ಮಾನವೀಯತೆ ಮೆರೆದ ಉದ್ಯಮಿ ಸಹಜ್ ರೈ ಬಳಜ್ಜ 100 ಕುಟುಂಬಗಳಿಗೆ ಅಹಾರ ಸಾಮಾಗ್ರಿಗಳ ಕಿಟ್ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಈಶ್ವರಮಂಗಲ: ಕೊರೋನಾ ವೈರಸ್ ಹರಡುವುದನ್ನು ತಡೆಯುವುದಕ್ಕಾಗಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಹಲವಾರು ಕುಟುಂಬಗಳು ಸಂಕಷ್ಟ ಅನುಭವಿಸುತ್ತಿದ್ದು ಅಂತಹ ಅರ್ಹ ಕುಟುಂಬಗಳಿಗೆ ಬಿಜೆಪಿ ಯುವ ಮೋರ್ಛಾ ಜಿಲ್ಲಾ ಉಪಾಧ್ಯಕ್ಷ, ಉದ್ಯಮಿ ಸಹಜ್ ರೈ ಬಳಜ್ಜರವರು ಆಹಾರ ಕಿಟ್ ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ನೆಟ್ಟಣಿಗೆ ಮುಡ್ನೂರು ಗ್ರಾಪಂ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ದಿನ ಬಳಕೆಯ ಅಗತ್ಯ ಆಹಾರದ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಜೂ.5 ರಂದು ಈಶ್ವರಮಂಗಲ ಮೇನಾಲ ಜಯಹರಿ ಫ್ಯೂಯಲ್ ಸ್ಟೇಶನ್ ನಲ್ಲಿ ನಡೆಯಿತು.

ಶಾಸಕ ಸಂಜೀವ ಮಠಂದೂರು ಅವರು ಫಲಾನುಭವಿಗಳಿಗೆ ಸಾಂಕೇತಿಕವಾಗಿ ಆಹಾರದ ಕಿಟ್ನ್ನು ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಶಾಸಕರು, ಸಹಜ್‌ರವರು ತನ್ನ ಉದ್ಯಮ ಕ್ಷೇತ್ರವಾದ ಈಶ್ವರಮಂಗಲದ ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದು ಶ್ಲಾಘನೀಯ. ಕೋವಿಡ್‌ನ ಸಂಕಷ್ಟದ ಸಮಯದಲ್ಲಿ ಅರ್ಹ ಬಡಕುಟುಂಬಗಳನ್ನು ಗುರುತಿಸಿ ಅಗತ್ಯ ಆಹಾರ ಸಾಮಾಗ್ರಿಯ ಕಿಟ್‌ನ್ನು ನೀಡಿರುವುದು ಒಂದು ಒಳ್ಳೆಯ ಸಂದೇಶವನ್ನು ಸಮಾಜಕ್ಕೆ ನೀಡಿದೆ. ಇಂದಿನ ದಿನದಲ್ಲಿ ರಾಷ್ಟ್ರೀಯ ಆರೋಗ್ಯ ವಿಪತ್ತು ಉಂಟಾಗಿದೆ. ಜನರ ಬದುಕು ಬರ್ಬರ ಆಗುವ ಸಂದರ್ಭದಲ್ಲಿ ಜನರಿಗೆ ಬದುಕು ನೀಡುವ ಕೆಲಸ ಸರಕಾರದಿಂದ ಆಗುತ್ತಿದೆ. ಇದರೊಂದಿಗೆ ಸ್ಥಳೀಯ ದಾನಿಗಳು, ಉದ್ಯಮಿಗಳು, ಸಂಘ ಸಂಸ್ಥೆಗಳು ಕೂಡ ಬಡ ಜನರನ್ನು ಗುರುತಿಸಿ ಸರಕಾರದೊಂದಿಗೆ ನಾವು ಕೂಡ ಇದ್ದೇವೆ ಎಂಬ ನಿಟ್ಟಿನಲ್ಲಿ ಸಹಾಯ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ, ಉಪಾಧ್ಯಕ್ಷ ಫೌಝಿಯಾ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಕೃಷ್ಣ ರೈ, ತಾಲೂಕು ಸ್ಥಾಯಿ ಸಮಿತಿ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಈಶ್ವರಮಂಗಲ ಹೋರ ಠಾಣೆಯ ಎ ಎಸ್ ಐ ತಿಮ್ಮಯ್ಯ ಗೌಡ, ಕಾವು ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕಿ ಮೋಹನಾಂಗಿ ಕೆ.ಬಿ, ನೆಟ್ಟಣಿಗೆ ಮುಡ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಅಮರನಾಥ ಆಳ್ವ, ಗ್ರಾಪಂ ಸದಸ್ಯರು, ಬಿಜೆಪಿ ಕಾರ್ರ್‍ಅಕರ್ತರು ಉಪಸ್ಥಿತರಿದ್ದರು. ಮಾಜಿ ಗ್ರಾಪಂ ಸದಸ್ಯ ಅಬ್ದುಲ್ ಖಾದರ್ ಸ್ವಾಗತಿಸಿ, ಬಿಜೆಪಿ ಜಿಲ್ಲಾ ರೈತಾ ಮೋರ್ಛಾ ಸದಸ್ಯ ರಾಜೇಂದ್ರ ಪ್ರಸಾದ್ ಮೇನಾಲ ವಂದಿಸಿದರು. ಜಯಹರಿ ಫ್ಯೂಯೆಲ್ ಸ್ಟೇಶನ್ ಸಿಬ್ಬಂದಿ ವರ್ಗ ಸಹಕರಿಸಿದರು.

ನೆಟ್ಟಣಿಗೆ ಮುಡ್ನೂರು ಗ್ರಾಪಂ ವ್ಯಾಪ್ತಿಯ ಬಡ 100 ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ ಮಾಡಲಾಗಿದೆ. ಕೋವಿಡ್‌ನ ಸಂಕಷ್ಟದ ಸಮಯದಲ್ಲಿ ಯಾರೂ ಕೂಡ ಆಹಾರದ ಕೊರತೆಯಿಂದ ಇರಬಾರದು ಎಂಬ ಉದ್ದೇಶದಲ್ಲಿ ಈ ಅಳಿಲು ಸೇವೆಯನ್ನು ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿಗೆ ಆಹಾರದ ಕಿಟ್ ಕೊಡುವ ಉದ್ದೇಶ ಇದೆ. ಎಲ್ಲರ ಸಹಕಾರ ಅಗತ್ಯ.
ಸಹಜ್ ರೈ ಬಳಜ್ಜ, ಬಿಜೆಪಿ ಯುವ ಮೋರ್ಛಾ ಜಿಲ್ಲಾ ಉಪಾಧ್ಯಕ್ಷರು

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.