ಎಂಆರ್‌ಪಿಎಲ್ ನೇಮಕಾತಿಯಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಅನ್ಯಾಯ – ನೆಲ್ಯಾಡಿಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಇತ್ತೀಚೆಗೆ ಎಂಆರ್‌ಪಿಎಲ್‌ನಲ್ಲಿ ನಡೆದ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ವೇಳೆ ಕರ್ನಾಟಕ ಹಾಗೂ ದ.ಕ.ಜಿಲ್ಲೆಯ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಜೂ.5ರಂದು ಬೆಳಿಗ್ಗೆ ನೆಲ್ಯಾಡಿಯಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಸಹಕಾರದೊಂದಿಗೆ ಕಡಬ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ನೆಲ್ಯಾಡಿ ಪೇಟೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿ ಎಂಆರ್‌ಪಿಎಲ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿಯವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಸೌಲಭ್ಯ ಪಡೆದುಕೊಂಡಿರುವ ಎಂಆರ್‌ಪಿಎಲ್ ಇತ್ತೀಚೆಗೆ ನಡೆದ 200 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕರ್ನಾಟಕ ಹಾಗೂ ದ.ಕ.ಜಿಲ್ಲೆಯ ಅಭ್ಯರ್ಥಿಗಳನ್ನು ಕಡೆಗಣಿಸುವ ಮೂಲಕ ಜಿಲ್ಲೆಗೆ ಅನ್ಯಾಯವೆಸಗಿದೆ. ಎಂಆರ್‌ಪಿಎಲ್ ತುಳುನಾಡಿನ ಜನತೆಗೆ ಉದ್ಯೋಗ ನೀಡದೆ ಮೋಸ ಮಾಡಿದೆ. ಎಂಆರ್‌ಪಿಎಲ್ ಈ ಹಿಂದೆ ನಡೆದ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಿ ಜಿಲ್ಲೆಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಿ ನೇಮಕಾತಿ ಮಾಡಿಕೊಳ್ಳಬೇಕೆಂದು ಆಗ್ರಹಿಸಿದರು. ಜಿ.ಪಂ.ಸದಸ್ಯರಾದ ಸರ್ವೋತ್ತಮ ಗೌಡ, ಪಿ.ಪಿ.ವರ್ಗೀಸ್‌ರವರು ಮಾತನಾಡಿ ಎಂಆರ್‌ಪಿಎಲ್‌ನ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು. ಕೆಪಿಸಿಸಿ ಸದಸ್ಯ ಕೆ.ಪಿ.ತೋಮಸ್, ತಾ.ಪಂ.ಸದಸ್ಯೆ ಉಷಾ ಅ೦ಚನ್, ನೆಲ್ಯಾಡಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ರಝೀನ್, ನೆಲ್ಯಾಡಿ ಗ್ರಾ.ಪಂ.ಸದಸ್ಯರಾದ ಮೊಹಮ್ಮದ್ ಇಕ್ಬಾಲ್, ಉಷಾ ಜೋಯಿ, ರೇಷ್ಮಾಶಶಿ, ಯಾಕೂಬ್ ಸಲಾಂ, ಕೌಕ್ರಾಡಿ ಗ್ರಾ.ಪಂ.ಸದಸ್ಯ ಹನೀಫ್ ಕರಾವಳಿ, ಪಕ್ಷದ ಮುಖಂಡ ಜೋಸ್ ಕೆ.ಜೆ.ಮಾತಾ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ.,ಸ್ವಾಗತಿಸಿ, ನಿರೂಪಿಸಿದರು. ಯುವ ಕಾಂಗ್ರೆಸ್ ಮುಖಂಡ ಕೆ.ಕೆ.ಇಸ್ಮಾಯಿಲ್ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.