ದೇಶದ ಬೆನ್ನೆಲುಬು ರೈತರ ಬಗ್ಗೆ ಗಮನ ನೀಡದ ಸರಕಾರದ ನೀತಿ ಖಂಡಿಸಿ ಪ್ರತಿಭಟನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಕಳೆದ 6 ತಿಂಗಳಿಂದ ದೆಹಲಿಯ ಗಡಿಯಲ್ಲಿ ಲಕ್ಷಾಂತರ ರೈತರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಹೋರಾಡುತ್ತಿದ್ದರೂ ಮೌನವಾಗಿಯೇ ಇರುವ ಪ್ರಧಾನಿ ನರೇಂದ್ರ ಮೋದಿ ಅವರ ನಡೆ ಖಂಡನೀಯ ಎಂದು ಹಿರಿಯ ಕಮ್ಯೂನಿಸ್ಟ್ ನಾಯಕ ನ್ಯಾಯವಾದಿ ಬಿ.ಎಂ.ಭಟ್ ಹೇಳಿದರು.

ರೈತರ ಹೋರಾಟ ಬೆಂಬಲಿಸಿ ದೇಶದಾದ್ಯಂತ ನಡೆಯುತ್ತಿರುವ ಕರಾಳ ದಿನಾಚರಣೆ ಅಂಗವಾಗಿ ಮನೆ ಮನೆಯಲ್ಲಿ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಕಮ್ಯೂನಿಸ್ಟ್ ನೇತೃತ್ವದ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಸಹಾಯಕ ಕಮೀಶನರ್ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ನೀಡಿ ಮಾತನಾಡಿದರು. ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆಗಳಿಗೆ ತಂದ ತಿದ್ದುಪಡಿಗಳನ್ನು ತಕ್ಷಣ ರದ್ದುಪಡಿಸಬೇಕು ಹಾಗೂ ವಿದ್ಯುತ್ ಕಾಯ್ದೆ, ಗುತ್ತಿಗೆ ಕೃಷಿ ಪದ್ದತಿಯನ್ನು ಸರಕಾರ ತಿರಸ್ಕರಿಸಬೇಕು ಎಂದವರು ಒತ್ತಾಯಿಸಿದರು.

ಈ ಸಂದರ್ಭ ಮಾತನಾಡಿದ ರೈತ ಸಂಘದ ಜಿಲ್ಲಾ ಸಂಚಾಲಕ ರೂಪೇಶ್‌ರೈ ಅವರು ರೈತರ ದಿಟ್ಟ ಹೋರಾಟ ದೇಶದಾದ್ಯಂತ ನಡೆಯುವ ಮುನ್ನ ಸರಕಾರ ಎಚ್ಚೆತ್ತುಕ್ಕೊಳ್ಳಬೇಕು ಎಂದರು. ಈಗಾಗಲೇ 600 ರೈತರು ಹೋರಾಟದಲ್ಲಿ ಹುತಾತ್ಮರಾಗಿದ್ದಾರೆ. ಜನರ ಸಾವನ್ನು ನೋಡುತ್ತಾ ಖುಷಿ ಪಡುವ ಸರಕಾರದ ನಡೆ ಖಂಡನೀಯ ಎಂದ ಅವರು ಕೊರೋನಾದಿಂದಲೂ ಜನ ಸಾಯಲು ಸರಕಾರದ ನಿರ್ಲಕ್ಷ ಧೋರಣೆಯೇ ಕಾರಣ ಎಂದರು. ತಕ್ಷಣ ಕೃಷಿ ಸಂಬಂಧಿತ ತಿದ್ದುಪಡಿಗಳನ್ನು ಹಿಂಪಡೆಯಲು ಆಗ್ರಹಿಸಿದರು. ಈ ಸಂದರ್ಭ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.