ಗೋಣಿಬೀಡು ಪೊಲೀಸ್ ಠಾಣೆಯ ಎಸ್‌ಐ ಅಮಾನತು: ಪುತ್ತೂರು ಡಿವೈಎಸ್‌ಪಿಗೆ ತನಿಖಾ ಹೊಣೆ – ಐ.ಜಿ. ಆದೇಶ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದೊಯ್ದು ಮೂತ್ರ ನೆಕ್ಕಿಸಿದ್ದಾರೆ ಎಂದು ಆರೋಪ ಎದುರಿಸುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಪೊಲೀಸ್ ಠಾಣೆಯ ಎಸ್.ಐ.ಯವರನ್ನು ಅಮಾನತುಗೊಳಿಸಿ ಪಶ್ಚಿಮ ವಲಯ ಐಜಿಪಿ ಆದೇಶಿದ್ದಾರೆ. ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ, ಪರಿಶಿಷ್ಟ ಜಾತಿಗೆ ಸೇರಿರುವ ಕೆ.ಎಲ್.ಪುನೀತ್ ಎಂಬವರು ದಾಖಲಿಸಿರುವ ದೂರಿಗೆ ಸಂಬಂಧಿಸಿ ಗೋಣಿಬೀಡು ಠಾಣೆಯ ಎಸ್‌ಐ ಅರ್ಜುನ್ ಎಂಬವರನ್ನು ಅಮಾನತುಗೊಳಿಸಿ ಆದೇಶಿಸಿರುವ ಪಶ್ಚಿಮ ವಲಯದ ಐಜಿಪಿ ದೇವಜ್ಯೋತಿ ರೇರವರು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದಾರೆ.

ಪ್ರಕರಣವೊಂದರ ವಿಚಾರಣೆಯ ವೇಳೆ ಪುನೀತ್ ಅವರಿಗೆ ಅದೇ ಪೊಲೀಸ್ ಠಾಣೆಯ ಕಸ್ಟಡಿಯಲ್ಲಿದ್ದ ಇನ್ನೊಂದು ಪ್ರಕರಣದ ಆರೋಪಿಯ ಮೂತ್ರ ಕುಡಿಸಿ, ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ ಆರೋಪದಡಿ ಎಸ್.ಎಸ್. ಅರ್ಜುನ್ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದ ಕುರಿತು ಇಲಾಖಾ ತನಿಖೆಯನ್ನು ಐಜಿಪಿಯವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಡಿವೈಎಸ್ಪಿ ಅವರಿಗೆ ವಹಿಸಿದ್ದಾರೆ. ಪುತ್ತೂರು ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್ ಅವರು ತನಿಖೆ ನಡೆಸಿ ವರದಿ ಸಲ್ಲಿಸಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.