ವಳಾಲು ಮೊಹಿಯುದ್ದೀನ್ ಜುಮಾ ಮಸೀದಿ ಉಪಾಧ್ಯಕ್ಷ ಎಂ.ಅಬೂಬಕ್ಕರ್ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಬಜತ್ತೂರು ವಳಾಲು ಮೊಹಿಯುದ್ದೀನ್ ಜುಮಾ ಮಸೀದಿ ಉಪಾಧ್ಯಕ್ಷ, ಬಜತ್ತೂರು ಗ್ರಾಮದ ವಳಾಲು ಎಂಜಿರಡ್ಕ ನಿವಾಸಿ ಎಂ.ಅಬೂಬಕ್ಕರ್(೬೪ವ.)ರವರು ಅಲ್ಪಕಾಲದ ಅಸೌಖ್ಯದಿಂದ ಜೂ.೧ರಂದು ರಾತ್ರಿ ನಿಧನರಾಗಿದ್ದಾರೆ.

ಅಬೂಬಕ್ಕರ್‌ರವರು ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದು ಮಂಗಳೂರಿನ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದರು. ಜೂ.೧ರಂದು ರಾತ್ರಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು ಮನೆಯವರು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆತಂದರು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ವಳಾಲು ಮೊಹಿಯುದ್ದೀನ್ ಜುಮಾ ಮಸೀದಿಯ ಆಡಳಿತ ಸಮಿತಿಯಲ್ಲಿ ಕಳೆದ ೩೦ವರ್ಷಗಳಿಂದ ವಿವಿಧ ಜವಾಬ್ದಾರಿ ವಹಿಸಿಕೊಂಡು ಸೇವೆ ಸಲ್ಲಿಸಿದ್ದ ಅವರು ೩ ವರ್ಷ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ವಳಾಲು ಎಂಜಿರಡ್ಕದಲ್ಲಿ ಕಳೆದ ೪೦ ವರ್ಷಗಳಿಂದ ದಿನಸಿ ಅಂಗಡಿ ಹೊಂದಿದ್ದ ಇವರು ‘ಚೆಯ್ಯಾಕ’ ಎಂದೇ ಚಿರಪರಿಚಿತರಾಗಿದ್ದರು. ಮೃತರು ಪತ್ನಿ, ಐವರು ಪುತ್ರರು ಹಾಗೂ ಆರು ಮಂದಿ ಪುತ್ರಿಯರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.