ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರವನ್ನು ಪೂರ್ಣ ಪ್ರಮಾಣದ ಕೋವಿಡ್ ಆಸ್ಪತ್ರೆಯಾಗಿ ಅಣಿಗೊಳಿಸುವಂತೆ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮನವಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರವನ್ನು ಪೂರ್ಣ ಪ್ರಮಾಣದ ಕೋವಿಡ್ ಆಸ್ಪತ್ರೆಯಾಗಿ ಅಣಿಗೊಳಿಸುವಂತೆ ಕ್ರಮ ಕೈಗೊಳ್ಳಲು ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಅವರಿಗೆ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ ಕೆ.ಬಿ.ರವರ ನೇತೃತ್ವದಲ್ಲಿ ಮೇ 31ರಂದು ಮನವಿ ಸಲ್ಲಿಸಲಾಗಿದೆ.

ಸಂಗಮ ಕ್ಷೇತ್ರವೆಂದೇ ಖ್ಯಾತಿವೆತ್ತ ಉಪ್ಪಿನಂಗಡಿ ಪಟ್ಟಣವು ಪುತ್ತೂರು, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕುಗಳ ಜನರ ವ್ಯವಹಾರ ಸಂಪರ್ಕವಿರುವ ಪಟ್ಟಣವಾಗಿದೆ. ಈ ಭಾಗದ ಆಸುಪಾಸಿನ ಜನರಿಗೆ ಇಲ್ಲಿರುವುದು ಒಂದೇ ಪ್ರಮುಖ ಆಸ್ಪತ್ರೆ. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿದರೂ ಸಮರ್ಪಕ ವೈದ್ಯಕೀಯ ಸಲಕರಣೆ, ನುರಿತ ವೈದ್ಯ ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿದೆ. ಇದೀಗ ಕೋವಿಡ್ ಕೇರ್ ಸೆಂಟರ್ ಆಗಿಯೂ ಕಾರ್ಯ ನಿರ್ವಹಿಸಲು ಆರಂಭಿಸಿದೆ. ಆದರೆ ಮೇಲ್ಕಂಡ ಕೊರತೆಗಳಿಂದ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡುವಲ್ಲಿ ಎಡವುತ್ತಿದೆ.

ಇತ್ತೀಚೆಗೆ ಇಲ್ಲಿಗೆ ಭೇಟಿ ನೀಡಿದ ಮಾಜಿ ಆರೋಗ್ಯ ಸಚಿವರೂ ಈ ಆಸ್ಪತ್ರೆಯ ೪.೫ ಕೋಟಿ ರೂ. ವೆಚ್ಚದ ಸುಸಜ್ಜಿತ ನೂತನ ಕಟ್ಟಡದ ರೂವಾರಿಗಳು ಆದ ಯು.ಟಿ.ಖಾದರ್‌ರವರು ಒಂದು ಅತ್ಯುತ್ತಮ ಸಲಹೆ ನೀಡಿದ್ದಾರೆ. ಅದಕ್ಕೆ ಅಂದು ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ರವರು ಧ್ವನಿಗೂಡಿಸಿರುತ್ತಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಮನವಿ ನೀಡುವ ಸಂದರ್ಭದಲ್ಲಿ ದ.ಕ‌. ಜಿಲ್ಲಾ ಕಾಂಗ್ರೆಸ್ ಪ್ರಧಾನ‌ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು, ಪುತ್ತೂರು ತಾಲೂಕು ಇಂಟಕ್ ಅಧ್ಯಕ್ಷರಾದ ಕೋಡಿಂಬಾಡಿ ಗ್ರಾ.ಪಂ. ಸದಸ್ಯ ಜಯಪ್ರಕಾಶ್ ಬದಿನಾರು ಮತ್ತು ಉಪ್ಪಿನಂಗಡಿ ಗ್ರಾ.ಪಂ. ಸದಸ್ಯ ಯು.ಟಿ.ತೌಸಿಫ್ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.