ಲಾರಿ ಚಾಲಕನಿಗೆ ಹಲ್ಲೆ ನಡೆಸಿದ ತಂಡದಿಂದ ಪೊಲೀಸರ ಮೇಲೂ ಹಲ್ಲೆ ಪ್ರಕರಣ | ಇನ್ನೋರ್ವ ಆರೋಪಿಗಾಗಿ ಶೋಧ – ಎಸ್ಪಿ ಹೃಷಿಕೇಶ್ ಸೋನಾವಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿ ಪೆರಾಜೆಯಲ್ಲಿ ಲಾರಿ ಚಾಲಕನಿಗೆ ಹಲ್ಲೆ ನಡೆಸಿ ಕಾರಿನಲ್ಲಿ ಪರಾರಿಯಾದ ತಂಡವೊಂದು ಉಪ್ಪಿನಂಗಡಿ ನೆಕ್ಕಿಲಾಡಿ ಚೆಕ್‌ಪಾಯಿಂಟ್ ಪೊಲೀಸರಿಂದ ತಪ್ಪಿಸಿಕೊಂಡು ಕೆಮ್ಮಾಯಿಯಲ್ಲಿ ಪುತ್ತೂರು ಪೊಲೀಸರು ಬಂಧಿಸಲು ಮುಂದಾದ ವೇಳೆ ಮಾತಿನ ಚಕಮಕಿ ನಡೆಸಿದ ತಂಡ ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಸಂದರ್ಭ ಓರ್ವ ಆರೋಪಿ ತಲೆ ಮರೆಸಿಕೊಂಡಿದ್ದ ಆತನ ಶೋಧ ಕಾರ್ಯ ನಡೆಯುತ್ತಿದೆ ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಅವರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಜೂ.3ರಂದು ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆ ಮಾಡಲಾಗುತ್ತಿದೆ. ಉಳಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.