ಕಾವು ಸಮುದಾಯ ಭವನದಲ್ಲಿ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಅರಿಯಡ್ಕ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪುತ್ತೂರು ಇದರ ನೇತೃತ್ವದ ಕಾವು ಮತ್ತು ಮೇನಾಲ ಕ್ಲಸ್ಟರ್‌ಗೆ ಒಳಪಟ್ಟ ಶಾಲಾ ಶಿಕ್ಷಕರಿಂದ ನೆಟ್ಟಣಿಗೆ ಮೂಡ್ನೂರು, ಕೊಳ್ತಿಗೆ, ಬಡಗನ್ನೂರು ಮತ್ತು ಅರಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರನ್ನು ಅಭಿನಂದಿಸುವ ಕಾರ್ಯಕ್ರಮ ಜೂ.2ರಂದು ಕಾವು ಸಮುದಾಯ ಭವನದಲ್ಲಿ ನಡೆಯಿತು.


ಆಶಾ ಕಾರ್ಯಕರ್ತೆಯರಿಗೆ ಶಿಕ್ಷಕರು ಸಂಗ್ರಹಿಸಿದ ರೂ:60900ನ್ನು 29 ಆಶಾಕಾರ್ಯಕರ್ತೆಯರಿಗೆ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತಾಡಿದ ಶಾಸಕ ಸಂಜೀವ ಮಠಂದೂರುರವರು ಗುರುವಿನ ಸ್ಥಾನದಲ್ಲಿ ಸಮಾಜವನ್ನು ಮುನ್ನಡೆಸುವ ಶಿಕ್ಷಕರಿಂದ ಆಶಾಕಾರ್ಯಕರ್ತೆಯರ ಕಷ್ಟಗಳಿಗೆ ಸ್ಪಂದಿಸುವ ಕಾರ್ಯವಾಗಿರುವುದು ಶ್ಲಾಘನೀಯ. ಕೊರೋನಾ ವೈರಸ್‌ನಿಂದ ಕಂಗೆಟ್ಟಿರುವ ನಮ್ಮ ದೇಶವನ್ನು ಸರಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿದೆ. ಈ ವಿಪತ್ತಿನಿಂದ ಹೊರಬರಲು ಸಂಘ ಸಂಸ್ಥೆಗಳು ಅವಿರತ ಶ್ರಮವಹಿಸುತ್ತದೆ. ನಮ್ಮ ಆರೋಗ್ಯದ ಜೊತೆ ಸಮಾಜದ ಆರೋಗ್ಯ ಕೂಡ ಉತ್ತಮವಿರಬೇಕೆಂಬ ದೃಷ್ಟಿಯಲ್ಲಿ ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ. ಅವರ ಆರ್ಥಿಕ ಸ್ಥಿತಿಯ ಬಗ್ಗೆ ಕಾಳಜಿ ವಹಿಸಿದ ಶಿಕ್ಷಕರು ತಮ್ಮ ಸಂಬಳದ ಒಂದಿಷ್ಟು ಭಾಗವನ್ನು ಕಾರ್ಯಕರ್ತೆಯರಿಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಸರಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಕೆಲಸ ಮಾಡುತ್ತಿದೆ. ವೈದ್ಯಕೀಯ ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಿಗೂ ಮೂಲಭೂತ ಸೌಕರ‍್ಯವನ್ನು ಒದಗಿಸಿದೆ. ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಬೇಕಾದ ಜಾಗದ ವಿಸ್ತರಣೆ ಮಾಡಲಾಗಿದೆ. ಆಕ್ಸೀಜನ್ ಪ್ಲೆಂಟ್‌ಗೆ ಚಾಲನೆ ನೀಡಲಾಗಿದೆ. ಒಟ್ಟಿನಲ್ಲಿ ಕೋವಿಡ್ ಮುಕ್ತ ಸಮಾಜ ನಮ್ಮೆಲ್ಲರ ಗುರಿಯಾಗಬೇಕೆಂದು ಹೇಳಿದರು.

ತಾ.ಪಂನ ನಿಕಟಪೂರ್ವ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ ಶಿಕ್ಷಕರ ಸಂಘದ ವತಿಯಿಂದ ಆಶಾ ಕಾರ್ಯಕರ್ತೆಯರನ್ನು ಗೌರವಿಸುತ್ತಿರುವುದು ಸಮಾಜಕ್ಕೆ ಪ್ರೇರಣೆಯಾಗಲಿ, ಆಶಾ ಕಾರ್ಯಕರ್ತೆಯರು ಸಮಾಜದ ಆಶಾಕಿರಣ, ಇದೊಂದು ಉತ್ತಮ ಕಾರ್ಯಕ್ರಮ ಎಂದು ಶುಭ ಹಾರೈಸಿದರು. ಶ್ರೀರಾಮಕೃಷ್ಣ ಹೆಮ್ಮಕ್ಕಳ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ ಗಡಿ ಕಾಯುವ ಸೈನಿಕರು ಅತ್ಯಂತ ಶ್ರೇಷ್ಟ. ಕೊರೋನಾ ವೈರಸ್ ಹರಡಿರುವ ಈ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೇ ಸಮಾಜದ ರಕ್ಷಣೆ ಮಾಡುತ್ತಿರುವ ಆಶಾ ಕಾರ್ಯರ್ತೆಯರು ಕೂಡಾ ಸಮಾಜದಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ಕನಿಷ್ಟ ಗೌರವಧನ ಪಡೆದು ಗರಿಷ್ಟ ಸೇವೆಯನ್ನು ಕೊಡುವ ಆಶಾ ಕಾರ್ಯಕರ್ತೆಯರು ತಮ್ಮ ಕರ್ತವ್ಯಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಕರು ಸಮಾಜಕ್ಕೆ ಮಾದರಿ. ಅವರ ಸೇವೆ ಅನನ್ಯ. ಸೂಕ್ತ ವ್ಯಕ್ತಿಗಳಿಗೆ ಗೌರವಾರ್ಪಣೆ ಮಾಡುವ ಮೂಲಕ ಶಿಕ್ಷಕರು ಉತ್ತಮ ಸಂದೇಶ ನೀಡಿದ್ದಾರೆ ಎಂದು ಹಾರೈಸಿದರು.

ತಾ.ಪಂ ನಿಕಟ ಪೂರ್ವ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಮಾತನಾಡಿ ನಾಡಿನ ಜನರ ಆರೋಗ್ಯ ದೃಷ್ಟಿಯಿಂದ ತಾವೇ ಸೈನಿಕರಂತೆ ಆಶಾ ಕಾರ್ಯಕರ್ತೆಯರು ಸೇವೆ ಸಲ್ಲಿಸುತ್ತಿದ್ದು, ಸಮಾಜ ಸದಾ ನಿಮ್ಮೊಟ್ಟಿಗೆ ಇದೆ. ಸರಕಾರ ಹಾಗೂ ತಜ್ಞರು ಕೊಟ್ಟ ಸಲಹೆ ಸೂಚನೆಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಆಗ ಕೋವಿಡ್ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಅದೇ ರೀತಿ ಡೆಂಗ್ಯು ಪ್ರಕರಣಗಳು ಕೂಡಾ ಹೆಚ್ಚಾಗಿ ಕಂಡು ಬರುತ್ತಿದ್ದು, ಅದರ ಬಗ್ಗೆ ಕೂಡ ಎಚ್ಚರದಿಂದರಿಬೇಕೆಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ. ಮಾತನಾಡಿ ಸಮಾಜದಲ್ಲಿ ಎಲ್ಲರ ಪ್ರೀತಿ ಪಾತ್ರರು ಶಿಕ್ಷಕರು, ಆಶಾ ಕಾರ್ಯಕರ್ತೆಯನ್ನು ಗೌರವಿಸುವ ಮೂಲಕ ಸಮಾಜಮುಖಿ ಕೆಲಸ ಮಾಡುತ್ತಿರುವ ಬಗ್ಗೆ ನನಗೆ ಹೆಮ್ಮೆ ಇದೆ. ತಾಯಿ ಸ್ಥಾನದಲ್ಲಿ ನಿಂತು ಸೇವೆ ಮಾಡುತ್ತಿರುವ ಆಶಾ ಕಾರ್ಯಕರ್ತೆಯರ ಜೊತೆ ನಾವಿದ್ದೇವೆ ಎಂಬುದನ್ನು ಶಿಕ್ಷಕರು ತೋರಿಸಿ ಕೊಟ್ಟಿದ್ದಾರೆ. ಇಂದೊಂದು ಸಂತಸದ ದಿನ ಎಂದು ಹೇಳಿದರು.

ವೇದಿಕೆಯಲ್ಲಿ ನೆಟ್ಟಣಿಗೆ ಮೂಡ್ನೂರು ಗ್ರಾ.ಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ, ಬಡಗನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ, ಕೊಳ್ತಿಗೆ ಆರೋಗ್ಯ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಡಾ.ಶಮಿತ್ ಕುಮಾರ್ ಉಪಸ್ಥಿತರಿದ್ದರು. ಅರಿಯಡ್ಕ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯ ಸಭಾಧ್ಯಕ್ಷತೆ ವಹಿಸಿದ್ದರು.

ಅರಿಯಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಗ್ರಾ.ಪಂ ಸದಸ್ಯರಾದ ಲೋಕೇಶ್ ಚಾಕೋಟೆ, ಹರೀಶ್ ರೈ ಜಾರತ್ತಾರು, ಮೋನಪ್ಪ ಪೂಜಾರಿ ಕೆರೆಮಾರು, ವಿಜಿತ್ ಕಾವು, ಜಯಂತಿ ಪಟ್ಟುಮೂಲೆ, ವಿನೀತಾ ಮತ್ತು ಹೇಮಾವತಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘ ಪುತ್ತೂರು, ಘಟಕದ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಸ. ನೌಕರರ ಸಂಘದ ಶಿಕ್ಷಕ ಪ್ರತಿನಿಧಿ ತನುಜಾ, ಕಾವು-ಮೇನಾಲ ಕ್ಲಸ್ಟರ್‌ನ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ಬಳಗ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಲಕ್ಷ್ಮಣ ನಾಯ್ಕ್ ಪ್ರಾಸ್ತಾವಿಕ ಮಾತನಾಡಿದರು. ಕಾವು-ಮೇನಾಲ ಸಮೂಹ ಸಂಪನ್ಮೂಲ ವ್ಯಕ್ತಿ ಜಯಂತಿ ಸ್ವಾಗತಿಸಿ, ಕ.ರಾ.ಪ್ರಾ.ಶಿ.ಸಂಘ ಪುತ್ತೂರು ಇದರ ಪ್ರ.ಕಾರ್ಯದರ್ಶಿ ವೇದಾವತಿ ವಂದಿಸಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಲೆತ್ತೋಡಿ ಇದರ ಮುಖ್ಯಗುರು ತಿಮ್ಮಪ್ಪ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.