋಟಿ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರ ನಿರ್ಮಿಸಲಾಗಿದ್ದು, ಈ ಹಿಂದೆ ಶಿಲಾನ್ಯಾಸ ಕಾರ‍್ಯಕ್ರಮಕ್ಕೆ ಮತ್ತು ಕಾಮಗಾರಿ ಪರಿಶೀಲನೆ ಸಲುವಾಗಿ ಭೇಟಿ ನೀಡಿದ್ದೆ, ಆರೋಗ್ಯ ಕೇಂದ್ರ ಬಹಳ ವ್ಯವಸ್ಥಿತವಾಗಿ ನಿರ್ಮಾಣ ಆಗಿದೆ.

ಇಲ್ಲಿ ಬಹಳಷ್ಟು ವ್ಯವಸ್ಥೆಗಳನ್ನು ಒಳಗೊಂಡಿದೆ, ಆದರೆ ತಜ್ಞ ವೈದ್ಯರಾದಿಯಾಗಿ ತಾಂತ್ರಿಕ ತಜ್ಞರು, ಸಿಬ್ಬಂದಿಗಳ ಕೊರತೆ ಇದೆ. ಈ ನಿಟ್ಟಿನಲ್ಲಿ ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಜೊತೆಗೆ ಸಂಯೋಜನೆ ಮಾಡಿಕೊಂಡರೆ ಅಲ್ಲಿನ ನುರಿತ ತಜ್ಞ ವೈದ್ಯರನ್ನು ಒಳಗೊಂಡಂತೆ ಸಿಬ್ಬಂದಿಗಳನ್ನು ಬಳಸಿಕೊಂಡು ಕೊರೋನಾ ಸಂಕಷ್ಟ ಸಮಯದಲ್ಲಿ ಈ ಆರೋಗ್ಯ ಕೇಂದ್ರವನ್ನು ಸಮರ್ಪಕವಾಗಿ ಬಳಸಿಕೊಳ್ಳಬಹುದಾಗಿದೆ ಎಂದರು.

ಶಾಸಕರು, ಸರ್ಕಾರದೊಂದಿಗೆ ಮಾತನಾಡುವೆ:

ಇಷ್ಟೊಂದು ದೊಡ್ಡ ಆಸ್ಪತ್ರೆ ಇದ್ದೂ ಪ್ರಯೋಜನಕ್ಕೆ ಬೀಳದಂತಾಗಿದೆ, ಆದ ಕಾರಣ ಇಲ್ಲಿಗೆ ಕೆ.ವಿ.ಜಿ. ಆಸ್ಪತ್ರೆಯೊಂದಿಗೆ ಸಹಯೋಗ ಮಾಡುವುದರ ಜೊತೆಗೆ ಈಗಾಗಲೇ ನೀಟ್ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳನ್ನು ಇಂತಹ ಸಂದರ್ಭದಲ್ಲಿ ಈ ರೀತಿಯ ಕೇಂದ್ರಗಳಲ್ಲಿ ಬಳಸಿಕೊಂಡು ಅವರಿಗೆ ಇಂಟರ್‌ಶಿಪ್ ಮೂಲಕ ನೀಡುವ ಗ್ರೇಸ್ ಮಾರ್ಕ್‌ನ್ನು ಈ ರೀತಿಯಾಗಿ ನೀಡುವ ಮೂಲಕ ಅವರನ್ನೂ ಬಳಸಿಕೊಳ್ಳಬಹುದಾಗಿದೆ, ಈ ಬಗ್ಗೆಯೂ ಸ್ಥಳೀಯ ಶಾಸಕರು ಮತ್ತು ಸರ್ಕಾರದೊಂದಿಗೆ ಮಾತನಾಡುವುದಾಗಿ ಹೇಳಿದರು.

ಶಾಸಕರ ಭೇಟಿ ವೇಳೆ ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಚಂದ್ರ, ಉಪಾಧ್ಯಕ್ಷ ವಿನಾಯಕ ಪೈ, ಸದಸ್ಯರಾದ ಸುರೇಶ್ ಅತ್ರಮಜಲು, ಧನಂಜಯ ಮತ್ತಿತರರು ಇದ್ದರು. ಶಾಸಕ ಯು.ಟಿ. ಖಾದರ್ ಅವರೊಂದಿಗೆ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎಸ್. ಮಹಮ್ಮದ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ| ರಾಜಾರಾಮ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕುಲ್ ಅಕ್ಬರ್, ಗ್ರಾಮ ಪಂಚಾಯಿತಿ ಸದಸ್ಯ ಯು.ಟಿ. ತೌಸೀಫ್, ನಝೀರ್ ಮಠ, ಜಯಪ್ರಕಾಶ್  ಬದಿನಾರು, ಯು.ಟಿ. ಇರ್ಷಾದ್ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.