ಕಾಂಗ್ರೆಸ್‌ನಿಂದ ಆಶಾ ಕಾರ್ಯಕರ್ತೆಯರಿಗೆ ಆಹಾರದ ಕಿಟ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಸರಕಾರಿ ಆಸ್ಪತ್ರೆ, ಪೊಲೀಸರಿಗೆ ಸ್ಯಾನಿಟೈಸರ್, ಮಾಸ್ಕ್ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು; ಪುತ್ತೂರು ನಗರ ಕಾಂಗ್ರೆಸ್ ಸಮಿತಿಯಿಂದ ನಗರಸಭಾ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ಆಹಾರದ ಕಿಟ್, ನಗರ ಪ್ರಾಥಮಿಕ ಆರೋಗ್ಯ ಕೆಂದ್ರದ ಕೊರೋನಾ ವಾರಿಯರ್ಸ್‌ಗೆ ಮಾಸ್ಕ್, ಜಿಲ್ಲಾ ಕಾಂಗ್ರೆಸ್ ಸಹಕಾರಿ ಘಟಕದ ವತಿಯಿಂದ ಸರಕಾರಿ ಆಸ್ಪತ್ರೆ ಹಾಗೂ ಪೊಲೀಸರಿಗೆ ಮಾಸ್ಕ್ ವಿತರಣೆಯು ಜೂ.5ರಂದು ನಡೆಯಿತು.

ನಗರ ಕಾಂಗ್ರೆಸ್‌ನಿಂದ ಆಶಾ ಕಾರ್ಯಕರ್ತೆಯರಿಗೆ ಆಹಾರ್ ಕಿಟ್ ಹಾಗೂ ಕೊರೋನಾ ವಾರಿಯರ್‍ಸ್‌ಗೆ ಮಾಸ್ಕ್‌ನ್ನು ನೆಲ್ಲಿಕಟ್ಟೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಕಿಟ್ ವಿತರಿಸಿದರು. ಬಳಿಕ ಮಾತನಾಡಿದ ಅವರು, ಕೊರೋನಾ ಸೋಂಕಿನ ವಿರುದ್ದ ಸಮಾಜದ ಪ್ರತಿಯೊಬ್ಬರನ್ನು ತಮ್ಮ ಬಂಧುಗಳು ಎಂಬ ಭಾವನೆಯಿಂದ ಪ್ರತಿ ಮನೆಗಳಿಗೆ ತೆರಳಿ ಅವರ ಆರೋಗ್ಯ ರಕ್ಷಣೆ ಮಾಡುತ್ತಿರುವ ಆಶಾ ಕಾರ್ಯಕರ್ತೆಯರ ಸೇವೆ ಬಹುಮುಖ್ಯವಾದುದು. ತಮಗೆ ಪಾಸಿಟಿವ್ ಬಂದರೂ ಸಮಾಜ ಜನರ ಕಾಳಜಿಯಿಂದ ಜನರ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಆಶಾ ಕಾರ್ಯಕರ್ತೆಯರಿಗೆ ಕಾಂಗ್ರೆಸ್ ಪಕ್ಷದಿಂದ ಸಹಕಾರ ನೀಡಲಾಗುತ್ತಿದೆ. ಕೊರೋನಾ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಸೇವೆಯನ್ನು ಸರಕಾರ ಗುರುತಿಸಿ, ಗೌರವಿಸಿ ಗೌರವ ಧನ ಹೆಚ್ಚಿಸಲಿ ಎಂದು ಹೇಳಿದರು.

ಡಿವೈಎಸ್ಪಿ ಕಚೇರಿಗೆ ಮಾಸ್ಕ್ ವಿತರಣೆ
ಸರಕಾರಿ ಆಸ್ಪತ್ರೆ

ನಗರದ ೨೧ ಮಂದಿ ಆಶಾ ಕಾರ್ಯಕರ್ತೆಯರಿಗೆ ಆಹಾರದ ಕಿಟ್ ವಿತರಿಸಿದರು. ಬಳಿಕ ಜಿಲ್ಲಾ ಕಾಂಗ್ರೆಸ್ ಸಹಕಾರಿ ಘಟಕದಿಂದ ಕೊಡುಗೆಯಾಗಿ ನೀಡಿದ ಮಾಸ್ಕ್ ಹಾಗೂ ಸ್ಯಾನಿಟೈಸರ್‌ನ್ನು ಡಿವೈಎಸ್‌ಪಿ ಕಚೇರಿ, ಸರಕಾರಿ ಆಸ್ಪತ್ರೆ, ಮಹಿಳಾ ಠಾಣೆ, ನಗರ ಶಾಣೆ, ಸಂಚಾರಿ ಠಾಣೆ ಹಾಗೂ ಪುತ್ತೂರು ಗ್ರಾಮಾಂತರ ಠಾಣೆಗಳಿಗೆ ತೆರಳಿ ವಿತರಿಸಿದರು.

ಡಿವೈಎಸ್ಪಿ ಕಚೇರಿಯಲ್ಲಿ ಸಿಬಂದಿಗಳಿಗೆ, ಸರಕಾರಿ ಆಸ್ಪತ್ರೆಯಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ, ಮಹಿಳಾ ಠಾಣಾ ಇನ್ಸ್‌ಪೆಕ್ಟರ್ ತಿಮ್ಮಪ್ಪ ನಾಯ್ಕ್, ನಗರ ಠಾಣಾ ಇನ್ಸ್‌ಪೆಕ್ಟರ್ ಗೋಪಾಲ್ ನಾಯ್ಕ್, ಸಂಚಾರಿ ಠಾಣಾ ಎಸ್.ಐ ರಾಮ ನಾಯ್ಕ್ ಹಾಗೂ ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ ಉದಯ ರವಿಯವರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್‌ನ್ನು ಹಸ್ತಾಂತರಿಸಿದರು. ಒಟ್ಟು ೩೦೦ ಎನ್ ೯೫ ಮಾಸ್ಕ್ ಹಾಗೂ ೩೦೦ ಸ್ಯಾನಿಟೈಸರ್‌ನ್ನು ವಿತರಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ., ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷ ಮುರಳಿಧರ ರೈ ಮಠಂತಬೆಟ್ಟು, ನಗರ ಸಭಾ ಸದಸ್ಯೆ ಶೈಲಾ ಪೈ, ಮಹಮ್ಮದ್ ರಿಯಾಝ್, ಮಾಜಿ ಸದಸ್ಯ ಮುಖೇಶ್ ಕೆಮ್ಮಿಂಜೆ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಚಾಲಕ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಎಪಿಎಂಸಿ ಸದಸ್ಯ ಶಕೂರ್ ಹಾಜಿ, ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಶಿವರಾಮ ಆಳ್ವ, ನ್ಯಾಯವಾದಿ ಸಾಹಿರಾ ಝುಬೈರ್, ಪೂರ್ಣೇಶ್ ಕುಮಾರ್, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.