HomePage_Banner
HomePage_Banner

ಕೋವಿಡ್ ಹಿನ್ನೆಲೆ: ಪ್ರತಿ ಸೋಮವಾರ, ಗುರುವಾರ ಗ್ರಾಪಂನಲ್ಲಿ ಸಾಮಾನ್ಯ ಸಭೆ

ಪುತ್ತೂರು: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಪ್ರತಿ ಸೋಮವಾರ ಹಾಗೂ ಗುರುವಾರ ಗ್ರಾಮ ಪಂಚಾಯತ್‌ಗಳಲ್ಲಿ ಸಾಮಾನ್ಯ ಸಭೆ ನಡೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಇದು ತಕ್ಷಣದಿಂದಲೇ ಜಾರಿಗೊಳಿಸುವಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸೂಚಿಸಿದ್ದಾರೆ.

ಕೋವಿಡ್ ೧೯ರ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್‌ಗಳಲ್ಲಿ ಸಾಮಾನ್ಯ ಸಭೆ ನಡೆಸಬೇಕಿತ್ತು. ಆದರೆ ಪಿಡಿಓಗಳಿಗೆ ಇದರ ಬಗ್ಗೆ ಗೊಂದಲವಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟ ಗಮನ ಸೆಳೆದಿತ್ತು. ಈ ಹಿನ್ನೆಲೆಯಲ್ಲಿ ಆದೇಶ ಹೊರಡಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯದ ಬಹುತೇಕ ಗ್ರಾಮ ಪಂಚಾಯತ್‌ಗಳಲ್ಲಿ ಅಧ್ಯಕ್ಷರು ಸಾಮಾನ್ಯ ಸಭೆಯ ದಿನಾಂಕ ನಿಗದಿ ಪಡಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರೂ, ಕೋವಿಡ್ ೧೯ರ ಹಿನ್ನೆಲೆಯಲ್ಲಿ ಸಾಮಾನ್ಯ ಸಭೆ ನಡೆಸಲು ಬರುವುದಿಲ್ಲ ಎಂದು ಹೇಳುತ್ತಿರುವುದು ಗಮನಕ್ಕೆ ಬಂದಿದೆ. ಕೋವಿಡ್ ೧೯ರ ನಿಯಂತ್ರಣಕ್ಕೆ ಸಂಬಂಧಿಸಿದ ವಿಚಾರಗಳಲ್ಲಿ ಪಿಡಿಓಗಳು ಸ್ವತಃ ತಾವೇ ನಿರ್ಧಾರಗಳನ್ನು ತೆಗೆದುಕೊಂಡು ಕೋವಿಡ್ ನಿಯಂತ್ರಣ ಕಾರ್ಯಗಳಿಗಾಗಿ ವೆಚ್ಚ ಮಾಡಿರುವುದಾಗಿ ತೋರಿಸಿ, ಚೆಕ್ಕುಗಳಿಗೆ ಸಹಿ ಹಾಕುವಂತೆ ಅಧ್ಯಕ್ಷರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಆದ್ದರಿಂದ ಸಾಮಾನ್ಯ ಸಭೆ ನಡೆಸಿ, ಕೋವಿಡ್ ನಿರ್ವಹಣಾ ಕ್ರಿಯಾ ಯೋಜನೆಯನ್ನು ತಯಾರಿಸಿ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪಡೆದು ಖರ್ಚು ಮಾಡಬೇಕಾಗಿದೆ. ಗ್ರಾಮ ಪಂಚಾಯತ್ ಮಟ್ಟದ ಕಾರ್ಯಪಡೆ ಮತ್ತು ಗ್ರಾಮ ಮಟ್ಟದ ಕಾರ್ಯಪಡೆಗಳು ಪ್ರತಿ ಸೋಮವಾರ ಹಾಗೂ ಗುರುವಾರ ಸಭೆ ಆಯೋಜಿಸಿ ಜವಾಬ್ದಾರಿಗಳನ್ನು ನಿರ್ವಹಿಸುವಂತೆ ನಿರ್ದೇಶನ ನೀಡಿರುತ್ತಾರೆ. ಗ್ರಾಮ ಪಂಚಾಯತ್‌ಗಳು ತಕ್ಷಣವೇ ಸಾಮಾನ್ಯ ಸಭೆ ನಡೆಸಿ, ಕೋವಿಡ್ ೧೯ ನಿರ್ವಹಣಾ ಕ್ರಿಯಾ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಪಡೆದು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸೂಚಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.