ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ ಆರೋಗ್ಯ ಕೇಂದ್ರದ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಚಿತ್ರ: ಯೂಸುಫ್ ರೆಂಜಲಾಡಿ

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜೂ.5ರಂದು ಭೇಟಿ ನೀಡಿ ಆಸ್ಪತ್ರೆ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿ ಮಾಹಿತಿ ಪಡೆದುಕೊಂಡರು. ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಕೊಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಹಾಗೂ ಆಸ್ಪತ್ರೆ ವ್ಯಾಪ್ತಿಯಲ್ಲಿ ಕೋವಿಡ್‌ಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಮಿತಾ ನಾಯ್ಕ್ ಅವರಿಂದ ಮಾಹಿತಿ ಪಡೆದುಕೊಂಡರು. ಆಸ್ಪತ್ರೆಯ ಪ್ರತೀ ಕೋಣೆಗಳನ್ನು ಶಾಸಕರು ವೀಕ್ಷಣೆ ಮಾಡಿದರು. ಆಸ್ಪತ್ರೆಗೆ ಬೇಕಾಗಿರುವ ಮೂಲಭೂತ ಅವಶ್ಯಕತೆಗಳ ಪಟ್ಟಿಯನ್ನು ಸಲ್ಲಿಸುವಂತೆ ತಿಳಿಸಿದ ಶಾಸಕರು ಮುಂಡೂರು ಹಾಗೂ ನರಿಮೊಗರು ಪ್ರಾ.ಕೃ.ಪ.ಸಹಕಾರಿ ಸಂಘದ ಮೂಲಕ ಅಗತ್ಯ ಬೇಡಿಕೆ ಈಡೇರಿಸಲಾಗುವುದು ಎಂದು ಹೇಳಿದರು.

ಸ್ಥಳದಲ್ಲಿದ್ದ ನರಿಮೊಗರು ಪ್ರಾ.ಕೃ.ಪ.ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕರ ಆಚಾರ್‌ರವರೊಂದಿಗೆ ನೀರಿನ ಗೀಸರ್ ಹಾಗೂ ಇನ್ನಿತರ ಅವಶ್ಯಕತೆಗಳ ಪೂರೈಕೆ ಬಗ್ಗೆ ಶಾಸಕರು ಮಾತನಾಡಿದರು. ಆಸ್ಪತ್ರೆಯ ಫಾರ್ಮಿಸಿ ಅಧಿಕಾರಿ ಸುನಿಲ್ ವಿ ಉಪಸ್ಥಿತರಿದ್ದರು. ತಾ.ಪಂ ಸ್ಥಾಯೀ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಶಾಸಕರ ಜೊತೆಗಿದ್ದರು.

ಸ್ಟಾಫ್ ನರ್ಸ್ ಬೇಡಿಕೆ:
ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಕೊರತೆ ಇರುವ ಬಗ್ಗೆ ಡಾ.ನಮಿತಾ ನಾಯ್ಕ್‌ರವರು ಇದೇ ಸಂದರ್ಭದಲ್ಲಿ ಶಾಸಕರ ಗಮನಕ್ಕೆ ತಂದರು. ಈ ಬಗ್ಗೆ ಮುಂದಿನ ದಿನಗಳಲ್ಲಿ ಸ್ಟಾಫ್ ನರ್ಸ್ ಬೇಡಿಕೆ ಈಡೇರಿಸಲು ಪ್ರಯತ್ನಿಸುವುದಾಗಿ ಶಾಸಕರು ಹೇಳಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.