ಒಳಮೊಗ್ರು ಕೋವಿಡ್ ಕಾರ್ಯಪಡೆ ಸಭೆ, ಕರಪತ್ರ ಹಂಚಿಕೆ | ಗ್ರಾಮದಲ್ಲಿ ಇಳಿಕೆಯಾದ ಕೊರೋನಾ ಪಾಸಿಟಿವ್ ಪ್ರಕರಣ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋವಿಡ್ 19 ಕೋರೋನಾ ವೈರಸ್ ಸೋಂಕು ಹರಡುವುದನ್ನು ತಪ್ಪಿಸುವ ಸಲುವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಒಳಮೊಗ್ರು ಗ್ರಾಪಂನ ಕೋವಿಡ್ ಕಾರ್ಯಪಡೆಯ ಸಭೆಯು ಮೇ.28ರಂದು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರ ಅಧ್ಯಕ್ಷತೆಯಲ್ಲಿ ಕುಂಬ್ರ ಶ್ರೀರಾಮ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು.

ಗ್ರಾಪಂನ ಪ್ರತಿ ವಾರ್ಡ್ ಸದಸ್ಯರು ಆಯಾ ವಾರ್ಡ್‌ನ ಎಲ್ಲಾ ಮನೆಗಳಿಗೆ ಭೇಟಿ ಕೊಟ್ಟು ಕೊರೋನಾ ಜಾಗೃತಿ ಮೂಡಿಸುವುದು ಉತ್ತಮ ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು. ಅಂಗಡಿಗಳಲ್ಲಿ, ಬ್ಯಾಂಕ್‌ಗಳಲ್ಲಿ ಜನರು ಸಾಮಾಜಿಕ ಅಂತರ ಕಾಪಾಡದ ಜನರಿಗೆ ಕಾರ್ಯಪಡೆ ಮನವರಿಕೆ ಮಾಡುವುದು ಎಂದು ನಿರ್ಣಯಿಸಲಾಯಿತು. ಡೆಂಗ್ಯೂ ಜ್ವರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಮತ್ತು ಕೊರೋನಾ ಜಾಗೃತಿ ಕರಪತ್ರ ಮುದ್ರಿಸಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಯಿತು. ಇದಲ್ಲದೆ ಪಂಚಾಯತ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಸ್ಯಾನಿಟೈಸರ್, ಮಾಸ್ಕ್ ಅನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ರಾಮಚಂದ್ರ , ನೊಡೆಲ್ ಅಧಿಕಾರಿ ವಿದ್ಯಾರಾಣಿ , ಗ್ರಾಪಂ ಅಭಿವೃದ್ಧಿ ಅಧಿಕಾರಿ ಗೀತಾ ಬಿ.ಎಸ್, ಸದಸ್ಯರುಗಳು ಉಪಸ್ಥಿತರಿದ್ದರು.

ಕೊರೋನಾ ಪಾಸಿಟಿವ್ ಇಳಿಮುಖ
ಗ್ರಾಮದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು ಪ್ರಸ್ತುತ ೩ ಕ್ಕೆ ತಲುಪಿದೆ. ಇದಕ್ಕೆ ಕಾರಣಿಕರ್ತರಾದ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಕಾರ್ಯಪಡೆಯ ಸದಸ್ಯರಿಗೆ, ಅಧಿಕಾರಿ ವರ್ಗಕ್ಕೆ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಅಭಿನಂದನೆ ಸಲ್ಲಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.