ಕಡಬ: ಹಿಂಜಾವೇಯಿಂದ ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಹಿಂದು ಜಾಗರಣ ವೇದಿಕೆಯ ಕಡಬ ತಾಲೂಕು ಸಮಿತಿಯ ವತಿಯಿಂದ ದಾನಿಗಳ ಸಹಕಾರದೊಂದಿಗೆ ಕಡಬ ಸಮುದಾಯ ಆಸ್ಪತ್ರೆಯ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಅಕ್ಕಿ ಮತ್ತು ದಿನಬಳಕೆಯ ವಸ್ತುಗಳ ಕಿಟ್ ವಿತರಣೆಯ ಕಾರ್ಯಕ್ರಮವು ಸೇವಾ ಭಾರತಿ ಕಡಬ ಮತ್ತು ಶಾಸಕರ ಕೋವಿಡ್ ವಾರ್ ರೂಂ ಮುಖಾಂತರ ಮೇ.೨೪ರಂದು ಜರಗಿತು.

ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ಹಾಗೂ ಸಂಘಟನೆಯ ಪ್ರಮುಖರು ಕಿಟ್‌ಗಳನ್ನು ವಿತರಿಸಿದರು. ಹಿಂದು ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್ ರವಿರಾಜ್ ಶೆಟ್ಟಿ ಕಡಬ ಅವರು ಸಂಘಟನೆಯ ಕಾರ್ಯಚಟುವಟಿಕೆಯ ಕುರಿತು ಮಾತನಾಡಿ ಹಿಂಜಾವೇ ಕಾರ್ಯಕರ್ತರು ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ರಾಜ್ಯಾದಾದ್ಯಂತ ತಮ್ಮ ತಮ್ಮ ವ್ಯಾಪ್ತಿಗಳಲ್ಲಿ ವಿವಿಧ ರೀತಿಯ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಕಡಬ ಪರಿಸರದಲ್ಲಿಯೂ ಸೇವಾ ಭಾರತಿ ಸಹಯೋಗದೊಂದಿಗೆ ಕೋವಿಡ್ ಸೋಂಕಿತರ ಮನೆಗಳಿಗೆ ಔಷಧಿ ತಲುಪಿಸುವುದು, ತುರ್ತು ಸಂದರ್ಭಗಳಲ್ಲಿ ಅಂಬ್ಯುಲೆನ್ಸ್ ಸಹಾಯ, ವೈದ್ಯಕೀಯ ನೆರವು, ರಕ್ತದಾನ, ಅಗತ್ಯವಿದ್ದಲ್ಲಿ ಆಹಾರ ಸಾಮಾಗ್ರಿ ತಲುಪಿಸುವಿಕೆ ಮುಂತಾದ ಕೆಲಸದಲ್ಲಿ ಕಾರ್ಯಕರ್ತರು ತೊಡಗಿಸಿಕೊಂಡಿದ್ದಾರೆ ಎಂದರು. ಕೋವಿಡ್ ಸೋಂಕಿನಿಂದ ಮೃತಪಟ್ಟವರ ಶವಸಂಸ್ಕಾರವನ್ನು ಸರಕಾರದ ನಿಯಮಾವಳಿ ಪ್ರಕಾರ ನಡೆಸುವಲ್ಲಿ ನಮ್ಮ ಕಾರ್ಯಕರ್ತರು ನೆರವು ನೀಡುತ್ತಿದ್ದಾರೆ. ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಜನಪರ ಸೇವೆ ನೀಡುತ್ತಿರುವ ಆಶಾ ಕಾರ್ಯಕರ್ತೆಯರನ್ನು ಗುರುತಿಸಿ ನೆರವು ನೀಡುವ ನಿಟ್ಟಿನಲ್ಲಿ ಕಡಬ ಪರಿಸರದ ಆಶಾ ಕಾರ್ಯಕರ್ತೆಯರಿಗೆ ದಾನಿಗಳ ನೆರವಿನಿಂದ ಅಕ್ಕಿ ಹಾಗೂ ಅಗತ್ಯ ಸಾಮಾಗ್ರಿಗಳ ಕಿಟ್ ವಿತರಿಸಲಾಗಿದೆ ಎಂದರು. ಕಡಬ ಸರಸ್ವತೀ ವಿದ್ಯಾಲಯದ ಸಂಚಾಲಕ ಮಂಕುಡೆ ವೆಂಕಟ್ರಮಣ ರಾವ್ ಮಾತನಾಡಿದರು. ಕಡಬ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|ಸುಚಿತ್ರಾ ರಾವ್, ಬಿಜೆಪಿ ಪ್ರಶಿಕ್ಷಣ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಕೃಷ್ಣ ಶೆಟ್ಟಿ ಕಡಬ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾರ್ಯದರ್ಶಿ ಪ್ರಕಾಶ್ ಎನ್.ಕೆ., ಕಡಬ ತಾಲೂಕು ಅಧ್ಯಕ್ಷ ಮಲ್ಲೇಶ್ ಆಲಂಕಾರು, ಸೇವಾ ಭಾರತಿ ಪ್ರಮುಖ್ ಮಾಧವ ಕೋಲ್ಪೆ, ಕಡಬ ಶ್ರೀ ಶ್ರೀಕಂಠ ಸ್ವಾಮಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಮುತ್ತುಕುಮಾರ್, ಪ್ರಮುಖರಾದ ಅಶೋಕ್‌ಕುಮಾರ್ ಪಿ., ರಿತೇಶ್ ಆಲಂಕಾರು, ಸತೀಶ್, ಶರತ್ ಮುಂತಾದವರು ಉಪಸ್ಥಿತರಿದ್ದರು. ಹಿಂಜಾವೇ ಕಡಬ ತಾಲೂಕು ಕಾರ್ಯದರ್ಶಿ ಜಿನಿತ್ ಮರ್ದಾಳ ಸ್ವಾಗತಿಸಿ, ಪುತ್ತೂರು ಜಿಲ್ಲಾ ಉಪಾಧ್ಯಕ್ಷ ವೆಂಕಟ್ರಮಣ ಕುತ್ಯಾಡಿ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.