ಮುಂಡೂರು ಗ್ರಾ.ಪಂ ಕೊರೋನಾ ಕಾರ್ಯಪಡೆ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಚಿತ್ರ: ಯೂಸುಫ್ ರೆಂಜಲಾಡಿ

  • ಹೊರ ಜಿಲ್ಲೆಗಳಿಂದ ಗ್ರಾಮಕ್ಕೆ ಆಗಮಿಸುವವರ ಮೇಲೆ ನಿಗಾ ಇಡುವಂತೆ ಸೂಚನೆ

ಪುತ್ತೂರು: ಮುಂಡೂರು ಗ್ರಾ.ಪಂ ಕೊರೋನಾ ಕಾರ್ಯಪಡೆ ಸಭೆ ಮೇ.೨೫ರಂದು ಮುಂಡೂರು ಸಿ.ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಗ್ರಾ.ಪಂ ಅಧ್ಯಕ್ಷೆ ಪುಷ್ಪಾ ಎನ್ ಅಧ್ಯಕ್ಷತೆ ವಹಿಸಿದ್ದರು.

ಗ್ರಾಮದಲ್ಲಿ ಕೊರೋನಾ ಪ್ರಕರಣಗಳನ್ನು ಸಂಪೂರ್ಣವಾಗಿ ನಿಯಂತ್ರಿಸಿ ಕೊರೋನಾ ಮುಕ್ತ ಗ್ರಾಮ ಪಂಚಾಯತ್ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಯಿತು. ಸಿಡಿಪಿಒ ಶ್ರೀಲತಾ ಮಾತನಾಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ಕೊರೋನಾ ವೈರಸ್ ಹರಡದಂತೆ ಜಾಗೃತಿ ಮೂಡಿಸುವ ಕಾರ್ಯವನ್ನು ಮುಂದಕ್ಕೂ ಪರಿಣಾಮಕಾರಿಯಾಗಿ ಮಾಡುವ ಅವಶ್ಯಕತೆಯಿದೆ, ಗ್ರಾ.ಪಂ ವ್ಯಾಪ್ತಿಯನ್ನು ಕೊರೋನಾ ಮುಕ್ತ ಮಾಡುವ ಗುರಿಯೊಂದಿಗೆ ನಾವೆಲ್ಲರೂ ಕಾರ್ಯಪ್ರವೃತ್ತರಾಗಬೇಕು, ಕೊರೋನಾ ವಾರಿಯರ್‍ಸ್‌ಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು ಮುಂದಕ್ಕೂ ಅದನ್ನು ಮುಂದುವರಿಸಿಕೊಂಡು ಹೋಗಬೇಕಾದ ಅವಶ್ಯಕತೆಯಿದೆ ಎಂದು ಹೇಳಿದರು.

ಹೊರ ಜಿಲ್ಲೆಗಳಿಂದ ಬರುವವರ ಬಗ್ಗೆ ನಿಗಾ ಇಡಿ:
ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಗಳಿಂದ ಗ್ರಾಮಕ್ಕೆ ಆಗಮಿಸುವವರ ಬಗ್ಗೆ ನಿಗಾ ವಹಿಸಬೇಕು. ಹೊರ ಪ್ರದೇಶಗಳಿಂದ ಬರುವವರ ಬಗ್ಗೆ ಮಾಹಿತಿ ಪಡೆದುಕೊಳ್ಳುವ ಕಾರ್ಯವನ್ನು ಮಾಡಬೇಕು. ಗ್ರಾಮದಲ್ಲಿ ಮುಂದಿನ ದಿನಗಳಲ್ಲಿ ಕೊರೋನಾ ವೈರಸ್ ಹರಡದಂತೆ ಏನೆಲ್ಲಾ ಕ್ರಮಗಳನ್ನು ಅನುಸರಿಸಬೇಕೋ ಅವೆಲ್ಲವನ್ನೂ ಮಾಡುವ ಮುಖಾಂತರ ನಮ್ಮ ಜವಾಬ್ದಾರಿಯನ್ನು ಸಮಪರ್ಕವಾಗಿ ನಿರ್ವಹಿಸಬೇಕಾಗಿದೆ ಎಂದು ಸಿಡಿಪಿಒ ಶ್ರೀಲತಾ ಹೇಳಿದರು.

ಗ್ರಾ.ಪಂ ನೌಕರರನ್ನು ಫ್ರಂಟ್‌ಲೈನ್ ವಾರಿಯರ್‍ಸ್‌ಗಳಾಗಿ ಘೋಷಿಸಿ:
ಗ್ರಾ.ಪಂ ಸದಸ್ಯ ಕಮಲೇಶ್ ಸರ್ವೆದೋಳಗುತ್ತು ಮಾತನಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜಿ ಇಲಾಖಾ ಅಧೀನಕ್ಕೊಳಪಡುವ ನೌಕರರನ್ನು ಕೊರೋನಾ ಫ್ರಂಟ್ ಲೈನ್ ವಾರಿಯರ್‍ಸ್ ಎಂದು ಘೋಷಿಸಿಲ್ಲ. ಕೊರೋನಾ ವಾರಿಯರ್‍ಸ್‌ಗಳಾಗಿ ದುಡಿಯುತ್ತಿರುವ ಅವರನ್ನು ಫ್ರಂಟ್‌ಲೈನ್ ವಾರಿಯರ್‍ಸ್‌ಗಳಾಗಿ ಘೋಷಿಸಬೇಕು, ಈ ಬಗ್ಗೆ ಸಂಬಂಧಪಟ್ಟವರಿಗೆ ತಿಳಿಸುವ ಕೆಲಸವಾಗಬೇಕು ಎಂದು ಹೇಳಿದರು.

ಕೋವಿಡ್ ಸೆಂಟರ್‌ಗೆ ದಾಖಲಿಸಿ:
ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರಿನಿಂದ ಬರುವವರನ್ನು ಕೋವಿಡ್ ಸೆಂಟರ್‌ಗೆ ದಾಖಲಿಸುವುದು ಪ್ರಸ್ತುತ ಸಂದರ್ಭದಲ್ಲಿ ಸೂಕ್ತ ಎಂಬ ಸಲಹೆಯನ್ನು ಶಿವನಾಥ ರೈ ಮೇಗಿನಗುತ್ತು ವ್ಯಕ್ತಪಡಿಸಿದರು.

ಆಶಾ ಕಾರ್ಯಕರ್ತೆಯರಿಗೆ ವೇತನ ಬಂದಿಲ್ಲ ಯಾಕೆ..?
ಆಶಾ ಕಾರ್ಯಕರ್ತೆಯರಿಗೆ ವೇತನ ಬಂದಿಲ್ಲ. ಕೊರೋನಾ ನಿಯಂತ್ರಣ ವಿಷಯದಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಮಯಕ್ಕೆ ಸರಿಯಾಗಿ ವೇತನ ನೀಡಬೇಕು, ಈ ಬಗ್ಗೆ ಸರಕಾರಕ್ಕೆ ತಿಳಿಸುವ ಕೆಲಸವಾಗಬೇಕು ಕಮಲೇಶ್ ಸರ್ವೆದೋಳಗುತ್ತು ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರಿಗೆ ನೆರವು:
ಕೊರೋನಾ ವಾರಿಯರ್‍ಸ್ ಆಗಿರುವ ಮುಂಡೂರು ಗ್ರಾ.ಪಂ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ಮೂಡಂಬೈಲು ನೇಸರ ಟ್ರಸ್ಟ್ ವತಿಯಿಂದ ನಗದು ಧನ ಸಹಾಯ ಹಾಗೂ ಅಗತ್ಯ ವೈದ್ಯಕೀಯ ಉಪಕರಣಗಳನ್ನು ನೀಡಲಾಗುತ್ತದೆ ಎಂದು ಸದಸ್ಯ ಅಶೋಕ್ ಕುಮಾರ್ ಪುತ್ತಿಲ ಹೇಳಿದರು.

ಸರ್ವೆಯಲ್ಲೂ ಸಭೆ ಮಾಡಬೇಕು:
ಕಾರ್ಯಪಡೆ ಸಭೆಯನ್ನು ಸರ್ವೆ ಗ್ರಾಮದಲ್ಲಿ ಕೂಡಾ ಮಾಡಬೇಕೆಂದು ಸದಸ್ಯ ಕರುಣಾಕರ ಗೌಡ ಎಲಿಯ ಹೇಳಿದರು.

ಗ್ರಾ.ಪಂನಿಂದ ಪ್ರೋತ್ಸಾಹಧನ ವಿತರಣೆ:
ಆಶಾ ಕಾರ್ಯಕರ್ತೆಯರಿಗೆ ಗ್ರಾ.ಪಂ ವತಿಯಿಂದ ತಲಾ ರೂ.೧ ಸಾವಿರದಂತೆ ಪ್ರೋತ್ಸಾಹ ಧನ ವಿತರಿಸಲಾಯಿತು. ವೇದಿಕೆಯಲ್ಲಿ ಮೆಸ್ಕಾ ಎಇಇ ಶಿಲ್ಪಾ, ಗ್ರಾ.ಪಂ ಉಪಾಧ್ಯಕ್ಷೆ ಪ್ರೇಮಾ ಉಪಸ್ಥಿತರಿದ್ದರು.

ಸಭೆಯಲ್ಲಿ ಗ್ರಾ.ಪಂ ಸದಸ್ಯರಾದ ಬಾಬು ಕಲ್ಲಗುಡ್ಡೆ, ಉಮೇಶ್ ಗೌಡ ಅಂಬಟ, ಬಾಲಕೃಷ್ಣ ಪೂಜಾರಿ, ಪ್ರವೀಣ್ ನಾಯ್ಕ ನೆಕ್ಕಿತ್ತಡ್ಕ, ಮಹಮ್ಮದ್ ಆಲಿ ನೇರೋಳ್ತಡ್ಕ, ಚಂದ್ರಶೇಖರ್ ಎನ್‌ಎಸ್‌ಡಿ, ರಸಿಕಾ ರೈ ಮೇಗಿನಗುತ್ತು, ದೀಪಿಕಾ ಸಿ.ಕೆ, ಕಾವ್ಯ ತೌಡಿಂಜ, ಯಶೋಧ, ಕಮಲ ನೇರೋಳ್ತಡ್ಕ, ಗ್ರಾಮ ಕರಣಿಕೆ ತುಳಸಿ, ಸರ್ವೆ ಬೀಟ್ ಪೊಲೀಸ್ ಆಶಾ ಹಾಗೂ ಕೊರೋನಾ ವಾರಿಯರ್‍ಸ್‌ಗಳು ಉಪಸ್ಥಿತರಿದ್ದರು. ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಸ್ವಾಗತಿಸಿದರು. ಕಾರ್ಯದರ್ಶಿ ಸುರೇಶ್ ನಾಯ್ಕ ವಂದಿಸಿದರು. ಗ್ರಾ.ಪಂ ಸಿಬ್ಬಂದಿಗಳಾದ ದೇವಪ್ಪ ನಾಯ್ಕ ಕೇದಗೆದಡಿ, ಕೊರಗಪ್ಪ ನಾಯ್ಕ, ಶಶಿಧರ ಕೆ ಮಾವಿನಕಟ್ಟೆ, ಕವಿತಾ, ಮೋಕ್ಷಾ, ಸತೀಶ ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.