ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ತಾಲೂಕು ಅತಿಥಿ ಶಿಕ್ಷಕರ ಅಧ್ಯಕ್ಷೆಯಿಂದ ಸಂಕಷ್ಟ ನಿವೇದನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅತಿಥಿ ಶಿಕ್ಷಕರಿಗೆ ಗೌರವವಿಲ್ಲದೆ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಅತಿಥಿ ಶಿಕ್ಷಕರ ತಾಲೂಕು ಅಧ್ಯಕ್ಷರೂ ಮತ್ತು ಜಿಲ್ಲಾ ಸಂಘದ ಕಾರ್ಯದರ್ಶಿಯಾಗಿರುವ ಚಿತ್ರಕಲಾ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಲ್ಲಿ ತಮ್ಮ ಸಮಸ್ಯೆಗಳನ್ನು ನಿವೇದಿಸಿಕೊಂಡಿದ್ದಾರೆ.

ಪುತ್ತೂರು ತಾ.ಪಂ ಬಳಿ ಸಚಿವರನ್ನು ಭೇಟಿ ಮಾಡಿದ ಚಿತ್ರಕಲಾ ಅವರು ಶಿಕ್ಷಕರ ಸಮಸ್ಯೆಗಳ ಕುರಿತು ಹಲವು ವರ್ಷಗಳಿಂದ ಸಂಘದ ಮೂಲಕ ಹೋರಾಟ ಮಾಡುತ್ತಾ ಬಂದಿದ್ದೇನೆ. ಕಳೆದ ೧೫ ತಿಂಗಳಿನಿಂದ ಲಾಕ್ ಡೌನ್ ಪರಿಣಾಮ ಕೆಲಸವಿಲ್ಲದೆ ಇತ್ತ ಸರಕಾರ ನೀಡುತ್ತಿರುವ ಗೌರವಧನವೂ ಇಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ವಿಚಾರವನ್ನು ಸಚಿವರಲ್ಲಿ ಪ್ರಸ್ತಾಪಿಸಿರು. ಸಚಿವರು ಮಾತನಾಡಿ ಈ ಕುರಿತು ಮುಖ್ಯಮಂತ್ರಿಗಳಲ್ಲಿ ಅತಿಥಿ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಮನವಿ ಮಾಡಲಾಗಿದೆ. ವಿಶೇಷ ಪ್ಯಾಕೇಜ್‌ನ್ನು ಮುಖ್ಯಮಂತ್ರಿಗಳು ಘೋಷಣೆ ಮಾಡಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.