ಪುತ್ತೂರು ಕೋವಿಡ್, ಸಾಂಕ್ರಾಮಿಕ ರೋಗ ಮುಕ್ತಕ್ಕೆ ಕ್ರಮ – ‘ವೈದ್ಯರ ನಡೆ ಹಳ್ಳಿ ಕಡೆ’ ಗೆ ಚಾಲನೆ ನೀಡಿದ ಶಾಸಕ ಸಂಜೀವ ಮಠಂದೂರು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ತಾಲೂಕನ್ನು ಕೋವಿಡ್, ಸಾಂಕ್ರಾಮಿಕ ರೋಗ ಮುಕ್ತ ತಾಲೂಕನ್ನಾಗಿ ಪರಿವರ್ತನೆ ಮಡಲು ‘ವೈದ್ಯರ ನಡೆ ಹಳ್ಳಿ ಕಡೆ’ ಸಂದೇಶದೊಂದಿಗೆ ಎಲ್ಲರಿಗೂ ಆರೋಗ್ಯ ಮತ್ತು ಎಲ್ಲರ ಜೀವ ರಕ್ಷಣೆ ಆಗಲಿದೆ ಎಂದು ಶಾಸಕ ಸಂಜೀವ ಮಠಂದೂರು ಅವರು ಹೇಳಿದರು.

ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಸೋಂಕು ಮತ್ತು ಸಾಂಕ್ರಾಮಿಕ ರೋಗ ನಿಯಂತ್ರಣ ಹಾಗೂ ಜಾಗೃತಿ ರೂಪಿಸಿರುವ ನಿಟ್ಟಿನಲ್ಲಿ ‘ವೈದ್ಯರ ನಡೆ ಹಳ್ಳಿ ಕಡೆ’ ಎಂಬ ಮೇ 31ರಂದು ಇಲ್ಲಿನ ಮಿನಿ ವಿಧಾನ ಸೌಧದ ಬಳಿ ಕಾರ್ಯಕ್ರಮಕ್ಕೆ ಶಾಸಕ ಸಂಜೀವ ಮಠಂದೂರು ಅವರು ಚಾಲನೆ ನೀಡಿ ಮಾತನಾಡಿದರು. ಸರಕಾರಿ ವೈದ್ಯಾಧಿಕಾರಿಗಳು, ಖಾಸಗಿ ವೈದ್ಯರು, ಪ್ರತಿ ಮನೆಯನ್ನು ವ್ಯಕ್ತಿಯನ್ನು ಸಂಪರ್ಕ ಮಾಡಿ ಅವರ ಆರೋಗ್ಯ ವಿಚಾರಣೆ ಮಾಡುವ ಒಂದು ಮಾಸದ ಈ ಕಾರ್ಯಕ್ರಮ ಯಶಸ್ವಿಯಾಗಬೇಕು. ಪುತ್ತೂರಿನಲ್ಲಿರುವ 5 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 2 ಸಮುದಾಯ ಆರೋಗ್ಯ ಕೇಂದ್ರ, 1 ತಾಲೂಕು ಆಸ್ಪತ್ರೆಯ ವ್ಯಾಪ್ತಿಗೆ 7 ವಾಹನಗಳಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ವೈದ್ಯರ ತಂಡ ಪ್ರತಿ ಹಳ್ಳಿಗೆ ಹೋಗಿ ಕೋವಿಡ್ ಪರೀಕ್ಷೆ, ಡೆಂಗ್ಯೂ ಮಲೇರಿಯದಂತಹ ಸಾಂಕ್ರಾಮಿಕ ರೋಗದ ಪರೀಕ್ಷೆಯನ್ನೂ ಮಾಡಲಿದ್ದಾರೆ. ಇದರ ಒಟ್ಟು ನೇತೃತ್ವವನ್ನು ತಹಶೀಲ್ದಾರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ, ಆರೋಗ್ಯಾಧಿಕಾರಿಯವರು ವಹಿಸಲಿದ್ದಾರೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ರಮೇಶ್ ಬಾಬು, ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ತಾಲೂಕು ಅರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ, ಆರ್.ಸಿ.ನಾರಾಯಣ್, ವಿವಿಧ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.