ಉಪ್ಪಿನಂಗಡಿ ಪೊಲೀಸ್ ದೌರ್ಜನ್ಯ ಆರೋಪ: ವರ್ತಕರಿಂದ ಶಾಸಕರಿಗೆ ದೂರು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ ಪ್ರಬೋಷನರಿ ಸಬ್ ಇನ್ಸ್‌ಪೆಕ್ಟರ್ ವರ್ತಕರಿಗೆ ಎಸಗಿರುವ ದೌರ್ಜನ್ಯದ ವಿರುದ್ಧ ಹಿರಿಯ ಪೊಲೀಸ್ ಅಧಿಕಾರಿಗೆ ದೂರು ನೀಡಿರುವುದನ್ನು ಪ್ರಶ್ನಿಸಿ ದ್ವೇಷ ಸಾಧನೆಯಿಂದ ಆದ್ಯತಾ ಪಟ್ಟಿಯಲ್ಲಿರುವ ಮೊಬೈಲ್ ಸೇವಾ ಕೇಂದ್ರ ಕಚೇರಿಯನ್ನು ಮುಚ್ಚುವಂತೆ ಆದೇಶ ನೀಡಿ, ತೀರಾ ಅನುಚಿತವಾಗಿ ವರ್ತಿಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಶಾಂತ್ ಡಿ’ಕೋಸ್ತ ಶಾಸಕ ಸಂಜೀವ ಮಠಂದೂರುರವರಿಗೆ ದೂರು ನೀಡಿದ್ದಾರೆ.

“ನಾನು ಉಪ್ಪಿನಂಗಡಿಯಲ್ಲಿ ಖಾಸಗಿ ಸ್ವಾಮ್ಯದ ಟೆಲಿಕಾಂ ಸಂಸ್ಥೆಯ ಸೇವಾ ಕಚೇರಿಯನ್ನು ಹೊಂದಿದ್ದು, ಇದು ಆದ್ಯತಾ ಪಟ್ಟಿಯಲ್ಲಿ ಇದ್ದ ಕಾರಣ ಕಚೇರಿ ಬಾಗಿಲು ತೆಗೆದು ಸೇವೆ ಒದಗಿಸುತ್ತಿದೆ, ಇದನ್ನು ಆಕ್ಷೇಪಿಸುತ್ತಿರುವ ಪೊಲೀಸ್ ಅಧಿಕಾರಿ “ನೀವು ನನ್ನ ವಿರುದ್ಧ ಮೇಲಾಧಿಕಾರಿಗೆ ದೂರು ನೀಡಿದ್ದೀರಿ ಎಂದು ಅಸಂಬದ್ಧವಾಗಿ ಮಾತನಾಡಿ, ನಿಮ್ಮ ಕಚೇರಿಯನ್ನು ಮುಚ್ಚಬೇಕು” ಎಂದು ತಾಕೀತು ಮಾಡುತ್ತಿದ್ದಾರೆ. ಈ ಬಗ್ಗೆ ನನಗೆ ನ್ಯಾಯ ಒದಗಿಸಿಕೊಡಬೇಕು ಎಂದು ಶಾಸಕರನ್ನು ನಿವೇದಿಸಿದರು.

ಉಪ್ಪಿನಂಗಡಿ ಕೆಲವು ವರ್ತಕರಿಂದ ದಂಡ ವಸೂಲಿ ಮಾಡಿ ಅಕ್ರಮವಾಗಿ ವ್ಯಾಪಾರ ಮಾಡಲು ಅನುವು ಮಾಡಿಕೊಡುತ್ತಿದ್ದು, ಇನ್ನೂ ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇಲ್ಲಿನ ಪೊಲೀಸರು ಈ ರೀತಿಯಾಗಿ ತೀರಾ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ, ಈ ಬಗ್ಗೆ ಈ ಹಿಂದೆ ಹಿರಿಯ ಪೊಲೀಸ್ ಅಧಿಕಾರಿಗೆ ದೂರು ನೀಡಿರುವುದಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಅವರು ಶಾಸಕರಲ್ಲಿ ದೂರಿಕೊಂಡರು.

ಶಾಸಕರನ್ನು ಭೇಟಿ ಮಾಡಿದ ನಿಯೋಗದಲ್ಲಿ ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್‍ಯದರ್ಶಿ ಅಬ್ದುಲ್ ರಹಿಮಾನ್ ಯುನಿಕ್, ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಚಂದ್ರ ಮುಳಿಯ, ಉಪಾಧ್ಯಕ್ಷ ವಿನಾಯಕ ಪೈ, ಸದಸ್ಯ ಯು.ಟಿ. ತೌಸೀಫ್, ಸಿ.ಎ. ಬೇಂಕ್ ಉಪಾಧ್ಯಕ್ಷ ಸುನಿಲ್ ಕುಮಾರ್ ದಡ್ಡು, ಎನ್. ಉಮೇಶ್ ಶೆಣೈ ಉಪಸ್ಥಿತರಿದ್ದರು.

ಮೇಲಾಧಿಕಾರಿಗಳೊಂದಿಗೆ ಮಾತನಾಡುವೆ:
ವರ್ತಕ ದೂರು ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಸಂಜೀವ ಮಠಂದೂರು “ಈ ಬಗ್ಗೆ ಈಗಾಗಲೇ ಪತ್ರಿಕೆ ಮೂಲಕ ತಿಳಿದು ಕೊಂಡಿದ್ದೇನೆ, ಇದೆಲ್ಲ ಸರಿ ಅಲ್ಲ, ಈ ಬಗ್ಗೆ ಮೇಲಾಧಿಕಾರಿಗಳ ಜೊತೆ ಮಾತನಾಡುವುದಾಗಿ” ತಿಳಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.