ಉಪ್ಪಿನಂಗಡಿ ರೋಟರಿ ಕ್ಲಬ್ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕುಡಿಯುವ ನೀರಿನ ಘಟಕ ಕೊಡುಗೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಇಲ್ಲಿ ದಾಖಲಾಗುವ ಕೋವಿಡ್-೧೯ ಸಂತ್ರಸ್ಥರಿಗೆ ಉಪಯೋಗದ ಸಲುವಾಗಿ ಉಪ್ಪಿನಂಗಡಿ ರೋಟರಿ ಕ್ಲಬ್ ವತಿಯಿಂದ ಕೊಡ ಮಾಡಿದ ಕುಡಿಯುವ ನೀರಿನ ಘಟಕವನ್ನು ಜೂ. ೨ರಂದು ಆರೋಗ್ಯ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು.

ಶಾಸಕ ಸಂಜೀವ ಮಠಂದೂರು ಘಟಕವನ್ನು ಉದ್ಘಾಟಿಸಿ ಮಾತನಾಡಿ ಸರ್ಕಾರ ಬಹಳಷ್ಟು ಯೋಜನೆಗಳ ಮೂಲಕ ಸೌಲಭ್ಯಗಳನ್ನು ನೀಡುತ್ತಿದೆ, ಇದರ ಜೊತೆಗೆ ಕೆಲವೊಂದು ಸೌಕರ್ಯಗಳಿಗೆ ಸಂಘ ಸಂಸ್ಥೆಗಳ ಸಹಭಾಗಿತ್ವ ದೊರಕಿದಾಗ ಮಾತ್ರ ವ್ಯವಸ್ಥೆಗಳು ಪರಿಪೂರ್ಣ ಆಗಲು ಸಾಧ್ಯ ಎಂದ ಅವರು ರೋಟರಿ ಸಂಸ್ಥೆಯ ಸಮಾಜಮುಖಿ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್‍ಯಕ್ರಮದಲ್ಲಿ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ| ಮುಷಾಕಿರ್ ಹುಸೇನ್, ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಚಂದ್ರ ಮುಳಿಯ, ಉಪಾಧ್ಯಕ್ಷ ವಿನಾಯಕ ಪೈ, ಸದಸ್ಯ ಯು.ಟಿ. ತೌಸೀಫ್, ಸಿ.ಎ. ಬೇಂಕ್ ಉಪಾಧ್ಯಕ್ಷ ಸುನಿಲ್ ಕುಮಾರ್ ದಡ್ಡು, ರೋಟರಿ ಕ್ಲಬ್ ಮಾಜಿ ಅಧ್ಯಕ್ಷರುಗಳಾದ ಡಾ| ರಾಜಾರಾಮ್, ಅಜೀಜ್ ಬಸ್ತಿಕ್ಕಾರ್, ಚಂದಪ್ಪ ಮೂಲ್ಯ, ದಿವಾಕರ್ ಆಚಾರ್ಯ, ಸ್ಥಳೀಯ ಪ್ರಮುಖರಾದ ಎನ್. ಉಮೇಶ್ ಶೆಣೈ, ಜಯಂತ ಪೊರೋಳಿ ಮತ್ತಿತರರು ಉಪಸ್ಥಿತರಿದ್ದರು. ರೋಟರಿ ಕ್ಲಬ್ ಅಧ್ಯಕ್ಷ ರವೀಂದ್ರ ದರ್ಬೆ ಸ್ವಾಗತಿಸಿ, ಖಜಾಂಚಿ ಅಬ್ದುಲ್ ರಹಿಮಾನ್ ಯುನಿಕ್ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.