ಬಜತ್ತೂರು ಗ್ರಾ.ಪಂ.ಕೊರೋನಾ ಕಾರ್ಯಪಡೆ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ನೆಲ್ಯಾಡಿ: ಬಜತ್ತೂರು ಗ್ರಾಮ ಪಂಚಾಯತ್ ಮಟ್ಟದ ಕೊರೋನಾ ಕಾರ್ಯಪಡೆ ಜಾಗೃತಿ ಸಭೆ ಮೇ27ರಂದು ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು.
ಗ್ರಾ.ಪಂ.ಅಧ್ಯಕ್ಷೆ ಪ್ರೇಮಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸದ್ರಿ ಸಭೆಯಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೊರೋನಾ ಪಾಸಿಟಿವ್ ಪ್ರಕರಣಗಳ ಬಗ್ಗೆ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮಾಹಿತಿ ನೀಡಿದರು. ಹೊರಜಿಲ್ಲೆ, ರಾಜ್ಯ ಮತ್ತು ವಿದೇಶಗಳಿಂದ ಬಂದವರ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ತಿಳಿಸಲಾಯಿತು. ಆಶಾ ಕಾರ್ಯಕರ್ತೆಯರು, ಕೊರೋನಾ ಕಾರ್ಯಪಡೆ ಸದಸ್ಯರು ಮನೆ ಭೇಟಿ ಸಮಯದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಮುಂಜಾಗ್ರತಾ ಕ್ರಮ ಕೈಗೊಂಡು ಎಚ್ಚರವಹಿಸುವಂತೆಯೂ ಸೂಚಿಸಲಾಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರೋನಾ ಕಾರ್ಯಪಡೆ ಸದಸ್ಯರಾಗಿರುವ ಗ್ರಾಮ ಪಂಚಾಯತ್ ಸದಸ್ಯರಿಗೆ ಕೊರೋನಾ ವ್ಯಾಕ್ಸಿನ್ ನೀಡುವಂತೆ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಲು ನಿರ್ಧರಿಸಲಾಯಿತು.

ಉಪಾಧ್ಯಕ್ಷೆ ಸ್ಮಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ.ಸದಸ್ಯರಾದ ಸಂತೋಷ್‌ಕುಮಾರ್ ಪಿ., ಗಂಗಾಧರ ಕೆ.ಎಸ್., ಮೋನಪ್ಪ ಗೌಡ, ಗಂಗಾಧರ ಪಿ.ಎನ್., ಉಮೇಶ್ ಓಡ್ರಪಾಲು, ಅರ್ಪಿತಾ, ಭಾಗೀರಥಿ, ರತ್ನ, ವಿಮಲ, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಕೊರೋನಾ ಕಾರ್ಯಪಡೆ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್‌ಕುಮಾರ್ ಸ್ವಾಗತಿಸಿ ಮಾಹಿತಿ ನೀಡಿದರು. ಕಾರ್ಯದರ್ಶಿ ಗಿರಿಯಪ್ಪ ಗೌಡ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.