ಲಾಕ್‌ಡೌನ್‌ನಲ್ಲಿ ವಾರ್ಡ್ ಜನರ ಕಷ್ಟಗಳಿಗೆ ತಕ್ಷಣವೇ ಸ್ಪಂದಿಸುವ ನಗರಸಭಾ ಸದಸ್ಯೆ ಪ್ರೇಮಲತಾ ನಂದಿಲ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಮನೆ- ಮನೆ ಭೇಟಿ: ಕೊವೀಡ್ ನಿಯಂತ್ರಣಕ್ಕಾಗಿ ಸಮೀಕ್ಷೆ 
ಪುತ್ತೂರು: ಇಲ್ಲಿನ ವಾರ್ಡ್ ಸಂಖ್ಯೆ 14ರ ನಗರಸಭಾ ಸದಸ್ಯೆ ಪ್ರೇಮಲತಾ ನಂದಿಲ ರವರು ಲಾಕ್‌ಡೌನ್ ಸಂದರ್ಭದಲ್ಲಿ ತನ್ನ ವ್ಯಾಪ್ತಿಯಲ್ಲಿರುವ ಜನರ ಕುಂದುಕೊರತೆಗಳಿಗೆ ತಕ್ಷಣವೇ ಸ್ಪಂದಿಸಿ, ಅಗತ್ಯ ಸೌಕರ್ಯವನ್ನು ತಲುಪಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇವರ ಕಾರ್ಯಕ್ಕೆ ವಾರ್ಡ್ ನಿವಾಸಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. 
ಕೊರೋನಾ ನಿರ್ಮೂಲನೆಗಾಗಿ ವಾರ್ಡ್ನಲ್ಲಿ ಶ್ರಮ:
ನಗರಸಭಾ ಸದಸ್ಯೆ ಪ್ರೇಮಲತಾ ನಂದಿಲ ಸಾಂಕ್ರಾಮಿಕ ರೋಗ ಕೊರೋನಾದಿಂದ ಸಂಪೂರ್ಣ ಮುಕ್ತಕ್ಕಾಗಿ ವಾರ್ಡ್ ನಲ್ಲಿರುವ ಮನೆ-ಮನೆಗಳಿಗೆ ಭೇಟಿ ನೀಡಿ ಜನರಿಗೆ ಕೊರೋನಾ ತಡೆಗಟ್ಟುವ ಬಗ್ಗೆ ಜಾಗೃತಿಯನ್ನು ಮೂಡಿಸಿ, ಲಸಿಕೆ ಹಾಕಿಸಿಕೊಳ್ಳುವಂತೆ ಸಲಹೆ ನೀಡುತ್ತಿದ್ದಾರೆ. ಕೊರೋನಾ ಸೋಂಕಿತರು ಸಾರ್ವಜನಿಕವಾಗಿ ತಿರುಗಾಡದಂತೆ ಹೋಂ ಕ್ವಾರೆಂಟೈನ್ ಇರುವಂತೆಯೂ ಸೂಚಿಸಲಾಗುತ್ತಿದೆ. ಇತ್ತಿಚೀಗೆ ಹರಡುತ್ತಿರುವ ಡೆಂಗ್ಯೊ ರೋಗವನ್ನು ತಡೆಗಟ್ಟುವ ಸಲುವಾಗಿ ಹೆಚ್ಚಿನ ಕ್ರಮಕೈಗೊಳ್ಳಲಾಗುತ್ತಿದ್ದು, ವಾರ್ಡ್ನಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ ಎಂದು ನಗರಸಭಾ ಸದಸ್ಯೆ ಪ್ರೇಮಲತಾ ನಂದಿಲ ತಿಳಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.