ಬಜತ್ತೂರು ಗ್ರಾ.ಪಂ.ಸಾಮಾನ್ಯ ಸಭೆ: ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಬಗೆಹರಿಸಲು ಡಿ.ಸಿ.ಗೆ ಬರೆಯಲು ನಿರ್ಣಯ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಬಜತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಬಗೆಹರಿಸುವ ಸಂಬಂಧ ಜಿಲ್ಲಾಧಿಕಾರಿಯವರಿಗೆ ಬರೆಯಲು ಬಜತ್ತೂರು ಗ್ರಾ.ಪಂ.ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಸಭೆ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಪ್ರೇಮಾರವರ ಅಧ್ಯಕ್ಷತೆಯಲ್ಲಿ ಜೂ.೩ರಂದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದ ಸದಸ್ಯರು, ಮೊಬೈಲ್ ನೆಟ್‌ವರ್ಕ್ ಸಮಸ್ಯೆಯಿಂದಾಗಿ ತೀವ್ರ ಸಮಸ್ಯೆಯಾಗಿದೆ. ಲಾಕ್‌ಡೌನ್‌ನಿಂದಾಗಿ ಬಹುತೇಕ ಮಂದಿ ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದಾರೆ. ಇಂತವರಿಗೆ ಮೊಬೈಲ್ ನೆಟ್ ವರ್ಕ್ ಸಮಸ್ಯೆಯಿಂದಾಗಿ ಮನೆಯಿಂದಲೇ ಕೆಲಸ ನಿರ್ವಹಿಸಲು ತೊಂದರೆಯಾಗುತ್ತಿದೆ. ಅಲ್ಲದೇ ಶಾಲಾ ವಿದ್ಯಾರ್ಥಿಗಳಿಗೂ ಆನ್‌ಲೈನ್ ತರಗತಿಗಳು ನಡೆಯುತ್ತಿದ್ದು ನೆಟ್‌ವರ್ಕ್ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳಿಗೂ ತೊಂದರೆಯಾಗಿದೆ. ಆದ್ದರಿಂದ ಗ್ರಾಮದಲ್ಲಿನ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಶೀಘ್ರ ಬಗೆಹರಿಸುವಂತೆ ಜಿಲ್ಲಾಧಿಕಾರಿಯವರಿಗೆ ಬರೆಯಲು ನಿರ್ಣಯಿಸಲಾಯಿತು.

ವಿದ್ಯುತ್ ಸಮಸ್ಯೆ ಬಗ್ಗೆ ಚರ್ಚೆ:
ಬಾರಿಕೆ ಎಂಬಲ್ಲಿ ಜೋತು ಬಿದ್ದಿರುವ ವಿದ್ಯುತ್ ತಂತಿ ಸರಿಪಡಿಸುವುದು, ಸುದೆಕ್ಕಡ ಎಂಬಲ್ಲಿ ಹೆಚ್.ಟಿ.ಲೈನ್ ಸರಿಪಡಿಸುವುದು, ಗ್ರಾಮಕರಣಿಕರ ಕಚೇರಿ ಬಳಿ ವಿದ್ಯುತ್ ಕಂಬ ಅಳವಡಿಕೆಗೆ ಮೆಸ್ಕಾಂ ಇಲಾಖೆಗೆ ಮನವಿ ಮಾಡಲು ನಿರ್ಣಯಿಸಲಾಯಿತು. ಗ್ರಾಮ ಪಂಚಾಯತ್‌ನ ೨೦೨೧-೨೨ನೇ ಸಾಲಿನ ೧೫ನೇ ಹಣಕಾಸು ಮತ್ತು ನಿಧಿ-೨ರ ಅನುದಾನದ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಿಸಲಾಯಿತು.

ಉಪಾಧ್ಯಕ್ಷೆ ಶ್ರೀಮತಿ ಸ್ಮಿತಾ, ಸದಸ್ಯರುಗಳಾದ ಸಂತೋಷ್‌ಕುಮಾರ್ ಪಿ., ಗಂಗಾಧರ ಪಿ.ಎನ್., ಉಮೇಶ್ ಓಡ್ರಪಾಲು, ಅರ್ಪಿತಾ ಎಸ್.ಎನ್., ಪ್ರೆಸಿಲ್ಲಾ ಡಿ.ಸೋಜ, ವಿಮಲ, ರತ್ನ ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು. ಪಿಡಿಒ ಪ್ರವೀಣ್‌ಕುಮಾರ್ ಸ್ವಾಗತಿಸಿ, ಜಮಾಖರ್ಚಿನ ವಿವರ, ಸರಕಾರದ ಸುತ್ತೋಲೆ, ಸಾರ್ವಜನಿಕ ಅರ್ಜಿಗಳನ್ನು ಸಭೆಗೆ ಮಂಡಿಸಿದರು. ಕಾರ್ಯದರ್ಶಿ ಗಿರಿಯಪ್ಪ ಗೌಡ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.