ಮೋದಿ ನೇತೃತ್ವದ ಎನ್‌ಡಿಎ ಸರಕಾರಕ್ಕೆ 7 ವರ್ಷ ಹಿನ್ನೆಲೆ | ಬಿಜೆಪಿ ಒಬಿಸಿ ಮೋರ್ಚಾ, ನಗರ ಮಂಡಲದಿಂದ ಪೌರ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರಕ್ಕೆ ೭ ವರ್ಷ ಪೂರೈಸುವ ನಿಟ್ಟಿನಲ್ಲಿ ಬಿಜೆಪಿ ಜಿಲ್ಲಾ ಹಿಂದುಳಿದ ಮೋರ್ಚಾ ಮತ್ತು ನಗರ ಮಂಡಲದ ವತಿಯಿಂದ ಪೌರ ಕಾರ್ಮಿಕರಿಗೆ ಆಹಾರದ ಕಿಟ್ ಮತ್ತು ಸಿಹಿ ತಿಂಡಿ ವಿತರಣೆಯನ್ನು ಮೇ 29ರಂದು ಮಾಡಲಾಯಿತು.

ಬಿಜೆಪಿ ಯಾವತ್ತು ಕೂಡಾ ಜನರ ಜೊತೆಯಲ್ಲಿರುತ್ತದೆ:
ಶಾಸಕ ಸಂಜೀವ ಮಠಂದೂರು ಅವರು ಪೌರ ಕಾರ್ಮಿಕರಿಗೆ ಸಾಂಕೇತಿಕವಾಗಿ ಆಹಾರದ ಕಿಟ್ ವಿತರಿಸಿ ಮಾತನಾಡಿ ಜನರ ಸೇವೆ ಮಾಡುತ್ತಿರುವ ಪೌರ ಕಾರ್ಮಿಕರಿಗೆ ಸರಕಾರ ಒಂದಷ್ಟು ಸವಲತ್ತುಗಳನ್ನು ಕೊಡುತ್ತದೆ. ಇಂತಹ ಸಂದರ್ಭದಲ್ಲಿ ಅವರ ಆರೋಗ್ಯದ ಹಿತದೃಷ್ಟಿಯಿಂದ ಪೌರ ಕಾರ್ಮಿಕರು ಉತ್ತಮ ಪೌಷ್ಟಿಕ ಆಹಾರ ಸೇವಿಸುವುದು ಅಗತ್ಯ ಎಂದು ಗಮನದಲ್ಲಿರಿಸಿಕೊಂಡು ಬಿಜೆಪಿ ಹಿಂದುಳಿದ ಮೋರ್ಚಾದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರದ ೭ ವರ್ಷ ಪೂರೈಸಿದ ನಿಟ್ಟಿನಲ್ಲಿ ಪೌರ ಕಾರ್ಮಿಕರಿಗೆ ಪೌಷ್ಟಿಕ ಆಹಾರ ನೀಡುತ್ತಿರುವುದು ಉತ್ತಮ ಕೆಲಸ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಹಿಂದುಳಿದ ಮೋರ್ಚಾದ ಅಧ್ಯಕ್ಷ ಆರ್.ಸಿ.ನಾರಾಯಣ್, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ನಗರಸಭೆ ಸದಸ್ಯೆ ಯಶೋದಾ ಹರೀಶ್, ಬಿಜೆಪಿ ಹಿಂದುಳಿದ ಮೋರ್ಚಾದ ನಗರ ಅಧ್ಯಕ್ಷ ಶಿವರಾಮ ಸಪಲ್ಯ, ಕಾರ್ಯದರ್ಶಿ ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್, ಜಯಶ್ರೀ ಎಸ್.ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.