ನಮ್ಮ ಭವಿಷ್ಯದ ಶಿಲ್ಪಿಗಳು ನಾವೇ ಆಗಬೇಕು :ಡಾ. ಪೂರ್ಣಿಮಾ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಜೀವನದಲ್ಲಿ ಉತ್ತಮವಾದ ಗುರಿಯನ್ನು ಇಟ್ಟುಕೊಂಡು ಸಾಧನೆಯ ಪಥದಲ್ಲಿ ಯುವಜನತೆ ಸಾಗಬೇಕು. ಅದರ ಜೊತೆಗೆ ತಮ್ಮನ್ನು ತಾವು ಪ್ರೀತಿಸುವುದನ್ನು ಕಲಿತುಕೊಳ್ಳಬೇಕು. ಆಗ ಮಾತ್ರ ನಮ್ಮ ಭವಿಷ್ಯದ ಶಿಲ್ಪಿಗಳು ನಾವೇ ಆಗಲು ಸಾಧ್ಯವಾಗುತ್ತದೆ ಎಂದು ರಾಜ್ಯ ರಾಷ್ಟ್ರೀಯ ಸೇವಾ ಯೋಜನೆಯ ಅನುಷ್ಠಾನಾಧಿಕಾರಿ ಡಾ. ಪೂರ್ಣಿಮಾ ಹೇಳಿದರು.

ಅವರು ವಿವೇಕಾನಂದ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಆಯೊಜಿಸಲಾದ ” ರಾಷ್ಟ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ” ಎಂಬ ವಿಷಯದ ಬಗ್ಗೆ ಆನ್ಲೈನ್ ವೆಬಿನಾರ್ ನಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಶನಿವಾರ ಮಾತನಾಡಿದರು.

ಜೀವನದಲ್ಲಿ ಬರುವ ಸಮಸ್ಯೆಗಳನ್ನು ಎದುರಿಸಿ, ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಆಗ ಮಾತ್ರ ಬಲಿಷ್ಠ ರಾಷ್ಟ್ರ ನಿರ್ಮಾಣವಾಗಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.ಕಾರ್ಯಕ್ರಮದ ಉದ್ಘಾಟಕರಾಗಿ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಡಾ. ನಾಗರತ್ನ ಕೆ.ಎ ಮಾತನಾಡಿ, ಯುವಜನತೆ ರಾಷ್ಟ್ರ ನಿರ್ಮಾಣದಲ್ಲಿ ಹೇಗೆ ಮಹತ್ವದ ಪಾತ್ರವನ್ನು ನಿರ್ವಹಿಸಬೇಕು ಎಂದು ತಿಳಿಸಿದರು. ಹಾಗೆಯೇ ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿ.ಜಿ.ಭಟ್. ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಶ್ರೀನಾಥ್ ಸ್ವಾಗತಿಸಿ, ವಿದ್ಯಾ ಕೆ.ಎನ್ ವಂದಿಸಿದರು. ಉಪನ್ಯಾಸಕ‌ ಮುಕುಂದ ಕೃಷ್ಣ ಕಾರ್ಯಕ್ರಮವನ್ನು ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.